2ನೇ ಪುಣ್ಯತಿಥಿ, ಅಟಲ್ ಬಿಹಾರಿ ವಾಜಪೇಯಿ ನೆನೆದ ಮೋದಿ
ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 2ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ, ರಕ್ಷಣಾ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಗಣ್ಯರು ‘ಸದೈವ್ ಅಟಲ್’ ಸ್ಮೃತಿ ಸ್ಥಳಕ್ಕೆ ತೆರಳಿ ಪುಷ್ಪನಮನ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇಶದ ಅಭಿವೃದ್ಧಿಗೆ ಅವರು ಸಲ್ಲಿಸಿದ ಸೇವೆ ನೆನಪಿನಲ್ಲಿರುತ್ತೆ ಎಂದು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಹೇಳಿದ್ರು. ಭಾರತ ರತ್ನ ಪುರಸ್ಕೃತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ […]
ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 2ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ, ರಕ್ಷಣಾ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಗಣ್ಯರು ‘ಸದೈವ್ ಅಟಲ್’ ಸ್ಮೃತಿ ಸ್ಥಳಕ್ಕೆ ತೆರಳಿ ಪುಷ್ಪನಮನ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇಶದ ಅಭಿವೃದ್ಧಿಗೆ ಅವರು ಸಲ್ಲಿಸಿದ ಸೇವೆ ನೆನಪಿನಲ್ಲಿರುತ್ತೆ ಎಂದು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಹೇಳಿದ್ರು.
ಭಾರತ ರತ್ನ ಪುರಸ್ಕೃತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16, 2018ರಂದು ತಮ್ಮ 93 ವಯಸ್ಸಿನಸ್ಸಿ ನಿಧನರಾದ್ರು. ಅವರ ಚಿತಾಭಸ್ಮವನ್ನು ದೇಶದ 100 ನದಿಗಳಲ್ಲಿ ವಿಸರ್ಜಿಸಲಾಗಿತ್ತು.