ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬನ್ಸ್ವಾರನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜೈಪುರ: ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬನ್ಸ್ವಾರನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಹಿರಿಯ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಹೊಗಳಿದರು. ಪ್ರಧಾನಿಯವರು ಅವರನ್ನು ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರು ಮತ್ತು ಅನುಭವಿ ರಾಜಕಾರಣಿ ಎಂದು ಶ್ಲಾಘಿಸಿದರು.
ಅಶೋಕ್ ಗೆಹ್ಲೋಟ್ ಮತ್ತು ನಾನು ಮುಖ್ಯಮಂತ್ರಿಯಾಗಿದ್ದಾಗ (ಗುಜರಾತ್) ಒಟ್ಟಿಗೆ ಕೆಲಸ ಮಾಡಿದ್ದೆವು. ಮುಖ್ಯಮಂತ್ರಿಗಳ ಪಟ್ಟಿಗಳಲ್ಲಿ ಅವರು ಅತ್ಯಂತ ಹಿರಿಯರು. ಇದೀಗ ನನ್ನ ಜೊತೆಗೆ ವೇದಿಕೆಯಲ್ಲಿ ಕುಳಿತಿರುವವರಲ್ಲಿ ಅಶೋಕ್ ಜಿ ಅವರು ಅತ್ಯಂತ ಹಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎಂದು ರಾಜಸ್ಥಾನದ ಬನ್ಸ್ವಾರದಲ್ಲಿ ಮಂಗರ್ ಧಾಮ್ ಕಿ ಗೌರವ್ ಗಾಥಾದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯದ ನಂತರ ಬುಡಕಟ್ಟು ಸಮುದಾಯಗಳ ಹೋರಾಟ ಮತ್ತು ತ್ಯಾಗಕ್ಕೆ ಸರಿಯಾದ ಸ್ಥಾನ ಸಿಗಲಿಲ್ಲ ಎಂದು ವಿಷಾದಿಸಿದರು. ಇಂದು, ದೇಶವು ದಶಕಗಳ ಹಿಂದಿನ ತಪ್ಪನ್ನು ಸರಿಪಡಿಸುತ್ತಿದೆ. ಬುಡಕಟ್ಟು ಸಮುದಾಯವಿಲ್ಲದೆ ಭಾರತದ ಭೂತ, ವರ್ತಮಾನ ಮತ್ತು ಭವಿಷ್ಯವು ಪೂರ್ಣಗೊಳ್ಳುವುದಿಲ್ಲ ಎಂದು ಪ್ರಧಾನಿ ಬನ್ಸ್ವಾರದಲ್ಲಿ ಹೇಳಿದರು. ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರತಿ ಹೆಜ್ಜೆ, ಇತಿಹಾಸದ ಪುಟಗಳು ಬುಡಕಟ್ಟು ಶೌರ್ಯದಿಂದ ತುಂಬಿವೆ ಎಂದು ಪ್ರಧಾನಿ ಹೇಳಿದರು.
The struggle & sacrifice of tribal community didn't get their rightful place in history written after independence. Today, the country is rectifying that decades-old mistake. India's past, present & future is not complete without the tribal community: PM in Banswara, Rajasthan pic.twitter.com/wp3ieOJxrQ
— ANI (@ANI) November 1, 2022
ನಂತರಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಗೆಹ್ಲೋಟ್, ಪ್ರಜಾಪ್ರಭುತ್ವವು ಆಳವಾಗಿ ಬೇರೂರಿರುವ ದೇಶದ ಪ್ರಧಾನಿಯಾಗಿರುವುದರಿಂದ ಪ್ರಧಾನಿ ಮೋದಿ ಜಾಗತಿಕವಾಗಿ ಗೌರವವನ್ನು ಪಡೆಯುತ್ತಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ವಿದೇಶಕ್ಕೆ ಹೋದಾಗ ಅವರಿಗೆ ಮಹತ್ವದ ಗೌರವ ಸಿಗುತ್ತದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಏಕೆಂದರೆ ಅವರು ಗಾಂಧಿ ರಾಷ್ಟ್ರದ ಪ್ರಧಾನಿಯಾಗಿದ್ದಾರೆ, ಅಲ್ಲಿ ಪ್ರಜಾಪ್ರಭುತ್ವವು ಆಳವಾಗಿ ಬೇರೂರಿದೆ. ಜಗತ್ತು ಇದನ್ನು ಅರಿತುಕೊಂಡಾಗ, ಆ ದೇಶದ ಪ್ರಧಾನಿ ತಮ್ಮ ಬಳಿಗೆ ಬರುತ್ತಿದ್ದಾರೆ ಎಂದು ಅವರು ಹೆಮ್ಮೆಪಡುತ್ತಾರೆ. 1913ರ ಮಂಗರ್ ಹತ್ಯಾಕಾಂಡವನ್ನು ನೆನಪಿಸಿಕೊಳ್ಳುವ ಮಂಗರ್ ಧಮ್ ಕಿ ಗೌರವ್ ಗಾಥಾ ಕಾರ್ಯಕ್ರಮದಲ್ಲಿ ಗೆಹ್ಲೋಟ್ ಹೇಳಿದರು.
ಇದನ್ನು ಓದಿ:ಇಂದಿನಿಂದ 2 ದಿನ ಪ್ರಧಾನಿ ಮೋದಿ ಗುಜರಾತ್ ಪ್ರವಾಸ; 15,670 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗೆಹ್ಲೋಟ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ರಾಜಸ್ಥಾನದ ಬನ್ಸ್ವಾರ ಜಿಲ್ಲೆಯ ಮಂಗರ್ ಧಾಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಪ್ರಧಾನಿ ಘೋಷಿಸಿದರು. ಇಲ್ಲಿಯೇ ಬ್ರಿಟಿಷ್ ಪಡೆಗಳು – ನವೆಂಬರ್ 17, 1913 ರಂದು – ಭಿಲ್ ಬುಡಕಟ್ಟು ಸಮುದಾಯದ 1,500 ಕ್ಕೂ ಹೆಚ್ಚು ಜನರನ್ನು ಗುಂಡಿಕ್ಕಿ ಕೊಂದಿತು ಎಂದರು.
ವೇದಿಕೆಯಲ್ಲಿ ಮಧ್ಯಪ್ರದೇಶ ಮತ್ತು ಗುಜರಾತ್ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಗುಜರಾತಿನ ಮುಖ್ಯಮಂತ್ರಿಯಾಗಿ, ಗುಜರಾತಿನ ಭಾಗವಾಗಿರುವ ಮಂಘರ್ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿದ ಪ್ರಧಾನಿ, ಗೋವಿಂದ ಗುರುಗಳು ತಮ್ಮ ಜೀವನದ ಕೊನೆಯ ವರ್ಷಗಳನ್ನು ಇಲ್ಲಿ ಕಳೆದರು, ಅವರ ಶಕ್ತಿ ಮತ್ತು ಜ್ಞಾನವನ್ನು ಈ ನೆಲದ ಮಣ್ಣಿನಲ್ಲಿ ಇನ್ನೂ ಅನುಭವಿಸಬಹುದು ಎಂದು ತಿಳಿಸಿದರು. .
Published On - 3:43 pm, Tue, 1 November 22