AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್ ಸಿಂಗ್ ವ್ಹೀಲ್​ಚೇರ್​ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ: ಮಾಜಿ ಪ್ರಧಾನಿಯ ಹೊಗಳಿದ ಮೋದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವ್ಹೀಲ್​ಚೇರ್​ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ ಎಂದು ಸಿಂಗ್ ಅವರ ಕೊಡುಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಈ ವಿಷಯ ಉಲ್ಲೇಖ ಮಾಡಿದ್ದಾರೆ.

ಮನಮೋಹನ್ ಸಿಂಗ್ ವ್ಹೀಲ್​ಚೇರ್​ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ: ಮಾಜಿ ಪ್ರಧಾನಿಯ ಹೊಗಳಿದ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Feb 08, 2024 | 12:29 PM

Share

ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) ಅವರು ವ್ಹೀಲ್​ಚೇರ್​ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ ಎಂದು ಸಿಂಗ್ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ಲಾಘಿಸಿದ್ದಾರೆ. ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಈ ವಿಷಯ ಉಲ್ಲೇಖ ಮಾಡಿದ್ದಾರೆ.

‘‘ಇಂದು ನಾನು ಡಾ. ಮನಮೋಹನ್ ಸಿಂಗ್ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ, ಅವರ ಕೊಡುಗೆ ದೊಡ್ಡದಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ’’.

ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದರು

ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಕಳೆದ 10 ವರ್ಷಗಳಿಂದ ದೇಶವು ಸಮೃದ್ಧಿಯ ಹೊಸ ಉತ್ತುಂಗವನ್ನು ಮುಟ್ಟುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮೋದಿ ಸರ್ಕಾರದ ಅವಧಿಯ ಆರ್ಥಿಕತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ಕಪ್ಪು ಪತ್ರವನ್ನು ಬಿಡುಗಡೆ ಮಾಡಿದೆ. 5 ವರ್ಷಗಳ ನಂತರ ಲೋಕಸಭೆ ಹೊಸ ರೂಪದಿಂದ ಕಂಗೊಳಿಸುತ್ತಿದೆ. ಪ್ರತಿ 2 ವರ್ಷಗಳ ನಂತರ ಈ ಸದನವು ಹೊಸ ಚೈತನ್ಯ ಮತ್ತು ಶಕ್ತಿಯನ್ನು ಪಡೆಯುತ್ತದೆ.

ಮತ್ತಷ್ಟು ಓದಿ: ಆರ್ಥಿಕತೆ ಕುರಿತ ಕೇಂದ್ರ ಸರ್ಕಾರದ ಶ್ವೇತಪತ್ರಕ್ಕೆ ಕಾಂಗ್ರೆಸ್​ನ ಕಪ್ಪು ಪತ್ರ ದೃಷ್ಟಿ ಬೊಟ್ಟಿದ್ದಂತೆ: ಪ್ರಧಾನಿ ಮೋದಿ

ಹೊರಹೋಗಲಿರುವ ಸಂಸದರು ಹಳೆಯ ಮತ್ತು ಹೊಸ ಸಂಸತ್ತಿನಲ್ಲಿ ಎರಡೂ ಕಡೆಯು ಕುಳಿತುಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದರು. ಕೋವಿಡ್‌ನ ಕಷ್ಟದ ಅವಧಿಯಲ್ಲಿ ನಾವೆಲ್ಲರೂ ಸಂದರ್ಭಗಳನ್ನು ಅರ್ಥಮಾಡಿಕೊಂಡಿದ್ದೇವೆ ಮತ್ತು ಸಂದರ್ಭಗಳಿಗೆ ಹೊಂದಿಕೊಳ್ಳುತ್ತೇವೆ ಎಂದು ಮೋದಿ ಹೇಳಿದ್ದಾರೆ. ಗುರುವಾರ ಅಧಿಕಾರಾವಧಿ ಕೊನೆಗೊಳ್ಳಲಿರುವ 15 ರಾಜ್ಯಗಳ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಫೆಬ್ರವರಿ 15.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Thu, 8 February 24

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?