ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) ಅವರು ವ್ಹೀಲ್ಚೇರ್ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ ಎಂದು ಸಿಂಗ್ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ಲಾಘಿಸಿದ್ದಾರೆ. ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಈ ವಿಷಯ ಉಲ್ಲೇಖ ಮಾಡಿದ್ದಾರೆ.
‘‘ಇಂದು ನಾನು ಡಾ. ಮನಮೋಹನ್ ಸಿಂಗ್ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ, ಅವರ ಕೊಡುಗೆ ದೊಡ್ಡದಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ’’.
ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದರು
ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ.
ಕಳೆದ 10 ವರ್ಷಗಳಿಂದ ದೇಶವು ಸಮೃದ್ಧಿಯ ಹೊಸ ಉತ್ತುಂಗವನ್ನು ಮುಟ್ಟುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮೋದಿ ಸರ್ಕಾರದ ಅವಧಿಯ ಆರ್ಥಿಕತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ಕಪ್ಪು ಪತ್ರವನ್ನು ಬಿಡುಗಡೆ ಮಾಡಿದೆ. 5 ವರ್ಷಗಳ ನಂತರ ಲೋಕಸಭೆ ಹೊಸ ರೂಪದಿಂದ ಕಂಗೊಳಿಸುತ್ತಿದೆ. ಪ್ರತಿ 2 ವರ್ಷಗಳ ನಂತರ ಈ ಸದನವು ಹೊಸ ಚೈತನ್ಯ ಮತ್ತು ಶಕ್ತಿಯನ್ನು ಪಡೆಯುತ್ತದೆ.
ಮತ್ತಷ್ಟು ಓದಿ: ಆರ್ಥಿಕತೆ ಕುರಿತ ಕೇಂದ್ರ ಸರ್ಕಾರದ ಶ್ವೇತಪತ್ರಕ್ಕೆ ಕಾಂಗ್ರೆಸ್ನ ಕಪ್ಪು ಪತ್ರ ದೃಷ್ಟಿ ಬೊಟ್ಟಿದ್ದಂತೆ: ಪ್ರಧಾನಿ ಮೋದಿ
ಹೊರಹೋಗಲಿರುವ ಸಂಸದರು ಹಳೆಯ ಮತ್ತು ಹೊಸ ಸಂಸತ್ತಿನಲ್ಲಿ ಎರಡೂ ಕಡೆಯು ಕುಳಿತುಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದರು.
ಕೋವಿಡ್‌ನ ಕಷ್ಟದ ಅವಧಿಯಲ್ಲಿ ನಾವೆಲ್ಲರೂ ಸಂದರ್ಭಗಳನ್ನು ಅರ್ಥಮಾಡಿಕೊಂಡಿದ್ದೇವೆ ಮತ್ತು ಸಂದರ್ಭಗಳಿಗೆ ಹೊಂದಿಕೊಳ್ಳುತ್ತೇವೆ ಎಂದು ಮೋದಿ ಹೇಳಿದ್ದಾರೆ. ಗುರುವಾರ ಅಧಿಕಾರಾವಧಿ ಕೊನೆಗೊಳ್ಳಲಿರುವ 15 ರಾಜ್ಯಗಳ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಫೆಬ್ರವರಿ 15.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:40 am, Thu, 8 February 24