AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಕರೆ ಮಾಡಿದ ನೆತನ್ಯಾಹು; ಪಶ್ಚಿಮ ಏಷ್ಯಾ ಸಂಘರ್ಷ, ಭಾರತ-ಇಸ್ರೇಲ್ ಸಂಬಂಧದ ಕುರಿತು ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಪ್ರಸ್ತುತ ಸಂಘರ್ಷ, ಪ್ರಾದೇಶಿಕ ವಿದ್ಯಮಾನಗಳು ಹಾಗೂ ದ್ವಿಪಕ್ಷೀಯ ಸಹಕಾರದ ಪ್ರಮುಖ ಕ್ಷೇತ್ರಗಳ ಕುರಿತು ಚರ್ಚಿಸಿದರು. ಈ ವೇಳೆ ಅವರು ಉಭಯ ದೇಶಗಳ ಪರಸ್ಪರ ಹಿತಾಸಕ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಿ ಮೋದಿಗೆ ಕರೆ ಮಾಡಿದ ನೆತನ್ಯಾಹು; ಪಶ್ಚಿಮ ಏಷ್ಯಾ ಸಂಘರ್ಷ, ಭಾರತ-ಇಸ್ರೇಲ್ ಸಂಬಂಧದ ಕುರಿತು ಚರ್ಚೆ
Pm Modi With NetanyahuImage Credit source: PTI
ಸುಷ್ಮಾ ಚಕ್ರೆ
|

Updated on: Aug 06, 2026 | 9:08 PM

Share

ನವದೆಹಲಿ, ಆಗಸ್ಟ್ 6: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು (ಆಗಸ್ಟ್ 6) ದೂರವಾಣಿ ಕರೆ ಮಾಡಿದ್ದು, ಪಶ್ಚಿಮ ಏಷ್ಯಾದ ಇತ್ತೀಚಿನ ವಿದ್ಯಮಾನಗಳು ಹಾಗೂ ಭಾರತ-ಇಸ್ರೇಲ್ ದ್ವಿಪಕ್ಷೀಯ ಬಾಂಧವ್ಯದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇಬ್ಬರೂ ನಾಯಕರು ಭಾರತ-ಇಸ್ರೇಲ್ ವಿಶೇಷ ಆಯಕಟ್ಟಿನ ಪಾಲುದಾರಿಕೆಯಲ್ಲಿ (Special Strategic Partnership) ಸಾಧಿಸಲಾದ ಸುಸ್ಥಿರ ಪ್ರಗತಿಯ ಬಗ್ಗೆ ಚರ್ಚಿಸಿದರು. ಉಭಯ ದೇಶಗಳ ಪರಸ್ಪರ ಹಿತಾಸಕ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಮರುಉಚ್ಚರಿಸಿದರು ಎನ್ನಲಾಗಿದೆ.

ಪ್ರಾದೇಶಿಕ ಭದ್ರತೆ ಮತ್ತು ಆಯಕಟ್ಟಿನ ಸಹಯೋಗ ಸೇರಿದಂತೆ ಹಂಚಿಕೆಯ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಸಂಪರ್ಕದಲ್ಲಿರಲು ಮತ್ತು ಚರ್ಚೆಗಳನ್ನು ಮುಂದುವರಿಸಲು ಇಬ್ಬರೂ ನಾಯಕರು ಸಮ್ಮತಿಸಿದರು.

ಇದನ್ನೂ ಓದಿ: ಇಸ್ರೇಲ್​ಗೆ ಶೇ 12.5, ಭಾರತಕ್ಕೆ ಶೇ. 10 ಸುಂಕ; ಅಮೆರಿಕದ ಪರಮಮಿತ್ರ ದೇಶಕ್ಕೆ ಹೆಚ್ಚಿನ ಟ್ಯಾರಿಫ್ ಯಾಕೆ?

ಪ್ರಧಾನಿ ಮೋದಿ ಈ ವರ್ಷ ಫೆಬ್ರವರಿಯಲ್ಲಿ ಇಸ್ರೇಲ್‌ಗೆ ಭೇಟಿ ನೀಡಿದ್ದರು. ಈ ಭೇಟಿಯ ಸಂದರ್ಭದಲ್ಲಿ, ಭಾರತ-ಇಸ್ರೇಲ್ ಬಾಂಧವ್ಯವನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಾಗಿ ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವವಾದ ‘ಮೆಡಲ್ ಆಫ್ ದಿ ಕೆನೆಸೆಟ್’ ನೀಡಿ ಅವರನ್ನು ಗೌರವಿಸಲಾಗಿತ್ತು. ಆ ಭೇಟಿಯ ವೇಳೆ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಬಾಹ್ಯಾಕಾಶ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು, ಸೈಬರ್ ಭದ್ರತೆ, ಶಿಕ್ಷಣ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿಯ ಬಗ್ಗೆ ಪ್ರಧಾನಿ ಮೋದಿ ಮತ್ತು ನೆತನ್ಯಾಹು ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ಇಸ್ರೇಲ್ ಪ್ರಧಾನಿ ನೆತನ್ಯಾಹು ವಾಷಿಂಗ್ಟನ್ ಭೇಟಿ: ಡೊನಾಲ್ಡ್ ಟ್ರಂಪ್ ಭೇಟಿ ಮತ್ತು ನ್ಯೂಯಾರ್ಕ್ ಪ್ರವಾಸದ ಸುತ್ತ ರಾಜಕೀಯ ವಿವಾದ

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವು 5 ತಿಂಗಳಿಗಿಂತ ಹೆಚ್ಚು ಕಾಲದಿಂದ ಮುಂದುವರಿದಿದ್ದು, ಯಾವುದೇ ಶಾಶ್ವತ ಪರಿಹಾರ ಕಂಡುಬರುತ್ತಿಲ್ಲ. ಹಾರ್ಮುಜ್ ಜಲಸಂಧಿ ಜಲಮಾರ್ಗಕ್ಕೆ ಸಂಬಂಧಿಸಿದಂತೆ ಒಮಾನ್ ದೇಶದೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುವ ಅಂತಿಮ ಹಂತದಲ್ಲಿದ್ದೇವೆ ಎಂದು ಇರಾನ್ ಇಂದು ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ