ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ

ಪ್ರಧಾನಿ ನರೇಂದ್ರ ಮೋದಿ ಕುವೈತ್‌ನ ಅತ್ಯುನ್ನತ ಗೌರವ ಸಿಕ್ಕಿದೆ. ಈ ಮೂಲಕ ಪ್ರಧಾನಿ ಮೋದಿ ದೇಶವೊಂದರಿಂದ 20ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ನೀಡಲಾಗುತ್ತದೆ.

ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಪ್ರದಾನ
Pm Narendra Modi Receives Kuwait's Highest Honour
Follow us
ಸುಷ್ಮಾ ಚಕ್ರೆ
|

Updated on: Dec 22, 2024 | 5:03 PM

ನವದೆಹಲಿ: ಕುವೈತ್​ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಇಂದು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಿದರು. ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಅನ್ನು ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸೂಚಕವಾಗಿ ನೀಡಲಾಗುತ್ತದೆ.

ಇಲ್ಲಿಯವರೆಗೆ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಗೌರವಗಳನ್ನು ಪಡೆದಿರುವ ಪ್ರಧಾನಿ ನರೇಂದ್ರ ಮೋದಿ, ಯುಎಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಯುಕೆ ರಾಜ ರಾಜ ಚಾರ್ಲ್ಸ್ III ಅವರಂತಹವರ ಸಾಲಿಗೆ ಸೇರಿಕೊಂಡಿದ್ದಾರೆ. ಇವರೆಲ್ಲರೂ ಈ ಹಿಂದೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: ಕುವೈತ್​ನಲ್ಲಿ ಭಾರತೀಯ ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಸಂವಾದ

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇಂದು ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುನ್ನ ಪ್ರಧಾನಿ ಮೋದಿ ಅವರಿಗೆ ಬಯಾನ್ ಅರಮನೆಯಲ್ಲಿ ವಿದ್ಯುಕ್ತ ಸ್ವಾಗತ ಮತ್ತು ಗೌರವ ಗಾರ್ಡ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಅಮೀರ್, ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್‌ನೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಗಯಾನಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ಸ್ವೀಕರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು