ದೆಹಲಿ: ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಕೃಷಿ ಮೂಲಸೌಕರ್ಯ ನಿಧಿಗೆಯಡಿ ಅನುದಾನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 1 ಲಕ್ಷ ಕೋಟಿ ರೂಪಾಯಿಯ ಈ ಯೋಜನೆಗೆ ಚಾಲನೆ ನೀಡಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ ಇದಲ್ಲದೆ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 6ನೇ ಕಂತು ಸಹ ಬಿಡುಗಡೆ ಮಾಡಿದರು. 8.55 ಕೋಟಿ ರೈತರಿಗೆ 6ನೇ ಕಂತಿನ 17,100 ಕೋಟಿ ರೂಪಾಯಿ ಹಣವನ್ನ ಬಿಡುಗಡೆ ಮಾಡಿದರು.