AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಕುರಿತು ರಾಹುಲ್ ಗಾಂಧಿ ಕೇಳಿದ್ದ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರವೇನು?

ಡೊನಾಲ್ಡ್​ ಟ್ರಂಪ್ ಕುರಿತು ರಾಹುಲ್ ಗಾಂಧಿ(Rahul Gandhi) ಕೇಳಿದ್ದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಇಂದು ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್​ ಕುರಿತು ಚರ್ಚೆಗೆ ಕಾಂಗ್ರೆಸ್​ ಹಠಹಿಡಿದಿತ್ತು. ಟ್ರಂಪ್ ಹೇಳಿಕೆಯನ್ನು ವಿವಾದ ಮಾಡಲಾಗಿತ್ತು. ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆದಿತ್ತು.

ಟ್ರಂಪ್ ಕುರಿತು ರಾಹುಲ್ ಗಾಂಧಿ ಕೇಳಿದ್ದ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರವೇನು?
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:Jul 29, 2025 | 9:24 PM

Share

ನವದೆಹಲಿ, ಜುಲೈ 29: ಡೊನಾಲ್ಡ್​ ಟ್ರಂಪ್ ಕುರಿತು ರಾಹುಲ್ ಗಾಂಧಿ(Rahul Gandhi) ಕೇಳಿದ್ದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಇಂದು ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್​ ಕುರಿತು ಚರ್ಚೆಗೆ ಕಾಂಗ್ರೆಸ್​ ಹಠಹಿಡಿದಿತ್ತು. ಟ್ರಂಪ್ ಹೇಳಿಕೆಯನ್ನು ವಿವಾದ ಮಾಡಲಾಗಿತ್ತು. ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆದಿತ್ತು.

ಕದನ ವಿರಾಮದ ಬಳಿಕ ವಿಶೇಷವಾಗಿ ರಾಹುಲ್ ಗಾಂಧಿ ಟೀಕಾ ಪ್ರಹಾರ ಮಾಡಿದ್ದರು. ಡೊನಾಲ್ಡ್​ ಟ್ರಂಪ್ 29 ಬಾರಿ ಕದನ ವಿರಾಮದ ಪ್ರಸ್ತಾಪವನ್ನು ಮಾಡಿದ್ದರು ಎಂಬುದನ್ನು ಸುಳ್ಳು ಎಂದು ಒಪ್ಪಿಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ ತನ್ನ ಅಜ್ಜಿ ಇಂದಿರಾ ಬಗ್ಗೆ ಮಾತನಾಡಿ ಅವರಿಗಿರುವ ಅರ್ಧದಷ್ಟು ಧೈರ್ಯ ಇದ್ದರೆ ಪ್ರಧಾನಿ ಮೋದಿ ಧೈರ್ಯದಿಂದ ಇದು ಸುಳ್ಳೆಂದು ಹೇಳಲಿ ಎಂದು ಮೇಜು ತಟ್ಟಿ ಪಂಥಾಹ್ವಾನ ಮಾಡಿದ್ದರು.

ಅದಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಕೊಟ್ಟಿದ್ದು, ಮೇ 9 ರ ರಾತ್ರಿ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಅವರಿಂದ 3-4 ಬಾರಿ ಕರೆ ಬಂದಿತ್ತು. ನಾನು ಮೀಟಿಂಗ್​​ನಲ್ಲಿದ್ದೆ. ನಂತರ, ಅವರು ಮತ್ತೆ ಕರೆ ಮಾಡಿದಾಗ, ಪಾಕಿಸ್ತಾನವು ದೊಡ್ಡ ದಾಳಿಯನ್ನು ಯೋಜಿಸುತ್ತಿದೆ ಎಂದು ತಿಳಿಸಿದ್ದರು. ಪಾಕಿಸ್ತಾನವು ಅಂತಹ ಉದ್ದೇಶಗಳನ್ನು ಹೊಂದಿದ್ದರೆ, ಅದು ಅವರಿಗೆ ಭಾರಿ ಬೆಲೆ ತೆರಬೇಕಾಗುತ್ತದೆ.

ಮತ್ತಷ್ಟು ಓದಿ: ಭಾರತಕ್ಕೆ ಇಡೀ ವಿಶ್ವದಿಂದಲೇ ಬೆಂಬಲ ಸಿಕ್ಕಿತ್ತು ಆದರೆ ಕಾಂಗ್ರೆಸ್​​ನಿಂದ ಸಿಗಲಿಲ್ಲ: ಮೋದಿ

ಅವರು ಗುಂಡುಗಳನ್ನು ಹಾರಿಸಿದರೆ, ನಾವು ಬಾಂಬ್‌ಗಳಿಂದ ಪ್ರತಿಕ್ರಿಯಿಸುತ್ತೇವೆ ಎಂದು ನಾನು ಅವರಿಗೆ ಉತ್ತರಿಸಿದ್ದೆ. ಈ ಸಂಭಾಷಣೆ ಮೇ 9 ರ ರಾತ್ರಿ ನಡೆದಿದ್ದು, ಮೇ 10 ರ ಬೆಳಗ್ಗೆ ಭಾರತವು ಪಾಕಿಸ್ತಾನದ ಮಿಲಿಟರಿ ಸಾಮರ್ಥ್ಯಗಳನ್ನು ನಾಶಮಾಡಿದೆ ಎಂದರು.

ಮೇ 10 ರ ರಾತ್ರಿ ಪಾಕಿಸ್ತಾನ ಕದನ ವಿರಾಮಕ್ಕೆ ಮನವಿ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದರು. ಭಾರತದ ದಾಳಿಯ ತೀವ್ರತೆಯನ್ನು ಇನ್ನು ಮುಂದೆ ತಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ನಡೆದಿದ್ದು ಇಷ್ಟೇ ಬಿಟ್ಟರೆ ಯಾವುದೇ ಜಾಗತಿಕ ನಾಯಕರೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 pm, Tue, 29 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ