ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಕಾಂಗ್ರೆಸ್ನ ಕಪ್ಪು ಪತ್ರ ದೃಷ್ಟಿಬೊಟ್ಟಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ 10 ವರ್ಷದ ಅವಧಿಯಲ್ಲಿ ದೇಶದ ಆರ್ಥಿಕತೆ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲು ಸಿದ್ಧವಾಗಿದೆ. ಹಾಗೆಯೇ ಮೋದಿ ಸರ್ಕಾರದಲ್ಲಿ ಆರ್ಥಿಕತೆ ಉತ್ತಮವಾಗಿಲ್ಲ ಎಂದು ಸಾಬೀತುಪಡಿಸಲು ಕಾಂಗ್ರೆಸ್ ಕಪ್ಪು ಪತ್ರ ಹೊರಡಿಸಲು ಸಿದ್ಧವಾಗಿದೆ.
ಈ ಕುರಿತು ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಾತನಾಡಿ, ದುಷ್ಟ ಕಣ್ಣುಗಳಿಂದ ರಕ್ಷಿಸಲು ಮನೆಯಲ್ಲಿ ಮಕ್ಕಳಿಗೆ ಹೇಗೆ ಕಪ್ಪು ಹಚ್ಚುತ್ತೇವೋ ಹಾಗೆಯೇ ಸರ್ಕಾರ ಅನೇಕ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದು, ದುಷ್ಟರ ಕಣ್ಣುಗಳಿಂದ ರಕ್ಷಿಸಲು ಕಾಂಗ್ರೆಸ್ ಹೊರಡಿಸಿರುವ ಕಪ್ಪು ಪತ್ರವೂ ನಮಗೆ ದೃಷ್ಟಿಬೊಟ್ಟಿದ್ದಂತೆ ಎಂದು ಮೋದಿ ವ್ಯಂಗ್ಯವಾಡಿದ್ದಾರೆ.
ನಿರುದ್ಯೋಗ, ಬೆಲೆ ಏರಿಕೆ ಮತ್ತು ರೈತರ ಸಂಕಷ್ಟದಂತಹ ಸಮಸ್ಯೆಗಳ ಗುರಿಯಾಗಿಸಿಕೊಂಡು ಮೋದಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಕಾಂಗ್ರೆಸ್ ಇಂದು ಮುಂಜಾನೆ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2014 ರ ಹಿಂದಿನ ಆರ್ಥಿಕತೆಯ ದುರುಪಯೋಗ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರವನ್ನು ಮಂಡಿಸುವ ಮೊದಲು ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ್ದಾರೆ.
ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಜಾತಿ ಗಣತಿಯಲ್ಲಿ ವಿಫಲತೆ ಮತ್ತು ಮಹಿಳೆಯರಿಗೆ ಅನ್ಯಾಯ ಮುಂತಾದ ವಿಷಯಗಳನ್ನು ಕಪ್ಪು ಪತ್ರ ಎತ್ತಿ ತೋರಿಸುತ್ತದೆ.
ಮತ್ತಷ್ಟು ಓದಿ: ಮನಮೋಹನ್ ಸಿಂಗ್ ವ್ಹೀಲ್ಚೇರ್ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ: ಮಾಜಿ ಪ್ರಧಾನಿಯ ಹೊಗಳಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಬೆಲೆ ಏರಿಕೆಯ ಬಗ್ಗೆ ಕೇಳಿದಾಗ ಜವಾಹರಲಾಲ್ ನೆಹರು, ಇಂದಿರಾ ಗಾಂಧಿಯವರ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ. ಕಾಂಗ್ರೆಸ್ ಭಾರತದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದೆ ಮತ್ತು 2024 ರಲ್ಲಿ ದೇಶವನ್ನು ಬಿಜೆಪಿಯ
ಅನ್ಯಾಯದ ಕತ್ತಲೆಯಿಂದ ಹೊರತರಲಿದೆ ಎಂದು ಖರ್ಗೆ ಹೇಳಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದೆ ಎಂದು ಅವರು ಶ್ಲಾಘಿಸಿದರು. ಜತೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಈ ಸದನಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ಹೇಳಿದರು. ಸದಸ್ಯರೊಬ್ಬರು ತಮ್ಮ ಕರ್ತವ್ಯಗಳ ಬಗ್ಗೆ ಜಾಗರೂಕರಾಗಿರುವುದಕ್ಕೆ ಇದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:04 pm, Thu, 8 February 24