ಯುವಕರು, ಬಡವರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿ: ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ

ನಮ್ಮ ಯೋಜನೆಗಳು ಬಡವರಿಗೆ, ಯುವಕರಿಗೆ, ರೈತರಿಗೆ, ಮಹಿಳೆಯರಿಗೆ ಸರಿಯಾಗಿ ತಲುಪಿದರೆ ಚುನಾವಣೆಯಲ್ಲಿ ನಮಗೆ ಹೆಚ್ಚು ಮತಗಳು ದೊರೆಯಲು ಸಹಕಾರಿಯಾಗುತ್ತದೆ. ಇದಕ್ಕಾಗಿ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ನಡೆಯುತ್ತಿರುವ ರಾಜ್ಯಗಳತ್ತ ಗಮನ ಹರಿಸಬೇಕು ಎಂದು ಮೋದಿ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಯುವಕರು, ಬಡವರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿ: ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ
ಪ್ರಧಾನಿ ಮೋದಿ & ಜೆಪಿ ನಡ್ಡಾ
Follow us
|

Updated on: Dec 23, 2023 | 7:37 AM

ನವದೆಹಲಿ, ಡಿಸೆಂಬರ್ 23: ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯ (Lok Sabha Election) ಸಿದ್ಧತೆ ಮತ್ತು ಕಾರ್ಯಕ್ರಮಗಳ ರೂಪುರೇಷೆಗಾಗಿ ದೆಹಲಿಯಲ್ಲಿ ಶುಕ್ರವಾರ ಆರಂಭವಾದ ಎರಡು ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯ ಮಹತ್ವದ ಸಭೆಯು ಶುಕ್ರವಾರ 5 ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು.

ನಮ್ಮ ಯೋಜನೆಗಳು ಬಡವರಿಗೆ, ಯುವಕರಿಗೆ, ರೈತರಿಗೆ, ಮಹಿಳೆಯರಿಗೆ ಸರಿಯಾಗಿ ತಲುಪಿದರೆ ಚುನಾವಣೆಯಲ್ಲಿ ನಮಗೆ ಹೆಚ್ಚು ಮತಗಳು ದೊರೆಯಲು ಸಹಕಾರಿಯಾಗುತ್ತದೆ. ಇದಕ್ಕಾಗಿ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ನಡೆಯುತ್ತಿರುವ ರಾಜ್ಯಗಳತ್ತ ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಕೇಂದ್ರ ಸರ್ಕಾರದ ಕಳಪೆ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಧ್ಯವಾದಷ್ಟು ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು.

ವಿರೋಧ ಪಕ್ಷಗಳ ನಕಾರಾತ್ಮಕ ಪ್ರಚಾರಗಳಿಗೆ ಪ್ರತಿಯಾಗಿ ಸತ್ಯಾಸತ್ಯತೆಗಳ ಮಾಹಿತಿ, ಉತ್ತರವನ್ನು ನೀಡಿ ಎಂದು ಪಕ್ಷದ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಮೋದಿ ಸಲಹೆ ನೀಡಿದರು.

ಮಿಷನ್ ಮೋಡ್​ನಲ್ಲಿ ಕೆಲಸ ಮಾಡಬೇಕಿದೆ: ಮೋದಿ

ನಾವು ಈಗ ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಬೇಕಾಗಿದೆ ಎಂದ ಮೋದಿ, ಚುನಾವಣೆ ತಯಾರಿಯನ್ನು ಇನ್ನಷ್ಟು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ಹಲವು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಪಕ್ಷದ ಪದಾಧಿಕಾರಿಗಳಿಗೆ ಗೆಲುವಿಗೆ ಅನುಸರಿಸಬೇಕಾದ ತಂತ್ರಗಳನ್ನು ತಿಳಿಹೇಳಿದರು. ಸಭೆಯ ಎರಡನೇ ದಿನವಾದ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಗೆ ಹಾಜರಾಗಿ ಪ್ರಮುಖ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಜನರು ಒಂದಾಗಬೇಕು: ಮಲ್ಲಿಕಾರ್ಜುನ ಖರ್ಗೆ ಕರೆ

ಸಭೆಯಲ್ಲಿ ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದಂದು (ಡಿಸೆಂಬರ್ 25) ಪಕ್ಷವು ರಾಷ್ಟ್ರವ್ಯಾಪಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ