ದೇಶಾದ್ಯಂತ ರೈತ(Farmer) ಸಹೋದರ ಸಹೋದರಿಯರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ಬೇಡಿಕೆಯನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅಭಯ ನೀಡಿದ್ದಾರೆ. ರೈತರ ಪ್ರತಿಭಟನೆ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಪ್ರತಿಕ್ರಿಯೆ ಬಂದಿದೆ. ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಕಬ್ಬು ಖರೀದಿಯ ಬೆಲೆಯಲ್ಲಿ ಹೆಚ್ಚಿನ ಏರಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ನಮ್ಮ ಕೋಟ್ಯಂತರ ಕಬ್ಬು ಉತ್ಪಾದಕ ರೈತರಿಗೆ ಅನುಕೂಲವಾಗಲಿದೆ.
2024-25 (ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್‌ಆರ್‌ಪಿ ಪ್ರತಿ ಕ್ವಿಂಟಲ್‌ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ FRP ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಬ್ಬನ್ನು ಮುಖ್ಯವಾಗಿ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. 2024-25ನೇ ಸಾಲಿಗೆ ಕಬ್ಬಿನ ಎಫ್ಆರ್ ಪಿಯನ್ನು ಪ್ರತಿ ಕ್ವಿಂಟಾಲ್ಗೆ 340 ರೂ.ಗಳಂತೆ ಶೇ.10.25 ರಷ್ಟು ಸಕ್ಕರೆ ಚೇತರಿಕೆ ದರದಲ್ಲಿ ಸಿಸಿಇಎ ಅನುಮೋದಿಸಿದೆ.
ಮತ್ತಷ್ಟು ಓದಿ: ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್
ಮುಂದಿನ ಕಬ್ಬು ಹಂಗಾಮಿನ ವೇಳೆ ಅಂದರೆ 2024ರ ಅಕ್ಟೋಬರ್ 1ರಿಂದ 2025 ಸೆಪ್ಟಂಬರ್ 30ರ ಅವಧಿಗೆ ಕಬ್ಬು ಖರೀದಿ ದರವನ್ನು ಕ್ವಿಂಟಲ್‌ಗೆ 315 ರು.ನಿಂದ 340 ರು.ಗೆ ಹೆಚ್ಚಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 25 ರು. ಹೆಚ್ಚಳ ಮಾಡಲಾಗಿದೆ. ರೈತರಿಗೆ ನ್ಯಾಯಸಮ್ಮತ ಮತ್ತು ಸಮಂಜಸ ಬೆಲೆ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಮೋದಿ ಟ್ವೀಟ್
देशभर के अपने किसान भाई-बहनों के कल्याण से जुड़े हर संकल्प को पूरा करने के लिए हमारी सरकार प्रतिबद्ध है। इसी कड़ी में गन्ना खरीद की कीमत में ऐतिहासिक बढ़ोतरी को मंजूरी दी गई है। इस कदम से हमारे करोड़ों गन्ना उत्पादक किसानों को लाभ होगा।https://t.co/Ap14Lrjw8Z https://t.co/nDEY8SAC3D
— Narendra Modi (@narendramodi) February 22, 2024
ಅಕ್ಟೋಬರ್ 1ರಿಂದ ಅನ್ವಯ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಈ ಹೊಸ ದರಗಳನ್ನು ಅನುಮೋದಿಸಿದೆ. ಇದು ಕಬ್ಬಿನ ಐತಿಹಾಸಿಕ ಬೆಲೆಯಾಗಿದ್ದು, ಇದು ಪ್ರಸಕ್ತ 2023-24ನೇ ಹಂಗಾಮಿನ ಕಬ್ಬಿನ ಎಫ್‌ಆರ್‌ಪಿಗಿಂತ ಶೇಕಡಾ 8 ರಷ್ಟು ಹೆಚ್ಚು ಎಂದು ಹೇಳಲಾಗುತ್ತಿದೆ. ಪರಿಷ್ಕೃತ FRP ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ