AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪರಿಸರ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಭಾರತದ ಇಂಗಾಲ ಹೊರಸೂಸುವಿಕೆ ಅಥವಾ ಕಾರ್ಬನ್ ಫುಟ್‌ಪ್ರಿಂಟ್ ಜಾಗತಿಕ ಸರಾಸರಿಗಿಂತ ಕಡಿಮೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಪರಿಸರ ಮತ್ತು ಹವಾಮಾನ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸೌರಶಕ್ತಿ ಸೇರಿದಂತೆ ಶುದ್ಧ ಇಂಧನ ಕ್ಷೇತ್ರದಲ್ಲಿ ಭಾರತದ ಪ್ರಗತಿಯನ್ನು ವಿವರಿಸಿದರು.

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪರಿಸರ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
ಪರಿಸರ ಮತ್ತು ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಹಾಗೂ ಸಚಿವ ಭೂಪೇಂದ್ರ ಯಾದವ್Image Credit source: PTI
ಗಣಪತಿ ಶರ್ಮಾ
|

Updated on: Sep 19, 2026 | 12:06 PM

Share

ಮುಖ್ಯಾಂಶಗಳು

  • ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ
  • ಸೌರಶಕ್ತಿ ಸಾಮರ್ಥ್ಯ 160 ಗಿಗಾವ್ಯಾಟ್‌ಗೂ ಹೆಚ್ಚು
  • ಪ್ಯಾರಿಸ್ ಒಪ್ಪಂದದ ಗುರಿ ಈಗಲೇ ಸಾಧಿಸಿದ್ದೇವೆ ಎಂದ ಮೋದಿ

ನವದೆಹಲಿ, ಸೆಪ್ಟೆಂಬರ್ 19: ಭಾರತದ ಇಂಗಾಲ ಹೊರಸೂಸುವಿಕೆ (ಕಾರ್ಬನ್ ಫುಟ್‌ಪ್ರಿಂಟ್) ಜಾಗತಿಕ ಸರಾಸರಿಗಿಂತ ಗಣನೀಯವಾಗಿ ಕಡಿಮೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆಯೋಜಿಸಿರುವ ‘ದಿ ಫ್ಯೂಚರ್ ಆಫ್ ಎನ್ವಿರಾನ್‌ಮೆಂಟ್ ಅಂಡ್ ಕ್ಲೈಮೇಟ್ ಡೈನಾಮಿಕ್ಸ್’ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಎರಡು ದಿನಗಳ ಸಮ್ಮೇಳನದಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆಯ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ.

ಭಾರತವು ಶತಮಾನಗಳಿಂದ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಪರಂಪರೆಯನ್ನು ಹೊಂದಿದೆ. ಇದೇ ಮೌಲ್ಯಗಳನ್ನು ಆಧರಿಸಿ ಆಧುನಿಕ ಹವಾಮಾನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಮೋದಿ ಹೇಳಿದರು. ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯನ್ನು ಜತೆಯಾಗಿ ಮುನ್ನಡೆಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಸೌರಶಕ್ತಿ ಬಳಕೆಯಿಂದ ಪರಿಸರಕ್ಕೆ ಒಳಿತು: ಮೋದಿ

ಭಾರತದ ಪರಿಸರ ಕ್ರಮಗಳಲ್ಲಿ ಸೌರಶಕ್ತಿಗೆ ಪ್ರಮುಖ ಸ್ಥಾನವಿದೆ ಎಂದು ಪ್ರಧಾನಿ ಹೇಳಿದರು. ಕಳೆದ 12 ವರ್ಷಗಳಲ್ಲಿ ದೇಶದ ಸೌರಶಕ್ತಿ ಸಾಮರ್ಥ್ಯ ಸುಮಾರು 2 ಗಿಗಾವ್ಯಾಟ್‌ನಿಂದ 160 ಗಿಗಾವ್ಯಾಟ್‌ಗೂ ಹೆಚ್ಚು ಏರಿಕೆಯಾಗಿದೆ. ಸೌರಶಕ್ತಿಯ ವಿಸ್ತರಣೆಯಿಂದ ಸುಮಾರು 20 ಕೋಟಿ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆ ತಪ್ಪಿಸಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

ಪವನ ವಿದ್ಯುತ್ ಸಾಮರ್ಥ್ಯ ಮೂರು ಪಟ್ಟು ಹೆಚ್ಚಳ: ಮೋದಿ

ಪವನ ವಿದ್ಯುತ್ ಸಾಮರ್ಥ್ಯವೂ ಕಳೆದ 12 ವರ್ಷಗಳಲ್ಲಿ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. ಜಲವಿದ್ಯುತ್ ಸಾಮರ್ಥ್ಯ ವೃದ್ಧಿಯ ಜೊತೆಗೆ ಅಣುಶಕ್ತಿ ವಿಸ್ತರಣೆ ಹಾಗೂ ಶುದ್ಧ ಇಂಧನ ಕ್ಷೇತ್ರದಲ್ಲಿ ಖಾಸಗಿ ವಲಯದ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಭಾರತ ಒತ್ತು ನೀಡುತ್ತಿದೆ ಎಂದು ಮೋದಿ ಹೇಳಿದರು.

ಪ್ಯಾರಿಸ್ ಒಪ್ಪಂದದ ಗುರಿ ಈಗಲೇ ಸಾಧಿಸಿದ್ದೇವೆ: ಪ್ರಧಾನಿ

ಈ ಕ್ರಮಗಳ ಪರಿಣಾಮ ದೇಶದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪಳೆಯುಳಿಕೆರಹಿತ ಇಂಧನ ಮೂಲಗಳ ಪಾಲು ಗಮನಾರ್ಹವಾಗಿ ಹೆಚ್ಚಿದೆ. 2025ರಲ್ಲೇ ಶೇ 50ರ ಗಡಿ ದಾಟಿದ್ದು, 2030ರ ಪ್ಯಾರಿಸ್ ಒಪ್ಪಂದದ ಗುರಿಯನ್ನು ನಿಗದಿತ ಅವಧಿಗಿಂತ ಐದು ವರ್ಷ ಮುಂಚಿತವಾಗಿ ತಲುಪಿದೆ ಎಂದು ಪ್ರಧಾನಿ ಹೇಳಿದರು. ಮನೆಗಳ ಮೇಲ್ಚಾವಣಿಯಲ್ಲಿ ಸೌರಶಕ್ತಿ ವ್ಯವಸ್ಥೆ ಅಳವಡಿಸುವ ಕಾರ್ಯವೂ ಮುಂದುವರಿದಿದ್ದು, ಸುಮಾರು 50 ಲಕ್ಷ ಮನೆಗಳಲ್ಲಿ ರೂಫ್‌ಟಾಪ್‌ ಸೌರ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಅವರು ತಿಳಿಸಿದರು.

LIVE TV

ಪರಿಸರ ಆಡಳಿತ, ಹವಾಮಾನ ಬದಲಾವಣೆ, ಜೀವವೈವಿಧ್ಯ, ಸುಸ್ಥಿರ ಇಂಧನ ಮತ್ತು ಹವಾಮಾನ ನ್ಯಾಯ ಸೇರಿದಂತೆ ಹಲವು ವಿಷಯಗಳು ಸಮ್ಮೇಳನದಲ್ಲಿ ಚರ್ಚೆಯಾಗಲಿವೆ. 17 ದೇಶಗಳ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಪ್ರತಿನಿಧಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ