AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರು ಹಿಂದುಳಿದವರ ಎಲ್ಲಾ ರೀತಿಯ ಮೀಸಲಾತಿಗೆ ವಿರುದ್ಧವಾಗಿದ್ದರು: ಮೋದಿ

ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಉದ್ಯೋಗದಲ್ಲಿ ಯಾವುದೇ ರೀತಿಯ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಜವಾಹರಲಾಲ್ ನೆಹರು ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಯ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಒಬಿಸಿಗಳಿಗೆ ಎಂದಿಗೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಬೋಧಿಸಬಾರದು ಎಂದು ಹೇಳಿದರು.

ನೆಹರು ಹಿಂದುಳಿದವರ ಎಲ್ಲಾ ರೀತಿಯ ಮೀಸಲಾತಿಗೆ ವಿರುದ್ಧವಾಗಿದ್ದರು: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Feb 07, 2024 | 3:16 PM

Share

ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಉದ್ಯೋಗದಲ್ಲಿ ಯಾವುದೇ ರೀತಿಯ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಜವಾಹರಲಾಲ್ ನೆಹರು ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಯ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಒಬಿಸಿಗಳಿಗೆ ಎಂದಿಗೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಬೋಧಿಸಬಾರದು ಎಂದು ಹೇಳಿದರು.

‘‘ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡಲಿಲ್ಲ, ಬಾಬಾ ಸಾಹೇಬರನ್ನು ಭಾರತ ರತ್ನಕ್ಕೆ ಅರ್ಹರೆಂದು ಪರಿಗಣಿಸದ ಕಾಂಗ್ರೆಸ್ ತನ್ನ ಕುಟುಂಬಕ್ಕೆ ಮಾತ್ರ ಭಾರತ ರತ್ನ ನೀಡುತ್ತಲೇ ಇದೆ. ಸಾಮಾಜಿಕ ನ್ಯಾಯದ ಪಾಠ, ನಾಯಕರಾಗಿ ಯಾವುದೇ ಗ್ಯಾರಂಟಿ ಇಲ್ಲದವರು ಮೋದಿಯವರ ಖಾತರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ, ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅಧಿಕಾರದ ದುರಾಸೆಯಿಂದ ಪ್ರಜಾಪ್ರಭುತ್ವವನ್ನು ಬಹಿರಂಗವಾಗಿ ಕಾಂಗ್ರೆಸ್​ ಕತ್ತು ಹಿಸುಕಿದೆ. ರಾತ್ರೋ ರಾತ್ರಿ ಪ್ರಜಾಸತ್ತಾತ್ಮಕವಾಗಿ ರಚಿಸಿರುವ ಸರ್ಕಾರವನ್ನು ಹತ್ತಾರು ಬಾರಿ ವಜಾ ಮಾಡಿದ ಕಾಂಗ್ರೆಸ್​ಪತ್ರಿಕೆಗಳ ಮೇಲೆ ದಾಳಿ ಮಾಡಿದ ಕಾಂಗ್ರೆಸ್​ ದೇಶದ ಬೀಗ ಹಾಕಲು ಪ್ರಯತ್ನಿಸಿದೆ. ಈಗ ಕಾಂಗ್ರೆಸ್​ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದೆ.

ಮತ್ತಷ್ಟು ಓದಿ: ಖರ್ಗೆ ನಮಗೆ 400 ಸೀಟು ಪಡೆಯುವಂತೆ ಆಶೀರ್ವದಿಸಿದ್ದಾರೆ, ಕಾಂಗ್ರೆಸ್​ 40 ದಾಟಿಲಿ ಎಂಬುದು ನನ್ನ ಪ್ರಾರ್ಥನೆ: ಮೋದಿ

ಈಗ ದೇಶವನ್ನು ಉತ್ತರ-ದಕ್ಷಿಣ ಎಂದು ಒಡೆಯುವ ಹೇಳಿಕೆಯನ್ನು ನೀಡುತ್ತಿದೆ ಎಂದು ಮೋದಿ ಹೇಳಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಭಾರತ ರತ್ನ ನೀಡಲು ಅರ್ಹರೆಂದು ಪರಿಗಣಿಸದ ಮತ್ತು ಸ್ವಂತ ಕುಟುಂಬದ ಸದಸ್ಯರಿಗೆ ಭಾರತ ರತ್ನ ನೀಡುತ್ತಿರುವ ಕಾಂಗ್ರೆಸ್​ ಇಂದು ನಮಗೆ ಸಲಹೆ ನೀಡುತ್ತಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ