AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela 2023: 9ನೇ ಉದ್ಯೋಗ ಮೇಳ, 51 ಸಾವಿರ ಯುವಕ-ಯುವತಿಯರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಭಾಗವಹಿಸಿದ್ದು, ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ. ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.

Rozgar Mela 2023: 9ನೇ ಉದ್ಯೋಗ ಮೇಳ, 51 ಸಾವಿರ ಯುವಕ-ಯುವತಿಯರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 26, 2023 | 11:11 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಭಾಗವಹಿಸಿದ್ದು, ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ. ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.

ಕಳೆದ ಬಾರಿ 28 ಆಗಸ್ಟ್ 2023 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ 51,000 ಯುವಕರಿಗೆ ದೇಶದಲ್ಲಿ ಸರ್ಕಾರಿ ಉದ್ಯೋಗಗಳಿಗಾಗಿ ನೇಮಕಾತಿ ಪತ್ರಗಳನ್ನು ನೀಡಲಾಯಿತು. ಈ ದಿನದಂದು, ಮುಖ್ಯವಾಗಿ ಗೃಹ ಸಚಿವಾಲಯದ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಹೊಸದಾಗಿ ನೇಮಕಗೊಂಡವರಿಗೆ ಸೇರ್ಪಡೆ ಪತ್ರಗಳನ್ನು ನೀಡಲಾಯಿತು.

ಇದರ ಅಡಿಯಲ್ಲಿ, ಸಿಆರ್‌ಪಿಎಫ್, ಬಿಎಸ್‌ಎಫ್, ಎಸ್‌ಎಸ್‌ಬಿ, ಅಸ್ಸಾಂ ರೈಫಲ್ಸ್, ಸಿಐಎಸ್‌ಎಫ್, ಐಟಿಬಿಪಿ, ಎನ್‌ಸಿಬಿ ಮತ್ತು ದೆಹಲಿ ಪೊಲೀಸ್‌ಗೆ ಯುವಕರನ್ನು ನೇಮಿಸಿಕೊಳ್ಳಲಾಯಿತು.

ಮತ್ತಷ್ಟು ಓದಿ: Rozgar Mela: 71,000 ಯುವಕರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ, ಇಂದು ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ

ಸುಮಾರು 6 ಲಕ್ಷ ಮಂದಿಗೆ ನೇಮಕಾತಿ ಪತ್ರ ನೀಡಲಾಗಿದೆ ಆಗಸ್ಟ್ 28ರವರೆಗೆ ದೇಶದಲ್ಲಿ ಎಂಟು ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದ್ದು, ಅಷ್ಟರೊಳಗೆ ಒಟ್ಟು 5.5 ಲಕ್ಷಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಇದಾದ ಬಳಿಕ ಆ.28ರಂದು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 51 ಸಾವಿರ ಮಂದಿಗೆ ಸೇರ್ಪಡೆ ಪತ್ರ ನೀಡಲಾಯಿತು ಅಂದರೆ ಒಟ್ಟು 6 ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಯಿತು.

ರೋಜ್​ಗಾರ್ ಮೇಳದಲ್ಲಿ ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರೋಜ್​ಗಾರ್ ಮೇಳವು ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಇದೊಂದು ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ