ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಭಾಗವಹಿಸಿದ್ದು, ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ. ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.
ಕಳೆದ ಬಾರಿ 28 ಆಗಸ್ಟ್ 2023 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ 51,000 ಯುವಕರಿಗೆ ದೇಶದಲ್ಲಿ ಸರ್ಕಾರಿ ಉದ್ಯೋಗಗಳಿಗಾಗಿ ನೇಮಕಾತಿ ಪತ್ರಗಳನ್ನು ನೀಡಲಾಯಿತು. ಈ ದಿನದಂದು, ಮುಖ್ಯವಾಗಿ ಗೃಹ ಸಚಿವಾಲಯದ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಹೊಸದಾಗಿ ನೇಮಕಗೊಂಡವರಿಗೆ ಸೇರ್ಪಡೆ ಪತ್ರಗಳನ್ನು ನೀಡಲಾಯಿತು.
ಇದರ ಅಡಿಯಲ್ಲಿ, ಸಿಆರ್‌ಪಿಎಫ್, ಬಿಎಸ್‌ಎಫ್, ಎಸ್‌ಎಸ್‌ಬಿ, ಅಸ್ಸಾಂ ರೈಫಲ್ಸ್, ಸಿಐಎಸ್‌ಎಫ್, ಐಟಿಬಿಪಿ, ಎನ್‌ಸಿಬಿ ಮತ್ತು ದೆಹಲಿ ಪೊಲೀಸ್‌ಗೆ ಯುವಕರನ್ನು ನೇಮಿಸಿಕೊಳ್ಳಲಾಯಿತು.
ಮತ್ತಷ್ಟು ಓದಿ: Rozgar Mela: 71,000 ಯುವಕರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ, ಇಂದು ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ
ಸುಮಾರು 6 ಲಕ್ಷ ಮಂದಿಗೆ ನೇಮಕಾತಿ ಪತ್ರ ನೀಡಲಾಗಿದೆ
ಆಗಸ್ಟ್ 28ರವರೆಗೆ ದೇಶದಲ್ಲಿ ಎಂಟು ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದ್ದು, ಅಷ್ಟರೊಳಗೆ ಒಟ್ಟು 5.5 ಲಕ್ಷಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಇದಾದ ಬಳಿಕ ಆ.28ರಂದು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 51 ಸಾವಿರ ಮಂದಿಗೆ ಸೇರ್ಪಡೆ ಪತ್ರ ನೀಡಲಾಯಿತು ಅಂದರೆ ಒಟ್ಟು 6 ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಯಿತು.
Rozgar Mela stands as our dedicated effort to empower young individuals and strengthen their active engagement in the country’s development. https://t.co/S1ZBRkXcR7
— Narendra Modi (@narendramodi) September 26, 2023
ರೋಜ್‌ಗಾರ್ ಮೇಳದಲ್ಲಿ ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರೋಜ್‌ಗಾರ್ ಮೇಳವು ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಇದೊಂದು ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ