AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ನಮ್ಮ ಸಂಸ್ಕೃತಿಯ ಬಗ್ಗೆ ನಾಚಿಕೆ ಪಡುತ್ತಿದ್ದರು: ಪ್ರಧಾನಿ ಮೋದಿ

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ಪೂಜಾ ಸ್ಥಳಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ತಮ್ಮದೇ ಆದ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ನಾಚಿಕೆಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 11,000 ಕೋಟಿಗೂ ಅಧಿಕ ಮೊತ್ತದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ನಂತರ ಗುವಾಹಟಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ನಮ್ಮ ಸಂಸ್ಕೃತಿಯ ಬಗ್ಗೆ ನಾಚಿಕೆ ಪಡುತ್ತಿದ್ದರು: ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: Northeast live
ನಯನಾ ರಾಜೀವ್
|

Updated on: Feb 04, 2024 | 3:36 PM

Share

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ನಮ್ಮ ಸಂಸ್ಕೃತಿ ನೋಡಿ ನಾಚಿಕೆ ಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅವರಿಗೆ ಪೂಜಾ ಸ್ಥಳಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ತಮ್ಮದೇ ಆದ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ನಾಚಿಕೆಪಡುತ್ತಿದ್ದರು ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 11,000 ಕೋಟಿಗೂ ಅಧಿಕ ಮೊತ್ತದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ನಂತರ ಗುವಾಹಟಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ರಾಜಕೀಯ ಲಾಭಕ್ಕಾಗಿ, ಅವರು ತಮ್ಮದೇ ಆದ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ನಾಚಿಕೆಪಡುವ ಪ್ರವೃತ್ತಿಯನ್ನು ಪ್ರಾರಂಭಿಸಿದರು. ಯಾವುದೇ ದೇಶವು ತನ್ನ ಇತಿಹಾಸವನ್ನು ನಿರ್ಲಕ್ಷಿಸುವ ಮೂಲಕ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆದರೆ, ಕಳೆದ ಹತ್ತು ವರ್ಷಗಳಲ್ಲಿ ದೇಶದ ಪರಿಸ್ಥಿತಿ ಬದಲಾಗಿದೆ.

ದೇಶದ ದೇವಾಲಯಗಳು, ನಂಬಿಕೆಯ ಸ್ಥಳಗಳು ಮತ್ತು ತೀರ್ಥಯಾತ್ರೆಗಳು ಕೇವಲ ಭೇಟಿ ನೀಡಲು ಸುಂದರವಾದ ಸ್ಥಳಗಳಲ್ಲ, ಆದರೆ ಅವು ದೇಶದ ನಾಗರಿಕತೆಯ ಸಾವಿರಾರು ವರ್ಷಗಳ ಪ್ರಯಾಣದ ಅಳಿಸಲಾಗದ ಸಂಕೇತಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶವು ಹೇಗೆ ದೃಢವಾಗಿ ನಿಂತಿದೆ ಎಂಬುದಕ್ಕೆ ದೇವಾಲಯಗಳು, ನಂಬಿಕೆಯ ಸ್ಥಳಗಳು ಮತ್ತು ತೀರ್ಥಯಾತ್ರೆಗಳು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ರೋಡ್​ ಶೋ, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಯಾವುದೇ ದೇಶವು ತನ್ನ ಇತಿಹಾಸವನ್ನು ನಿರ್ಲಕ್ಷಿಸುವ ಮೂಲಕ ಪ್ರಗತಿ ಹೊಂದಲು ಸಾಧ್ಯವಿಲ್ಲ. ಆದರೆ, ಕಳೆದ ಹತ್ತು ವರ್ಷಗಳಲ್ಲಿ ದೇಶದ ಪರಿಸ್ಥಿತಿ ಬದಲಾಗಿದೆ ಎಂದು ಪ್ರಧಾನಿ ಹೇಳಿದರು. ಕಳೆದ 10 ವರ್ಷಗಳಲ್ಲಿ ಅಸ್ಸಾಂನಲ್ಲಿ ಶಾಂತಿ ಮರಳಿದೆ ಮತ್ತು 7,000 ಕ್ಕೂ ಹೆಚ್ಚು ಜನರು ಶರಣಾಗಿದ್ದಾರೆ, ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ ಮತ್ತು ಮುಖ್ಯವಾಹಿನಿಗೆ ಮರಳಿದ್ದಾರೆ ಎಂದು ಅವರು ಒತ್ತಿ ಹೇಳಿದರು.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA) ಅನ್ನು ಹಲವು ಜಿಲ್ಲೆಗಳಿಂದ ತೆಗೆದುಹಾಕಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅವರು ಉದ್ಘಾಟಿಸಿದ ಯೋಜನೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, 11,000 ಕೋಟಿ ಯೋಜನೆಗಳು ರಾಜ್ಯದ ಸಂಪರ್ಕವನ್ನು ಮತ್ತು ದಕ್ಷಿಣ ಏಷ್ಯಾದ ಇತರ ದೇಶಗಳೊಂದಿಗೆ ಈಶಾನ್ಯ ಪ್ರದೇಶದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದರು.

ಈ ಯೋಜನೆಗಳು ಅಸ್ಸಾಂನಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತವೆ, ಬಿಜೆಪಿ ಸರ್ಕಾರದ ಮೊದಲು ಗುಡ್ಡಗಾಡು ರಾಜ್ಯದಲ್ಲಿ ಕೇವಲ ಆರು ವೈದ್ಯಕೀಯ ಕಾಲೇಜುಗಳಿದ್ದವು, ಆದರೆ ಇಂದು ರಾಜ್ಯದಲ್ಲಿ 12 ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಹೇಳಿದರು.

ಈಶಾನ್ಯದಲ್ಲಿ ಅಸ್ಸಾಂ ಕ್ಯಾನ್ಸರ್ ಚಿಕಿತ್ಸೆಗೆ ಪ್ರಮುಖ ಕೇಂದ್ರವಾಗುತ್ತಿದೆ. ಸರ್ಕಾರವು ಬಡವರಿಗಾಗಿ ನಾಲ್ಕು ಕೋಟಿಗೂ ಹೆಚ್ಚು ಪಕ್ಕಾ ಮನೆಗಳನ್ನು ನಿರ್ಮಿಸಿದೆ ಮತ್ತು ಎಲ್ಲಾ ಮನೆಗಳಿಗೆ ನೀರು ಮತ್ತು ವಿದ್ಯುತ್ ಪಡೆಯಲು ಕೆಲಸ ಮಾಡಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ