ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ
ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ.
ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.
ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ ಪಾತ್ರವಾಗಿದ್ದಾಳೆ. ಈ ಹಾಡನ್ನು ಕವಿ ಕೆಎಸ್ ನರಸಿಂಹಸ್ವಾಮಿಯವರು ಬರೆದಿದ್ದಾರೆ.
This video can bring a smile on everyone’s face. Exceptional talent and creativity. Best wishes to Shalmalee! https://t.co/KvxJPJepQ4
— Narendra Modi (@narendramodi) April 25, 2023
ಈ ವಿಡಿಯೋದಲ್ಲಿರುವ ಬಾಲಕಿಯ ಹೆಸರು ಶಾಲ್ಮಲಿ. ಈ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಅನಂತ್ ಕುಮಾರ್ ಎಂಬುವವರು ಹಂಚಿಕೊಂಡಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿ ಮಗುವ ಪ್ರತಿಭೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ಓದಿ: Viral Video: ಪ್ಲೀಸ್ ಮೋದಿ ಜೀ: ಮುದ್ದು ಮುದ್ದಾಗಿ ಮಾತನಾಡುತ್ತಲೇ ಪ್ರಧಾನಿ ಮೋದಿಯವರ ಬಳಿ ಬೇಡಿಕೆ ಇಟ್ಟ ಜಮ್ಮುವಿನ ಪೋರಿ
ಈ ಪುಟ್ಟ ಬಾಲಕಿಯ ಪ್ರತಿಭೆ ನಾಡಿನ ಜನತೆಯನ್ನು ಮಂತ್ರಮುಗ್ಧಗೊಳಿಸಿದೆ, ಕಾಮೆಂಟ್ ವಿಭಾಗವು ಹಾರ್ಟ್ ಎಮೋಜಿಯಿಂದ ತುಂಬಿ ಹೋಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ