AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಂದನೆಯಿಂದ ಏನೂ ಪರಿಹಾರವಾಗಲ್ಲ’: ನೋಯ್ಡಾ ಮಹಿಳೆಯ ಹೇಳಿಕೆ ವಿವಾದದ ನಡುವೆ ತಡರಾತ್ರಿ ಮತ್ತೊಂದು ವಿಡಿಯೋ ಹಂಚಿಕೊಂಡ ಮೋದಿ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆ ವೇಳೆ ನೋಯ್ಡಾದ ರುಚಿಕಾ ಸಿಂಗ್ ಎಂಬ ಯುವತಿ ಪ್ರಧಾನಿ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ತಡರಾತ್ರಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. ಬೈಗುಳಗಳಿಂದ ಯಾವುದಕ್ಕೂ ಪರಿಹಾರ ಸಿಗುವುದಿಲ್ಲ, ದಾರಿ ತಪ್ಪಿದ ಯುವಜನತೆಗೆ ಪ್ರೀತಿಯಿಂದ ಸನ್ಮಾರ್ಗ ತೋರೋಣ ಎಂದು ಕರೆ ನೀಡಿದ ಮೋದಿ, ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಮಾಫಿಯಾ ವಿರುದ್ಧ ಸರ್ಕಾರ ತಂದಿರುವ ಕಠಿಣ ಕಾನೂನಿನ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

'ನಿಂದನೆಯಿಂದ ಏನೂ ಪರಿಹಾರವಾಗಲ್ಲ': ನೋಯ್ಡಾ ಮಹಿಳೆಯ ಹೇಳಿಕೆ ವಿವಾದದ ನಡುವೆ ತಡರಾತ್ರಿ ಮತ್ತೊಂದು ವಿಡಿಯೋ ಹಂಚಿಕೊಂಡ ಮೋದಿ
ನರೇಂದ್ರ ಮೋದಿ
ಭಾವನಾ ಹೆಗಡೆ
|

Updated on:Aug 01, 2026 | 6:58 AM

Share

ಮುಖ್ಯಾಂಶಗಳು

  • ನಿಂದನೆಯಿಂದ ಸಮಸ್ಯೆಗೆ ಪರಿಹಾರವಿಲ್ಲವೆಂದು ದಾರಿ ತಪ್ಪಿದ ಯುವಜನತೆಗೆ ಮಾರ್ಗದರ್ಶನಕ್ಕೆ ಕರೆ.
  • ನೋಯ್ಡಾ ಯುವತಿಯ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಡರಾತ್ರಿ ಮೋದಿ ವಿಡಿಯೋ ವೈರಲ್.
  • ಪೇಪರ್ ಲೀಕ್ ತಡೆಯಲು ಸಂಸತ್ತಿನಲ್ಲಿ ಅಂಗೀಕಾರಗೊಂಡ ಬಿಗಿ ಕಾನೂನಿನ ಕುರಿತು ಉಲ್ಲೇಖ.

ನವದೆಹಲಿ, ಆಗಸ್ಟ್ 01: ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ಯುವಕರು ಅವಾಚ್ಯ ಪದಗಳನ್ನು ಬಳಸಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡಿದ್ದಲ್ಲದೆ, ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಧಾನಿಯ ಬಗ್ಗೆಯೇ ಯುವಜನತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ವಿಷಯವಾಗಿ ಶುಕ್ರವಾರ ವೀಡಿಯೋವೊಂದನ್ನು ಹಂಚಿಕೊಂಡಿರುವ ನರೇಂದ್ರ ಮೋದಿ, ಯುವಜನರನ್ನು ಶಿಕ್ಷಿಸುವುದಕ್ಕಿಂತ ಹೆಚ್ಚಾಗಿ ಅವರಿಗೆ ಸರಿಯಾದ ಹಾದಿ ತೋರಿಸಬೇಕು ಎಂದಿದ್ದಾರೆ.

ತಡರಾತ್ರಿ ವಿಡಿಯೋ ಸಂದೇಶ; ಮೋದಿ ಹೇಳಿದ್ದೇನು?

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕರಲ್ಲಿ ಉಂಟಾದ ಆಕ್ರೋಶವನ್ನು ಅರ್ಥೈಸಿಕೊಂಡ ಅವರು, ‘ಜಂತರ್ ಮಂತರ್‌ನಲ್ಲಿ ಏನಾಯಿತು ಎಂಬುದನ್ನು ದೇಶ ಮತ್ತು ಜಗತ್ತು ಕಣ್ಣಾರೆ ಕಂಡಿದೆ. ಕೆಲವು ಹಾದಿ ತಪ್ಪಿದ ಯುವಕರು ಅತ್ಯಂತ ಕೀಳು ಮಟ್ಟದ ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸಿದರು. ಈ ಪದಗಳು ಯಾವುದೇ ಸುಸಂಸ್ಕೃತ ಸಮಾಜಕ್ಕೆ ಶೋಭೆ ತರುವುದಿಲ್ಲ. ನನ್ನನ್ನು ವೈಯಕ್ತಿಕವಾಗಿ ನಿಂದಿಸಲಾಯಿತು. ಅಷ್ಟೇ ಅಲ್ಲದೆ, ನನ್ನ ಸ್ವರ್ಗಸ್ಥ ತಾಯಿಯನ್ನೂ ಸಹ ನಿಂದನೆಗೆ ಗುರಿಪಡಿಸಲಾಯಿತು. ಅದು ನಿಜಕ್ಕೂ ಒಂದು ಅಸಹ್ಯಕರ ದೃಶ್ಯವಾಗಿತ್ತು. ಆದಾಗ್ಯೂ, ಬಾಲ್ಯದಲ್ಲಿ ತಪ್ಪುಗಳು ಸಹಜ ಮತ್ತು ಆ ತಪ್ಪುಗಳನ್ನು ತಿದ್ದುಕೊಳ್ಳುವ ಅವಕಾಶವನ್ನೂ ಬಾಲ್ಯವೇ ನೀಡುತ್ತದೆ’ ಎಂದಿದ್ದಾರೆ.

‘ಈ ಯುವಕರು ದಾರಿ ತಪ್ಪಿದ್ದಾರೆ. ಅವರಿಗೆ ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯವಾಗಿದೆ. ಅವರನ್ನು ಶಿಕ್ಷಿಸುವುದು, ನ್ಯಾಯಾಲಯದ ಕಲಾಪಗಳಿಗೆ ಎಳೆಯುವುದು ಮತ್ತು ಸಮಾಜದಲ್ಲಿ ಅವರಿಗೆ ಕಿರುಕುಳ ನೀಡುವುದು, ಇವು ಯಾವುದರಿಂದಲೂ ಪರಿಸ್ಥಿತಿ ಬದಲಾಗುವುದಿಲ್ಲ. ನಾನು ಅವರನ್ನು ಕ್ಷಮಿಸಲು ಬಯಸುತ್ತೇನೆ. ಕೆಲವೊಮ್ಮೆ ನಮ್ಮ ನಾಲಿಗೆ ಹಲ್ಲುಗಳ ನಡುವೆ ಸಿಕ್ಕಿಬಿದ್ದು ರಕ್ತ ಬರುತ್ತದೆ. ಹಾಗೆಂದು ನಾವು ನಮ್ಮ ಹಲ್ಲುಗಳನ್ನು ಮುರಿದುಕೊಳ್ಳುವುದಿಲ್ಲ. ಏಕೆಂದರೆ ಹಲ್ಲು ಮತ್ತು ನಾಲಿಗೆ ಎರಡೂ ನಮ್ಮದೇ. ಈ ಮಕ್ಕಳೂ ನಮ್ಮವರೇ. ಅವರಿಗೆ ಸರಿಯಾದ ಮಾರ್ಗವನ್ನು ತೋರಿಸುವುದು ನಮ್ಮ ಕರ್ತವ್ಯ. ದಾರಿ ತಪ್ಪಿದವರಿಗೆ ಮಾರ್ಗದರ್ಶನ ನೀಡುವುದು ಕಷ್ಟ. ಆದ್ರೆ, ಇದು ನಾವು ಕೈಗೊಳ್ಳಬೇಕಾದ ಕಾರ್ಯವಾಗಿದೆ. ಆದ್ದರಿಂದ ಬನ್ನಿ, ನಾನು ಈ ಮಕ್ಕಳಿಗೆ ಕರೆ ನೀಡುತ್ತೇನೆ, ದೇಶದ ಒಳಿತಿಗಾಗಿ ನಾವೆಲ್ಲರೂ ಒಟ್ಟಾಗಿ ಮುನ್ನಡೆಯೋಣ. ಹೊಸದನ್ನು ಕಲಿಯೋಣ ಮತ್ತು ನಮ್ಮ ತಪ್ಪುಗಳಿಂದಲೂ ಪಾಠ ಕಲಿಯೋಣ. ನಮ್ಮ ಕನಸುಗಳನ್ನು ಬೆನ್ನಟ್ಟಲು ಹೊರಡೋಣ. ದೇಶವು ಮುನ್ನಡೆಯುತ್ತಿದೆ ಮತ್ತು ಮತ್ತಷ್ಟು ಪ್ರಗತಿಗೆ ಸಜ್ಜಾಗಿದೆ. ನೀವು ಸಹ ಮುನ್ನಡೆಯಬೇಕೆಂಬುದು ನನ್ನ ಕನಸಾಗಿದೆ. ನಾನು ನಿಮಗಾಗಿ ಬದುಕುತ್ತಿದ್ದೇನೆ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನನ್ನನ್ನು ನಾನು ಮುಡುಪಾಗಿಟ್ಟಿದ್ದೇನೆ’ ಎಂದು ಮೋದಿ ತಮ್ಮ ವೀಡಿಯೋದಲ್ಲಿ ತಿಳಿಸಿದ್ದಾರೆ.

ನೋಯ್ಡಾ ಯುವತಿಯ ಮೇಲೆ ಎಫ್‌ಐಆರ್ ಹಿನ್ನೆಲೆ ವೀಡಿಯೋ

ನೋಯ್ಡಾ ನಿವಾಸಿ, 25 ವರ್ಷದ ರುಚಿಕಾ ಸಿಂಗ್ ಎಂಬುವವರ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿಯವರ ಈ ಸಂದೇಶ ಹೊರಬಿದ್ದಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರುಚಿಕಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಾಜಿಯಾಬಾದ್ ಮೂಲದ ವಕೀಲರೊಬ್ಬರು ನೀಡಿದ ದೂರಿನ ಮೇರೆಗೆ, ನೋಯ್ಡಾ ಎಕ್ಸ್‌ಪ್ರೆಸ್‌ವೇ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆಗಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sat, 1 August 26

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!