Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬಾರದು: ಮೌಲಾನಾ ಮಹಮೂದ್ ಮದನಿ

ಪ್ರಧಾನಿ ಮೋದಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮಾತ್ರವಲ್ಲದೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಧಾರ್ಮಿಕ ವಿಧಿವಿಧಾನಗಳು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಬೇಕು ಮತ್ತು ಧರ್ಮಪಾಲಕರು ಅಂದರೆ ಧಾರ್ಮಿಕ ವಿಚಾರಗಳನ್ನು ಆಚರಣೆ ಮಾಡುವವರು ಮಾತ್ರ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ. ಇನ್ನು ಬಾಬರಿ ಮಸೀದಿಯ ಬಗ್ಗೆ ಸುಪ್ರೀಂ ಕೋರ್ಟ್​​ ನೀಡಿರುವ ತೀರ್ಪು ಕಾನೂನು ಮತ್ತು ಐತಿಹಾಸಿಕ ಸತ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬಾರದು: ಮೌಲಾನಾ ಮಹಮೂದ್ ಮದನಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 28, 2023 | 5:22 PM

ದೆಹಲಿ, ಅ.28: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ (ayodhya Ram Temple) ಸಕಲ ಸಿದ್ಧತೆ ನಡೆದಿದೆ. 2024ರ ಜವನರಿಯಲ್ಲಿ ಅಯೋಧ್ಯೆ ಉದ್ಘಾಟನೆಗೊಳಲಿದೆ. ಪ್ರಧಾನಿ ಮೋದಿ ಅವರನ್ನು ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಪ್ರಧಾನಿ ಮೋದಿ ಅವರು ಅಯೋಧ್ಯೆ ರಾಮಮಂದಿರದ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ಮಾಡಿದ್ದರು. ಆದರೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಅಪಸ್ವರ ಎತ್ತಲಾಗಿದೆ. ಹೌದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಭಾಗವಹಿಸಬಾರದು ಎಂದು ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಹೇಳಿಕೆ ನೀಡಿದ್ದಾರೆ. ಇದೀಗ ಈ ಹೇಳಿಕೆ ಎಲ್ಲ ಕಡೆ ಚರ್ಚೆ ಗ್ರಾಸವಾಗಿದೆ.

ಪ್ರಧಾನಿ ಮೋದಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮಾತ್ರವಲ್ಲದೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಧಾರ್ಮಿಕ ವಿಧಿವಿಧಾನಗಳು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಬೇಕು ಮತ್ತು ಧರ್ಮಪಾಲಕರು ಅಂದರೆ ಧಾರ್ಮಿಕ ವಿಚಾರಗಳನ್ನು ಆಚರಣೆ ಮಾಡುವವರು ಮಾತ್ರ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ. ಇನ್ನು ಬಾಬರಿ ಮಸೀದಿಯ ಬಗ್ಗೆ ಸುಪ್ರೀಂ ಕೋರ್ಟ್​​ ನೀಡಿರುವ ತೀರ್ಪು ಕಾನೂನು ಮತ್ತು ಐತಿಹಾಸಿಕ ಸತ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು

ಅಯೋಧ್ಯೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸರಿ ಎಂದು ನಾವು ಒಪ್ಪಿಕೊಳ್ಳುವುದಿಲ್ಲ. ಈ ತೀರ್ಪು ಕಾನೂನಿನ ಪ್ರಕಾರ ಸರಿಯಿಲ್ಲ. ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ತಪ್ಪು ತತ್ವದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮವು 22 ಜನವರಿ 2024 ರಂದು ನಡೆಯಲಿದೆ. ಮಧ್ಯಾಹ್ನ 12.30ರ ಸುಮಾರಿಗೆ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಅಯೋಧ್ಯೆಯಲ್ಲಿ ಭರ ಸಿದ್ಧತೆಗಳು ನಡೆಯುತ್ತಿದೆ. ಜನವರಿ 22 ರಂದು ದೇವಾಲಯದ ಪವಿತ್ರೀಕರಣದ ನಂತರ, ರಾಮ್ಲಾಲಾ ಹೊಸ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಈಗಾಗಲೇ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ