ಅಮಿತ್ ಶಾ ಅವರನ್ನು ಮೋದಿ ರಾತ್ರಿಯೊಳಗೆ ಸಂಪುಟದಿಂದ ಕೈಬಿಡಬೇಕು; ಅಂಬೇಡ್ಕರ್ ಕುರಿತ ಹೇಳಿಕೆಗೆ ಖರ್ಗೆ ಒತ್ತಾಯ

ಡಾ. ಬಿ. ಆರ್​. ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಹಾಗೇ, ಅಮಿತ್ ಶಾ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಅಮಿತ್ ಶಾ ಅವರನ್ನು ಮೋದಿ ರಾತ್ರಿಯೊಳಗೆ ಸಂಪುಟದಿಂದ ಕೈಬಿಡಬೇಕು; ಅಂಬೇಡ್ಕರ್ ಕುರಿತ ಹೇಳಿಕೆಗೆ ಖರ್ಗೆ ಒತ್ತಾಯ
Kharge (2)
Follow us
ಸುಷ್ಮಾ ಚಕ್ರೆ
|

Updated on:Dec 18, 2024 | 5:52 PM

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಲವು ವಿರೋಧ ಪಕ್ಷದ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಂಸತ್ತಿನಲ್ಲಿ ಅಂಬೇಡ್ಕರ್ ನೀಡಿರುವ ಹೇಳಿಕೆ ಸರಿಯಲ್ಲ. ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಇಂದು ಒತ್ತಾಯಿಸಿದ್ದಾರೆ.

ಸಂಸತ್ತಿನಲ್ಲಿ ದಲಿತ ನಾಯಕ ಬಿಆರ್ ಅಂಬೇಡ್ಕರ್ ಅವರನ್ನು ಸಚಿವ ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಆರೋಪಿಸಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದರು. ಇದು ತಪ್ಪು ಎಂದು ಅಮಿತ್ ಶಾಗೆ ಹೇಳುವ ಬದಲು ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರ ಹೇಳಿಕೆಯ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ವಿವಾದ; ಅಮಿತ್ ಶಾ ವಿರುದ್ಧ ಸಂಸತ್ತಿನಲ್ಲಿ ಟಿಎಂಸಿಯ ಡೆರೆಕ್ ಒಬ್ರಿಯಾನ್ ವಿಶೇಷ ಹಕ್ಕು ಮಂಡನೆ

ನಮ್ಮ ಬೇಡಿಕೆ ಏನೆಂದರೆ ಅಮಿತ್ ಶಾ ಕ್ಷಮೆ ಯಾಚಿಸಬೇಕು ಮತ್ತು ಪ್ರಧಾನಿ ಮೋದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ನಂಬಿಕೆ ಇದ್ದರೆ ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು. ಅವರಿಗೆ ಸಂಪುಟದಲ್ಲಿ ಉಳಿಯುವ ಹಕ್ಕಿಲ್ಲ, ಅವರನ್ನು ವಜಾ ಮಾಡಬೇಕು. ಆಗ ಮಾತ್ರ ಜನರು ಮೌನವಾಗಿರುತ್ತಾರೆ, ಇಲ್ಲದಿದ್ದರೆ ಜನರು ಪ್ರತಿಭಟಿಸುತ್ತಾರೆ. ಡಾ ಬಿಆರ್ ಅಂಬೇಡ್ಕರ್ ಅವರಿಗಾಗಿ ಜನರು ಪ್ರಾಣ ತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಬದಲು ದೇವರ ನಾಮ ಹೇಳಿದ್ದರೆ ನೂರು ಜನ್ಮದಲ್ಲಿ ಸ್ವರ್ಗ ಸಿಗ್ತಿತ್ತು: ಅಂಬೇಡ್ಕರ್ ಕುರಿತ ಶಾ ಹೇಳಿಕೆಗೆ ಸಿಎಂ ತಿರುಗೇಟು

ಮಂಗಳವಾರ 75 ವರ್ಷಗಳ ಸಂವಿಧಾನದ ಕುರಿತು ರಾಜ್ಯಸಭೆಯಲ್ಲಿ ಎರಡು ದಿನಗಳ ಚರ್ಚೆಯ ಸಮಾರೋಪದಲ್ಲಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಫ್ಯಾಶನ್ ಆಗಿದೆ. ಒಂದುವೇಳೆ ಅವರು ಅಂಬೇಡ್ಕರ್ ಬದಲು ಈ ರೀತಿ 100 ಬಾರಿ ದೇವರ ಹೆಸರು ಜಪ ಮಾಡಿದ್ದರೆ 7 ಜನ್ಮಗಳಲ್ಲೂ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ವಿಪಕ್ಷ ಸದಸ್ಯರ ಟೀಕೆಗೆ ಕಾರಣವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Wed, 18 December 24

ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ