ಇಟಲಿ ಪ್ರಧಾನಿಗೆ ಕರೆ ಮಾಡಿ ವಿಮೋಚನಾ ದಿನಾಚರಣೆಯ ಶುಭಾಯಶಯ ತಿಳಿಸಿದ ಮೋದಿ

| Updated By: ರಮೇಶ್ ಬಿ. ಜವಳಗೇರಾ

Updated on: Apr 25, 2024 | 10:17 PM

ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ದೂರವಾಣಿ ಕರೆ ಮಾಡಿ ಇಟಲಿಯ ವಿಮೋಚನಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ವೇಳೆ ಮೋದಿ ಇಟಲಿಯಲ್ಲಿ ನಡೆಯಲಿರುವ G7 ಶೃಂಗಸಭೆಯ ಆಹ್ವಾನಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಇಟಲಿ ಪ್ರಧಾನಿಗೆ ಕರೆ ಮಾಡಿ ವಿಮೋಚನಾ ದಿನಾಚರಣೆಯ ಶುಭಾಯಶಯ ತಿಳಿಸಿದ ಮೋದಿ
ಮೋದಿ, ಜಾರ್ಜಿಯಾ ಮೆಲೋನಿ
Follow us on

ನವದೆಹಲಿ, (ಏಪ್ರಿಲ್ 25): ಇಂದು ಇಟಲಿಯ 75ನೇ ವಿಮೋಚನಾ ದಿನಾಚರಣೆ (Italy’s Liberation day). ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ(Giorgia Meloni) ಅವರಿಗೆ ದೂರವಾಣಿ ಕರೆ ಮಾಡಿ ಇಟಲಿಯ ವಿಮೋಚನಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಇಟಲಿಯಲ್ಲಿ ನಡೆಯಲಿರುವ G7 ಶೃಂಗಸಭೆಯ ಆಹ್ವಾನಿಸಿದ್ದಕ್ಕೆ ಪ್ರಧಾನಿ ಮೋದಿ, ಜಾರ್ಜಿಯಾ ಮೆಲೋನಿಗೆ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಉಭಯ ನಾಯಕರು ಪರಸ್ಪರ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.

ವಿಮೋಚನಾ ದಿನದ 79ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮೋದಿ, ಇಟಲಿಯ ಪಿಎಂ ಮೆಲೋನಿ ಮತ್ತು ಇಟಲಿಯ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಹಾಗೇ 2024ರ ಜೂನ್​ನಲ್ಲಿ ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ G7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕೆ ಮೋದಿ ಧನ್ಯವಾದ ಹೇಳಿದ್ದಾರೆ.

ಇನ್ನು ಇದೇ ವೇಳೆ ಉಭಯ ನಾಯಕರು ದೂರವಾಣಿಯಲ್ಲಿ ಸುದೀರ್ಘವಾಗಿ ಮಾತುಕತೆ ನಡೆಸಿದರು. ಪ್ರಮುಖವಾಗಿ G7 ಶೃಂಗಸಭೆಯಲ್ಲಿ ಭಾರತದ G20 ಪ್ರೆಸಿಡೆನ್ಸಿಯಿಂದ ವಿಶೇಷವಾಗಿ ಜಾಗತಿಕ ದಕ್ಷಿಣವನ್ನು ಬೆಂಬಲಿಸುವ ಪ್ರಮುಖ ಅಂಶಗಳನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಚರ್ಚಿಸಿದ್ದಾರೆ. ಈ ಮೂಲಕ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಿಷ್ಠಗೊಳಿಸುವುದು ಮತ್ತು ಮುಂದುವರಿಸುವ ಬದ್ಧತೆಯನ್ನು ತೋರಿಸಿದರು.

ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟಲಿ ಪ್ರಧಾನಿ ನಿಯೋಗ ಮಾತುಕತೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿಯಾಗಿದ್ದರು. ಈ ವೇಳೆ ಮೆಲೋನಿ ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಕೊಂಡಿದ್ದು,ನಾವು ಒಳ್ಳೆಯ ಸ್ನೇಹಿತರು ಎಂದು ಬರೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.