AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಅಧಿಕೃತ ಹೇಳಿಕೆಯ ಪ್ರಕಾರ, ಈ ಮಾತುಕತೆಯು ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿಗಳ ಮೇಲೆ ಕೇಂದ್ರೀಕರಿಸಿತ್ತು. ಫೋನ್ ಸಂಭಾಷಣೆ ವೇಳೆ ಇಬ್ಬರೂ ನಾಯಕರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು. ಬೆದರಿಕೆಯನ್ನು ಎದುರಿಸಲು ಮತ್ತು ಜನರ ಜೀವಗಳನ್ನು ರಕ್ಷಿಸಲು ಏಕೀಕೃತ ಜಾಗತಿಕ ಕ್ರಮದ ಅಗತ್ಯವನ್ನು ಅವರು ಒತ್ತಿ ಹೇಳಿದರು ಎನ್ನಲಾಗಿದೆ.

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ
Modi And Netanyahu
ಸುಷ್ಮಾ ಚಕ್ರೆ
|

Updated on: Dec 10, 2025 | 9:37 PM

Share

ನವದೆಹಲಿ, ಡಿಸೆಂಬರ್ 10: ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ. ಭಯೋತ್ಪಾದನೆಯ ಬಗ್ಗೆ ಭಾರತ ಶೂನ್ಯ ಸಹಿಷ್ಣುತೆಯನ್ನು ಪ್ರಧಾನಿ ಮೋದಿ ಈ ವೇಳೆ ಪುನರುಚ್ಚರಿಸಿದ್ದಾರೆ. ಈ ವೇಳೆ ಭಯೋತ್ಪಾದನೆ ಮತ್ತು ಗಾಜಾ ಶಾಂತಿ ಯೋಜನೆಯ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದ್ದಾರೆ. ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಮುಂದುವರಿದ ಬೆಳವಣಿಗೆಯ ಬಗ್ಗೆ ಮೋದಿ ಮತ್ತು ನೆತನ್ಯಾಹು ತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಗಾಜಾ ಶಾಂತಿ ಯೋಜನೆಯ ಆರಂಭಿಕ ಅನುಷ್ಠಾನ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಸ್ಥಾಪಿಸುವ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅವರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದ್ದು, ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ಬಗ್ಗೆ ತಮ್ಮ ಶೂನ್ಯ ಸಹಿಷ್ಣುತೆಯ ನಿಲುವನ್ನು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ

ಯುಎಸ್ ಬೆಂಬಲಿತ ಗಾಜಾ ಕದನ ವಿರಾಮ ಯೋಜನೆಯ ಎರಡನೇ ಹಂತವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ನಿರೀಕ್ಷಿಸುವುದಾಗಿ ನೆತನ್ಯಾಹು ಹೇಳಿದ ನಂತರ ಅವರು ಮೋದಿಗೆ ಕರೆ ಮಾಡಿದ್ದಾರೆ. ಆದರೆ, ನೆತನ್ಯಾಹು ಈ ಹೇಳಿಕೆ ನೀಡಿದ್ದರೂ ಇಸ್ರೇಲ್ ದೇಶದ ಉಲ್ಲಂಘನೆಗಳು ಮುಂದುವರಿದಿರುವುದರಿಂದ ಕದನ ವಿರಾಮ ಯೋಜನೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಹಮಾಸ್ ಹೇಳಿದೆ. ಈ ಒಪ್ಪಂದವನ್ನು ಗೌರವಿಸುವಂತೆ ಇಸ್ರೇಲ್ ಮೇಲೆ ಒತ್ತಡ ಹೇರಲು ಮಧ್ಯವರ್ತಿಗಳಿಗೆ ಕರೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ