ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ಇರಾನ್​ ಜೊತೆಗಿನ ಸಂಘರ್ಷವನ್ನು ಕೊನೆಗೊಳಿಸಲು ಮನಸು ಮಾಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್ ಈ ನಿಟ್ಟಿನಲ್ಲಿ ನಿನ್ನೆಯಿಂದ ಪೋಸ್ಟ್​ಗಳನ್ನು ಮಾಡುತ್ತಿದ್ದಾರೆ. ಆದರೆ, ಇರಾನ್ ಮಾತ್ರ ಈ ಹೇಳಿಕೆಯನ್ನು ನಿರಾಕರಿಸಿದೆ. ಇದರ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಹಾರ್ಮುಜ್ ಜಲಸಂಧಿಯು ಸಂಚಾರಕ್ಕೆ ಮುಕ್ತವಾಗಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ. ಇಬ್ಬರೂ ನಾಯಕರು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ
PM Modi With Donald Trump
Image Credit source: PTI

Updated on: Mar 24, 2026 | 8:09 PM

ನವದೆಹಲಿ, ಮಾರ್ಚ್ 24: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ವಿಧಿಸಿರುವ ನಿರ್ಬಂಧಗಳ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡುವ ಮಹತ್ವದ ಕುರಿತು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರೆ ಮಾಡಿದ್ದರು. ಈ ದೂರವಾಣಿ ಕರೆಯ ಸಮಯದಲ್ಲಿ ಈ ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆ ಮತ್ತು ಹಾರ್ಮುಜ್ ಜಲಸಂಧಿಯನ್ನು ತೈಲ ಮತ್ತು ಇಂಧನ ವ್ಯಾಪಾರಕ್ಕೆ ಮುಕ್ತವಾಗಿಸುವುದಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಅಂದಹಾಗೆ, ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಪ್ರಾರಂಭವಾದ ನಂತರ ಮೋದಿ ಮತ್ತು ಟ್ರಂಪ್ ಮಾತನಾಡುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ


ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಇಬ್ಬರು ನಾಯಕರ ನಡುವಿನ ಮಾತುಕತೆಯ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಟ್ರಂಪ್ ಅವರೊಂದಿಗಿನ ಮಾತುಕತೆಯ ಬಗ್ಗೆ ತಿಳಿಸಿದ್ದು, “ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಪರಿಸ್ಥಿತಿಯ ಕುರಿತು ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ. ಭಾರತ ಶಾಂತಿಗೆ ಬೆಂಬಲವಾಗಿ ನಿಂತಿದೆ. ಭಾರತವು ಸಾಧ್ಯವಾದಷ್ಟು ಬೇಗ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಬೆಂಬಲ ನೀಡುವುದಾಗಿ ತಿಳಿಸಿದೆ. ಹಾರ್ಮುಜ್ ಜಲಸಂಧಿಯು ಮುಕ್ತ, ಸುರಕ್ಷಿತ ಸ್ಥಳವಾಗುವುದು ಇಡೀ ಜಗತ್ತಿಗೆ ಅತ್ಯಗತ್ಯ ಎಂದು ಭಾರತವೂ ಹೇಳಿದೆ” ಎಂದು ಗೋರ್ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಇದಾದ ಬಳಿಕ ಪ್ರಧಾನಿ ಮೋದಿ ಕೂಡ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಅಮೆರಿಕದ ಅಧ್ಯಕ್ಷರೊಂದಿಗೆ ಉಪಯುಕ್ತ ವಿಷಯದ ವಿನಿಮಯ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. “ಜಾಗತಿಕ ಸ್ಥಿರತೆಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತ, ಸುರಕ್ಷಿತವಾದ ರೀತಿಯಲ್ಲಿ ಇಡುವುದು ಅತ್ಯಗತ್ಯ ಎಂದು ಒತ್ತಿ ಹೇಳಿದ್ದೇನೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಭಾರತ ಬೆಂಬಲಿಸುತ್ತದೆ ಎಂದು ತಿಳಿಸಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us