AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ

ಮಹಿಳಾ ಕೋಟಾ ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ವಿರೋಧ ಪಕ್ಷಗಳು ಖಂಡಿತ ಶಿಕ್ಷೆ ಅನುಭವಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನಿನ್ನೆ ಸಂಸತ್​ನಲ್ಲಿ ಮಹಿಳಾ ಮೀಸಲಾತಿಗೆ ಬಹುಮತ ಸಿಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಮಹಿಳೆಯರ ಪ್ರಗತಿಗಾಗಿ ನಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ವಿಪಕ್ಷಗಳಿಂದ ಅದು ಸಫಲವಾಗಲಿಲ್ಲ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಮೋದಿ ಹೇಳಿದ್ದಾರೆ.

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ
Prime Minister Modi
ಸುಷ್ಮಾ ಚಕ್ರೆ
|

Updated on:Apr 18, 2026 | 9:16 PM

Share

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ನಿನ್ನೆ ಸಂಸತ್​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ. ಶಾಸಕಾಂಗಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮಸೂದೆಯು ಲೋಕಸಭೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

“ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ. ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡ ವಿರೋಧ ಪಕ್ಷಗಳು ಈ ಮಸೂದೆ ಅಂಗೀಕಾರವಾಗದಿದ್ದುದಕ್ಕೆ ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದ್ದು ವಿಪರ್ಯಾಸ” ಎಂದು ಮೋದಿ ಟೀಕಿಸಿದ್ದಾರೆ.

ಇದನ್ನೂ ಓದಿ: PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ

“ನಮಗೆ ರಾಷ್ಟ್ರದ ಹಿತಾಸಕ್ತಿ ಅತ್ಯಂತ ಮುಖ್ಯ. ಆದರೆ ಕೆಲವರಿಗೆ ಪಕ್ಷದ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿಗಿಂತ ಹೆಚ್ಚು. ಅದರ ಪರಿಣಾಮವನ್ನು ಮಹಿಳೆಯರು ಮತ್ತು ದೇಶವು ಅನುಭವಿಸಬೇಕಾಗುತ್ತದೆ. ಈ ಬಾರಿಯೂ ಇದೇ ಆಗಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷದಂತಹ ಪಕ್ಷಗಳ ಸ್ವಾರ್ಥ ರಾಜಕೀಯದಿಂದಾಗಿ, ದೇಶದ ಮಹಿಳೆಯರು ತೊಂದರೆ ಅನುಭವಿಸಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಮಹಿಳೆಯ ಹಕ್ಕುಗಳನ್ನು ಸ್ಥಾಪಿಸುವ ಈ ಮಸೂದೆಯನ್ನು ಸೋಲಿಸುವ ಮೂಲಕ ವಿರೋಧ ಪಕ್ಷಗಳು ಭ್ರೂಣ ಹತ್ಯೆಯ ಪಾಪ ಹೊತ್ತುಕೊಂಡಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ನಾವು ಇಲ್ಲಿಗೇ ಬಿಡುವುದಿಲ್ಲ. ನಮ್ಮ ಸರ್ಕಾರ ಇದಕ್ಕಿರುವ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕುತ್ತದೆ. ಸಂಸತ್ತಿನಲ್ಲಿ ಅಗತ್ಯವಿರುವ ಸಂಖ್ಯಾಬಲದ ಕೊರತೆಯಿದ್ದರೂ ಸಹ ಎಲ್ಲ ಅಡೆತಡೆಗಳನ್ನು ತೆರವುಗೊಳಿಸುತ್ತೇವೆ. ಮಹಿಳಾ ಮೀಸಲಾತಿ ಮಸೂದೆಗೆ ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಪ್ರಧಾನಿ ಮಹಿಳೆಯರಿಗೆ ಭರವಸೆ ನೀಡಿದ್ದಾರೆ.

“ನಿಮ್ಮ ನೋವು ಮತ್ತು ನಿರಾಶೆಯಲ್ಲಿ ನಾನು ಸಹ ಭಾಗಿಯಾಗಿದ್ದೇನೆ. ಇಂದು ಮಸೂದೆಯನ್ನು ಅಂಗೀಕರಿಸಲು ಅಗತ್ಯವಿರುವ 66 ಪ್ರತಿಶತ ಮತಗಳನ್ನು ನಾವು ಪಡೆಯದಿದ್ದರೂ ಮಹಿಳಾ ಶಕ್ತಿಯ ಸಂಪೂರ್ಣ ಬೆಂಬಲ ಮತ್ತು ಆಶೀರ್ವಾದ ನಮ್ಮೊಂದಿಗೆ ಇದೆ ಎಂದು ನನಗೆ ತಿಳಿದಿದೆ. ನಿನ್ನೆ, ನಮಗೆ ಸಂಖ್ಯಾಬಲವಿರಲಿಲ್ಲ. ಆದರೆ ಅದರರ್ಥ ನಾವು ಸೋತಿದ್ದೇವೆ ಎಂದಲ್ಲ” ಎಂದು ಪ್ರಧಾನಿ ಹೇಳಿದ್ದಾರೆ.

“ಕಾಂಗ್ರೆಸ್ ಈ ರಾಜಕೀಯವನ್ನು ಬ್ರಿಟಿಷರಿಂದ ಆನುವಂಶಿಕವಾಗಿ ಪಡೆದುಕೊಂಡಿದೆ. ಕಾಂಗ್ರೆಸ್ ಇಂದಿಗೂ ಅದೇ ಊರುಗೋಲಿನ ಮೇಲೆಯೇ ನಡೆಯುತ್ತಿದೆ. ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಭಾವನೆಗಳನ್ನು ಕಾಂಗ್ರೆಸ್ ಯಾವಾಗಲೂ ಪ್ರಚೋದಿಸುತ್ತಿದೆ. ಅದಕ್ಕಾಗಿಯೇ ಗಡಿ ನಿರ್ಣಯ ಅಥವಾ ಪುನರ್ವಿಂಗಡಣೆ ಕೆಲವು ರಾಜ್ಯಗಳಿಗೆ ಹಾನಿ ಮಾಡುತ್ತದೆ ಎಂಬ ಸುಳ್ಳನ್ನು ಹರಡಲಾಯಿತು” ಎಂದು ಅವರು ಆರೋಪಿಸಿದ್ದಾರೆ.

2029 ರಲ್ಲಿ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಜಾರಿಗೆ ತರುವ ಮತ್ತು ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಕೆಳಮನೆಯಲ್ಲಿ ಸೋಲಿಸಲಾಯಿತು. ಹಾಜರಿರುವ ಮತ್ತು ಮತ ಚಲಾಯಿಸುವ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರ ಬೆಂಬಲವನ್ನು ಪಡೆದರೆ ಸಂವಿಧಾನ ಆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಗುತ್ತದೆ. ಆದರೆ ಮೂರು ಮಸೂದೆಗಳ ಮೇಲಿನ ಚರ್ಚೆಯ ನಂತರ ನಡೆದ ಸಭೆಯಲ್ಲಿ, 298 ಸದಸ್ಯರು ಮಸೂದೆಯನ್ನು ಬೆಂಬಲಿಸಿದರೆ, 230 ಸದಸ್ಯರು ಅದರ ವಿರುದ್ಧ ಮತ ಚಲಾಯಿಸಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

ಈ ನಿರ್ಣಾಯಕ ಮಸೂದೆ ಅಂಗೀಕಾರಕ್ಕೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿತ್ತು. ಆದರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟವು ಸಂಖ್ಯೆಗಳನ್ನು ಒಟ್ಟುಗೂಡಿಸಲು ಸಾಧ್ಯವಾಗಲಿಲ್ಲ. ಶುಕ್ರವಾರ ರಾತ್ರಿ ಲೋಕಸಭೆಯಲ್ಲಿ ಮಸೂದೆಯ ಮೇಲಿನ ಮತದಾನದ ಸಮಯದಲ್ಲಿ, 298 ಸದಸ್ಯರು ಅದರ ಪರವಾಗಿ ಮತ ಚಲಾಯಿಸಿದರೆ, 230 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು. ಮತ ಚಲಾಯಿಸಿದ 528 ಸದಸ್ಯರಲ್ಲಿ ಮಸೂದೆಗೆ ಮೂರನೇ ಎರಡರಷ್ಟು ಬಹುಮತಕ್ಕೆ 352 ಮತಗಳು ಬೇಕಾಗಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Sat, 18 April 26

Follow Us