34 ವರ್ಷ ಬಳಿಕ ದೇಶಕ್ಕೆ ಹೊಸ ಶಿಕ್ಷಣ ನೀತಿ: ಪ್ರಧಾನಿ ಮೋದಿ ಮಾತು TV9 Live

[lazy-load-videos-and-sticky-control id=”jdJoOhqCipA”] ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಗ್ರೀನ್​ ಸಿಗ್ನಲ್ ಕೊಟ್ಟಿತ್ತು. ಈ ನೀತಿ ಬಗ್ಗೆ ಸದ್ಯ ದೇಶಾದ್ಯಂತ ಚರ್ಚೆ ನಡೀತಿದೆ. ಈ ಮಧ್ಯೆ, ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆ ಬಗ್ಗೆ ಮೋದಿ ಇಂದು ಮಾತ್ನಾಡಲಿದ್ದು, ಎಲ್ಲರ ಚಿತ್ತ ಪ್ರಧಾನಿ ಮಾತಿನತ್ತ ನೆಟ್ಟಿದೆ. ಕೊರೊನಾ ಕಾಲಿಟ್ಟ ಮೇಲೆ ಶಾಲಾ-ಕಾಲೇಜುಗಳು ಬಂದ್ ಆದ್ವು.. ಲಾಕ್​ಡೌನ್ ಬಳಿಕ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಯ್ತು.. ದೇಶದ ಹಲವೆಡೆ ಪರೀಕ್ಷೆಗಳೇ ರದ್ದಾಗಿ ಹೋದ್ವು. ಫಲಿತಾಂಶದ […]

34 ವರ್ಷ ಬಳಿಕ ದೇಶಕ್ಕೆ ಹೊಸ ಶಿಕ್ಷಣ ನೀತಿ: ಪ್ರಧಾನಿ ಮೋದಿ ಮಾತು TV9 Live
Follow us
ಸಾಧು ಶ್ರೀನಾಥ್​
|

Updated on:Aug 07, 2020 | 11:05 AM

[lazy-load-videos-and-sticky-control id=”jdJoOhqCipA”]

ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಗ್ರೀನ್​ ಸಿಗ್ನಲ್ ಕೊಟ್ಟಿತ್ತು. ಈ ನೀತಿ ಬಗ್ಗೆ ಸದ್ಯ ದೇಶಾದ್ಯಂತ ಚರ್ಚೆ ನಡೀತಿದೆ. ಈ ಮಧ್ಯೆ, ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆ ಬಗ್ಗೆ ಮೋದಿ ಇಂದು ಮಾತ್ನಾಡಲಿದ್ದು, ಎಲ್ಲರ ಚಿತ್ತ ಪ್ರಧಾನಿ ಮಾತಿನತ್ತ ನೆಟ್ಟಿದೆ.

ಕೊರೊನಾ ಕಾಲಿಟ್ಟ ಮೇಲೆ ಶಾಲಾ-ಕಾಲೇಜುಗಳು ಬಂದ್ ಆದ್ವು.. ಲಾಕ್​ಡೌನ್ ಬಳಿಕ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಯ್ತು.. ದೇಶದ ಹಲವೆಡೆ ಪರೀಕ್ಷೆಗಳೇ ರದ್ದಾಗಿ ಹೋದ್ವು. ಫಲಿತಾಂಶದ ಲೆಕ್ಕಚಾರವೇ ಉಲ್ಟಾ ಆಯ್ತು. ಹೀಗಾಗಿ ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೆ ತಂದಿದೆ.

ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರ್ತಿದ್ದು, ದೇಶದೆಲ್ಲೆಡೆ ಇದ್ರ ಸಾಧಕ-ಬಾಧಕಗಳದ್ದೇ ಚರ್ಚೆ ನಡೀತಿದೆ.

ಉನ್ನತ ಶಿಕ್ಷಣದಲ್ಲಿನ ಸುಧಾರಣೆ ಬಗ್ಗೆ ಇಂದು ಚರ್ಚೆ..! ಅಂದ್ಹಾಗೇ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯ, ಪರೀಕ್ಷೆ ಅಂಕಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ. ಬೋರ್ಡ್ ಎಕ್ಸಾಂಗೆ ಹೆಚ್ಚಿನ ಮಹತ್ವ ಕೊಟ್ಟಿಲ್ಲ. ಮಕ್ಕಳ ಮೇಲೆ ಮಾನಸಿಕ ಒತ್ತಡ ಕೂಡ ಹೇರುವುದಿಲ್ಲ. ಇಂಥ ಹೊಸ ಶಿಕ್ಷಣ ನೀತಿ ಬಗೆಗಿನ ಚರ್ಚೆಯಲ್ಲಿಂದು ಪ್ರಧಾನಿ ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮ್ಮೇಳನವನ್ನ ಉದ್ಘಾಟಿಸಲಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆ & ಯುಜಿಟಿ ಜಂಟಿಯಾಗಿ ಸಮ್ಮೇಳನ ಆಯೋಜಿಸ್ತಿದೆ. ಇದ್ರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್, ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಸಂಜಯ ದೋತ್ರೆ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿದ ಕರಡು ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಕಸ್ತೂರಿ ರಂಗನ್ & ಸದಸ್ಯರುಗಳು ಭಾಗವಹಿಸಲಿದ್ದಾರೆ.

ಇದಿಷ್ಟೇ ಅಲ್ಲದೆ ಖ್ಯಾತನಾಮ ಶಿಕ್ಷಣ ತಜ್ಞರು, ವಿಜ್ಞಾನಿಗಳು, ರಾಷ್ಟ್ರೀಯ ಶಿಕ್ಷಣ ನೀತಿಯ ವಿವಿಧ ಆಯಾಮಗಳ ಬಗ್ಗೆ ಮಾತ್ನಾಡಲಿದ್ದಾರೆ. ಈ ವೇಳೆ ಭವಿಷ್ಯದ ಗುಣಮಟ್ಟದ ಶಿಕ್ಷಣವನ್ನ ಮಕ್ಕಳಿಗೆ ತಲುಪಿಸಲು ತಂತ್ರಜ್ಞಾನವನ್ನು ಸಮಾನವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸುವ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನು ಇತ್ತೀಚಿಗಷ್ಟೇ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್​ನಲ್ಲಿ ಮಾತ್ನಾಡಿದ್ದ ಮೋದಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಯುವಜನತೆ ಉದ್ಯೋಗ ಕೇಳುವವರಲ್ಲ, ಬದಲಿಗೆ ಉದ್ಯೋಗ ನೀಡುವವರಾಗ್ತಾರೆ ಅಂದಿದ್ರು. ಜೊತೆಗೆ ಇದ್ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಯುವಜನತೆಯ ಮೇಲಾಗುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಪ್ರಧಾನಿ ಮಾತನಾಡಲಿದ್ದಾರೆ. ಮೋದಿ ಇಂದು ಯಾವೆಲ್ಲಾ ವಿಷಯ ಚರ್ಚೆ ಮಾಡ್ತಾರೆ ಅನ್ನೋದನ್ನ ಕಾದು ನೋಡ್ಬೇಕಿದೆ.

Published On - 7:03 am, Fri, 7 August 20

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ