Rahul Gandhi: ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ತಾವು ರಷ್ಯಾ- ಉಕ್ರೇನ್ ಯುದ್ಧವನ್ನು ತಡೆದಿದ್ದಾಗಿ ಎಲ್ಲರೂ ಹೇಳುತ್ತಾರೆ. ಆದರೆ, ಯುದ್ಧ ನಿಲ್ಲಿಸಿದ ಅವರಿಗೆ ಪೇಪರ್ ಸೋರಿಕೆ ನಿಲ್ಲಿಸಲು ಮಾತ್ರ ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

Rahul Gandhi: ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ
ರಾಹುಲ್ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on: Jun 20, 2024 | 4:31 PM

ನವದೆಹಲಿ: ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ (UGC- NET Exams Cancelation) ಸಂಬಂಧಿಸಿದಂತೆ ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “ಮೋದಿಯವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ, ಕೆಲವು ಕಾರಣಗಳಿಂದ ನರೇಂದ್ರ ಮೋದಿ (PM Narendra Modi) ಅವರಿಗೆ ಭಾರತದಲ್ಲಿ ಪೇಪರ್ ಸೋರಿಕೆಯನ್ನು ತಡೆಯಲು ಸಾಧ್ಯವಾಗಿಲ್ಲ ಎಂಬುದು ಅಚ್ಚರಿಯ ಸಂಗತಿ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಆದರೆ ನಮ್ಮ ದೇಶದಲ್ಲಿ ಪೇಪರ್ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ‘ಪೇಪರ್ ಲೀಕ್ ಸರ್ಕಾರ’; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ

ಯುಜಿಸಿ-ನೆಟ್ ರದ್ದತಿ ಮತ್ತು ನಡೆಯುತ್ತಿರುವ ನೀಟ್ ವಿವಾದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ ರಾಹುಲ್ ಗಾಂಧಿ, ಮೋದಿಯವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ, ಅವರಿಗೆ ನರೇಂದ್ರ ಮೋದಿಯವರು ಭಾರತದಲ್ಲಿ ಪೇಪರ್ ಸೋರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ ಅಥವಾ ಅವರು ಪೇಪರ್ ಸೋರಿಕೆಯನ್ನು ನಿಲ್ಲಿಸಲು ಬಯಸಲಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜೂನ್ 18ರಂದು ನಡೆಸಿದ UGC-NET ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಒಳಹರಿವಿನ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಆ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

‘ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪತ್ರಿಕೆ ಸೋರಿಕೆಯಾಗುತ್ತಿದೆ’ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಮ್ಮ ದೇಶದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ. ಅದರ ಬದಲಾಗಿ “ನಿರ್ದಿಷ್ಟ ಸಂಸ್ಥೆ”ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ