AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ

ಜೆರುಸಲೆಮ್‌ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು, ಭಾರತ ಗಾಜಾ ಶಾಂತಿ ಪ್ರಯತ್ನಗಳನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. ಸಂಘರ್ಷದಿಂದಾಗಿ ಮಾನವೀಯತೆ ಎಂದಿಗೂ ಬಳಲಬಾರದು ಎಂದು ಮೋದಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ
Pm Modi With NetanyahuImage Credit source: PTI
ಸುಷ್ಮಾ ಚಕ್ರೆ
|

Updated on: Feb 26, 2026 | 7:39 PM

Share

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

“ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು ನಿಂತಿದ್ದೇವೆ. ಮುಂದೆಯೂ ಅದನ್ನು ಮುಂದುವರಿಸುತ್ತೇವೆ. ಭಯೋತ್ಪಾದನೆಗೆ ಜಗತ್ತಿನಲ್ಲಿ ಸ್ಥಾನವಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ

ಗಾಜಾದಲ್ಲಿನ ಪರಿಸ್ಥಿತಿಯ ಕುರಿತು ಭಾರತದ ನಿಲುವಿನ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಗಾಜಾ ಶಾಂತಿ ಯೋಜನೆ ಶಾಂತಿಗೆ ಮಾರ್ಗವನ್ನು ತೆರೆದಿದೆ. ಮುಂದಿನ ದಿನಗಳಲ್ಲೂ ಭಾರತವು ಎಲ್ಲಾ ರಾಷ್ಟ್ರಗಳೊಂದಿಗೆ ಸಹಕರಿಸುವುದನ್ನು ಮತ್ತು ಸಂವಾದವನ್ನು ಮುಂದುವರಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ ಎಂಬುದು ಭಾರತ ಮತ್ತು ಇಸ್ರೇಲ್‌ಗೆ ಸ್ಪಷ್ಟವಾಗಿದೆ. ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರ ವಿರುದ್ಧ ನಾವು ಹೋರಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಪ್ರಧಾನಿ ಮೋದಿಯವರ ಎರಡನೇ ಇಸ್ರೇಲ್ ಭೇಟಿಯಾಗಿದೆ. ಮುಂದಿನ ವರ್ಷ ನೆತನ್ಯಾಹು ಭಾರತಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು ಅವರು 2017ರಲ್ಲಿ ಮೊದಲ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ