PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದಲ್ಲಿ 62,000 ಕೋಟಿ ರೂ.ಗೂ ಅಧಿಕ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ಅವರು ಮುಂದಿನ 10 ದಿನಗಳ ಕಾಲ 12 ರಾಜ್ಯಗಳಿಗೆ ಪ್ರವಾಸ ಮಾಡಲಿದ್ದಾರೆ. ಇದೀಗ ಮೊದಲ ಭೇಟಿಯನ್ನು ತೆಲಂಗಾಣಕ್ಕೆ ನೀಡಿದ್ದಾರೆ. ವಿದ್ಯುತ್, ರೈಲು ಮತ್ತು ರಸ್ತೆ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 04, 2024 | 12:57 PM

ಹೈದರಾಬಾದ್, ಮಾ.4: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ಮೋದಿ ಅವರು 29 ಯೋಜನೆಗಳ ಉದ್ಘಾಟನೆ ಹಾಗೂ ಶುಂಕಸ್ಥಾಪನೆ ಮಾಡಿದ್ದಾರೆ. ಪ್ರಧಾನಿ ಅವರು ಮುಂದಿನ 10 ದಿನಗಳ ಕಾಲ 12 ರಾಜ್ಯಗಳಿಗೆ ಪ್ರವಾಸ ಮಾಡಲಿದ್ದಾರೆ. ಇದೀಗ ಮೊದಲ ಭೇಟಿಯನ್ನು ತೆಲಂಗಾಣಕ್ಕೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಎಲ್ಲ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಲ್ಲಿನ ಬಿಜೆಪಿ ಮುಖಂಡರ ಜತೆಗೆ ಮಾತುಕತೆ ಕೂಡ ನಡೆಸಲಿದ್ದಾರೆ. ಇನ್ನು ಮೋದಿ ಅವರು 62,000 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿದ್ಯುತ್, ರೈಲು ಮತ್ತು ರಸ್ತೆ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಹಲವು ವರ್ಷಗಳಿಂದ ತೆಲಂಗಾಣ ಅಜ್ಞಾನದ ವಿಚಾರಕ್ಕೆ ಬಲಿಪಶುವಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ತೆಲಂಗಾಣದ ಅಭಿವೃದ್ಧಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ. ಇಂದು, ಆದಿಲಾಬಾದ್, ಬೇಲಾ ಮತ್ತು ಮುಲುಗುನಲ್ಲಿ ಎರಡು ಹೊಸ ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಸಮಾರಂಭವೂ ನಡೆಯಿತು. ಈ ಆಧುನಿಕ ರಸ್ತೆ ಮತ್ತು ರೈಲು ಮೂಲಸೌಕರ್ಯಗಳು ತೆಲಂಗಾಣವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದರು.

ಇಡೀ ಜಗತ್ತು ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಮಾತನಾಡುತ್ತಿದೆ. ಕಳೆದ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆ ಕಂಡಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ. ಶೀಘ್ರದಲ್ಲೇ, ನಮ್ಮ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಪ್ರಧಾನಿ ಹೇಳಿದರು. ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಭಾಗವಹಿಸಿದರು.

ಪ್ರಧಾನಿ ಮೋದಿ ಅವರು ಪೆದ್ದಪಲ್ಲಿಯಲ್ಲಿ ತೆಲಂಗಾಣ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್‌ನ ಎನ್‌ಟಿಪಿಸಿಯ 800 ಮೆಗಾವ್ಯಾಟ್ (ಯುನಿಟ್ -2)ನ್ನು ಉದ್ಘಾಟಿಸಿದರು. ಅಲ್ಟ್ರಾ-ಸೂಪರ್ಕ್ರಿಟಿಕಲ್ ತಂತ್ರಜ್ಞಾನದ ಅಡಿಯಲ್ಲಿ ತೆಲಂಗಾಣಕ್ಕೆ 85 ಪ್ರತಿಶತದಷ್ಟು ವಿದ್ಯುತ್​​ ಪೂರೈಕೆಯಾಗುತ್ತದೆ. ಭಾರತದ NTPC ಯ ಎಲ್ಲಾ ವಿದ್ಯುತ್ ಕೇಂದ್ರಗಳಲ್ಲಿ ಸರಿಸುಮಾರು 42 ಪ್ರತಿಶತದಷ್ಟು ವಿದ್ಯುತ್ ಉತ್ಪಾದನೆಯ ದಕ್ಷತೆಯನ್ನು ಹೊಂದಿದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ

ಜತೆಗೆ ಮೋದಿ ಅವರು ಹೊಸದಾಗಿ ವಿದ್ಯುದೀಕರಣಗೊಂಡ ಅಂಬಾರಿ-ಅದಿಲಾಬಾದ್-ಪಿಂಪಲ್ಖುತಿ ರೈಲು ಮಾರ್ಗವನ್ನು ಸಹ ಉದ್ಘಾಟಿಸಿದರು. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಮತ್ತು ತೆಲಂಗಾಣದಿಂದ ಛತ್ತೀಸ್‌ಗಢದೊಂದಿಗೆ NH-353B ​​ಮತ್ತು NH-163 ಮೂಲಕ ಸಂಪರ್ಕ ಸಾಧಿಸುವ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮೋದಿ ಅವರು ಅಡಿಪಾಯ ಹಾಕಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:27 pm, Mon, 4 March 24

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ