AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಾತೀತವಾಗಿ ಧನ್ಯವಾದಗಳು; ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿದವರಿಗೆ ನಮೋ ಎಂದ ಪ್ರಧಾನಿ ಮೋದಿ

Womens Reservation Bill passed in Lok Sabha; ನಾರಿ ಶಕ್ತಿ ವಂದನ್ ಕಾಯ್ದೆಯೊಂದಿಗೆ ಹೊಸ ಸದನವು ಉತ್ತಮ ಆರಂಭವನ್ನು ಪಡೆದಿದೆ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅಭೂತಪೂರ್ವ ವೇಗವನ್ನು ನೀಡಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಂದ ಐತಿಹಾಸಿಕ ಬೆಂಬಲವನ್ನು ಪಡೆದಿದೆ ಎಂದು ಮೋದಿ ಹೇಳಿದ್ಧಾರೆ.

ಪಕ್ಷಾತೀತವಾಗಿ ಧನ್ಯವಾದಗಳು; ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿದವರಿಗೆ ನಮೋ ಎಂದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Sep 20, 2023 | 10:26 PM

Share

ನವದೆಹಲಿ, ಸೆಪ್ಟೆಂಬರ್ 20: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ‘ನಾರಿ ಶಕ್ತಿ ವಂದನಾ ಅಧಿನಿಯಮ (Nari Shakti Vandan Adhiniyam)’ ಅನ್ನು ಲೋಕಸಭೆ ಅಂಗೀಕರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಮಸೂದೆಯನ್ನು ಬೆಂಬಲಿಸಿ ಮತ ಚಲಾಯಿಸಿದವರಿಗೆ ಪಕ್ಷಾತೀತವಾಗಿ ಬೆಂಬಲ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.

‘ಅಂತಹ ಅದ್ಭುತ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಸಂವಿಧಾನದ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆ, 2023 ರ ಅಂಗೀಕಾರಗೊಂಡಿರುವುದರಿಂದ ಸಂತೋಷವಾಗಿದೆ. ಈ ವಿಧೇಯಕವನ್ನು ಬೆಂಬಲಿಸಿ ಮತ ಹಾಕಿದ ಸಂಸದರಿಗೆ ಪಕ್ಷಾತೀತವಾಗಿ ಧನ್ಯವಾದ ಸಲ್ಲಿಸುತ್ತೇನೆ. ನಾರಿ ಶಕ್ತಿ ವಂದನ್ ಅಧಿನಿಯಮ್ ಒಂದು ಐತಿಹಾಸಿಕ ಶಾಸನವಾಗಿದ್ದು, ಇದು ಮಹಿಳಾ ಸಬಲೀಕರಣವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ’ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್​ ಸಂದೇಶ

ನಾರಿ ಶಕ್ತಿ ವಂದನ್ ಕಾಯ್ದೆಯೊಂದಿಗೆ ಹೊಸ ಸದನವು ಉತ್ತಮ ಆರಂಭವನ್ನು ಪಡೆದಿದೆ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅಭೂತಪೂರ್ವ ವೇಗವನ್ನು ನೀಡಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಂದ ಐತಿಹಾಸಿಕ ಬೆಂಬಲವನ್ನು ಪಡೆದಿದೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಸಂಕಲ್ಪವನ್ನು ಈಡೇರಿಸುವಲ್ಲಿ ಇದು ಒಂದು ಮೈಲಿಗಲ್ಲು ಎಂಬುದು ಸಾಬೀತಾಗಿದೆ. ಎಲ್ಲ ಸಂಸದರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮತ್ತೊಂದು ಪೋಸ್ಟ್​​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ

ಲೋಕಸಭೆಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಬುಧವಾರ ರಾತ್ರಿ ಮಸೂದೆಯನ್ನು ಮತಕ್ಕೆ ಹಾಕಿದ್ದಾರೆ. ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ.ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು. ಪರವಾಗಿ 454 ಸಂಸದರು ಮತದಾನ ಮಾಡಿದ್ದರೆ ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮತ ಚಲಾಯಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್