AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅವರು ಭಾರತದ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್​ಗೆ ಬಹಿರಂಗವಾಗಿ ಧನ್ಯವಾದ ತಿಳಿಸಿದ್ದಾರೆ. ಅಮೆರಿಕದ ಈ ಸುಂಕ ಕಡಿತ ಭಾರತಕ್ಕೆ ಅಪಾರ ಅವಕಾಶಗಳನ್ನು ತೆರೆಯುತ್ತದೆ ಎಂದಿದ್ದಾರೆ.

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ
Trump And Modi
ಸುಷ್ಮಾ ಚಕ್ರೆ
|

Updated on: Feb 02, 2026 | 11:40 PM

Share

ನವದೆಹಲಿ, ಫೆಬ್ರವರಿ 2: ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಅಲ್ಲದೆ, ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ ನಮ್ಮ ಮುಂದಿದೆ ಎಂದು ಕೂಡ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಭಾರತದಲ್ಲಿ ತಯಾರಾದ ಉತ್ಪನ್ನಗಳು ಈಗ ಶೇ. 18ರಷ್ಟು ಕಡಿಮೆ ಸುಂಕವನ್ನು ಹೊಂದಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನನ್ನ ಆತ್ಮೀಯ ಗೆಳೆಯರಾದ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಇಂದು ಮಾತನಾಡಿ ಸಂತೋಷವಾಯಿತು. ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಈಗ ಶೇ. 25ರ ಬದಲು ಶೇ. 18ರಷ್ಟು ಸುಂಕವನ್ನು ಮಾತ್ರ ಹೊಂದುತ್ತಿರುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

“ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಅಲ್ಲದೆ ಪರಸ್ಪರ ಅಪಾರ ಅವಕಾಶಗಳನ್ನು ತೆರೆಯುತ್ತದೆ. ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ

ವ್ಯಾಪಾರ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ರಷ್ಯಾದ ತೈಲ ಖರೀದಿಯನ್ನು ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇಂದು ಟ್ರಂಪ್ ತಮ್ಮ ಘೋಷಣೆಯ ವೇಳೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಷಯವನ್ನು ಮಾತ್ರವಲ್ಲದೆ ಭಾರತ ರಷ್ಯಾದ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ತೈಲ ಖರೀದಿ ಮಾಡಲಿದೆ ಎಂದು ಕೂಡ ಹೇಳಿದ್ದರು. ಆದರೆ, ಈ ಬಗ್ಗೆ ಭಾರತ ಸರ್ಕಾರದಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ