AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಭಯೋತ್ಪಾದನಾ ವಿರೋಧಿ ಹೋರಾಟವನ್ನು ಬೆಂಬಲಿಸಿದ್ದಕ್ಕೆ ಸಿಂಗಾಪುರ ಪ್ರಧಾನಿಗೆ ಮೋದಿ ಧನ್ಯವಾದ

ಸಿಂಗಾಪುರದ ಪ್ರಧಾನಿಯ ಜೊತೆ ದ್ವಿಪಕ್ಷೀಯ ಮಾತುಕತೆಯಲ್ಲಿ ಭಯೋತ್ಪಾದನೆ ವಿರುದ್ಧ ಜಾಗತಿಕ ಒಗ್ಗಟ್ಟಿನ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಎತ್ತಿ ತೋರಿಸಿದ್ದಾರೆ. ಭಾರತ-ಸಿಂಗಾಪುರದ ಸಂಬಂಧಗಳು ಸಾಂಪ್ರದಾಯಿಕ ರಾಜತಾಂತ್ರಿಕತೆಯನ್ನು ಮೀರಿ ವಿಸ್ತರಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದಿದ್ದಾರೆ.

ಭಾರತದ ಭಯೋತ್ಪಾದನಾ ವಿರೋಧಿ ಹೋರಾಟವನ್ನು ಬೆಂಬಲಿಸಿದ್ದಕ್ಕೆ ಸಿಂಗಾಪುರ ಪ್ರಧಾನಿಗೆ ಮೋದಿ ಧನ್ಯವಾದ
Pm Modi With Singapore Pm
ಸುಷ್ಮಾ ಚಕ್ರೆ
|

Updated on: Sep 04, 2025 | 3:23 PM

Share

ನವದೆಹಲಿ, ಸೆಪ್ಟೆಂಬರ್ 4: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಲಾರೆನ್ಸ್ ಜೊತೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಬಗ್ಗೆ ಎರಡೂ ದೇಶಗಳು ಸಾಮಾನ್ಯ ಕಳವಳಗಳನ್ನು ಹಂಚಿಕೊಳ್ಳುತ್ತವೆ ಎಂದು ಹೇಳಿದ್ದಾರೆ.

“ಭಯೋತ್ಪಾದನೆಯ ವಿರುದ್ಧ ಏಕತೆಯಿಂದ ಹೋರಾಡುವುದು ಎಲ್ಲಾ ರಾಷ್ಟ್ರಗಳ ಕರ್ತವ್ಯ ಎಂದು ನಾವು ನಂಬುತ್ತೇವೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತದ ಜನರ ಬಗ್ಗೆ ಸಹಾನುಭೂತಿ ಮತ್ತು ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ಅವರ ಬೆಂಬಲಕ್ಕಾಗಿ ಪ್ರಧಾನಿ ವಾಂಗ್ ಮತ್ತು ಸಿಂಗಾಪುರ ಸರ್ಕಾರಕ್ಕೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ದಸರಾಗೆ ಮೋದಿ ಸರ್ಕಾರದ ಉಡುಗೊರೆ; ನೂತನ ಜಿಎಸ್​ಟಿಯಿಂದ ಈ ವಸ್ತುಗಳ ಬೆಲೆ ಇಳಿಕೆ

ದೆಹಲಿಯಲ್ಲಿ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ಸಂಬಂಧಗಳು ರಾಜತಾಂತ್ರಿಕತೆಯನ್ನು ಮೀರಿವೆ. ಭಯೋತ್ಪಾದನೆಯ ಬಗ್ಗೆ ನಮಗೆ ಒಂದೇ ರೀತಿಯ ಕಾಳಜಿಗಳಿವೆ. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವುದು ಎಲ್ಲಾ ಮಾನವೀಯ ರಾಷ್ಟ್ರಗಳ ಕರ್ತವ್ಯ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ತಂತ್ರಜ್ಞಾನ ಮತ್ತು ನಾವೀನ್ಯತೆ ನಮ್ಮ ಪಾಲುದಾರಿಕೆಯ ಬಲವಾದ ಸ್ತಂಭಗಳಾಗಿವೆ. ನಾವು AI, ಕ್ವಾಂಟಮ್ ಮತ್ತು ಇತರ ಡಿಜಿಟಲ್ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಿರ್ಧರಿಸಿದ್ದೇವೆ” ಎಂದು ಮೋದಿ ಅವರು ಉದಯೋನ್ಮುಖ ತಂತ್ರಜ್ಞಾನಗಳ ಮೇಲೆ ಗಮನ ಹರಿಸುವುದಾಗಿ ಪುನರುಚ್ಚರಿಸಿದರು.

ಇದನ್ನೂ ಓದಿ: ಕಾಂಗ್ರೆಸ್-ಆರ್​​ಜೆಡಿಯಿಂದ ದೇಶದ ಎಲ್ಲ ತಾಯಂದಿರಿಗೆ ಅವಮಾನ; ಅಮ್ಮನನ್ನು ನೆನೆದು ಭಾವುಕರಾದ ಪ್ರಧಾನಿ ಮೋದಿ

ಆರ್ಥಿಕ ಸಹಯೋಗದ ಬಗ್ಗೆ ಚರ್ಚಿಸಿದ ಮೋದಿ, ಪರಸ್ಪರ ವ್ಯಾಪಾರವನ್ನು ವೇಗಗೊಳಿಸಲು ದ್ವಿಪಕ್ಷೀಯ ಸಮಗ್ರ ಆರ್ಥಿಕ ಸಹಕಾರ ಒಪ್ಪಂದ ಮತ್ತು ಆಸಿಯಾನ್ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದಗಳಂತಹ ವ್ಯಾಪಾರ ಒಪ್ಪಂದಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದರು. ಚೆನ್ನೈನಲ್ಲಿರುವ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರ ಮತ್ತು ಸುಸ್ಥಿರ ಕೈಗಾರಿಕಾ ಉದ್ಯಾನವನಗಳಂತಹ ಉಪಕ್ರಮಗಳ ಮೂಲಕ ಭಾರತದ ಮುಂದುವರಿದ ಉತ್ಪಾದನೆಯನ್ನು ಬೆಂಬಲಿಸುವಲ್ಲಿ ಸಿಂಗಾಪುರದ ಪಾತ್ರವನ್ನು ಅವರು ಒತ್ತಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ