ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು. 

ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ
ರೋಮ್​ ತಲುಪಿರುವ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on: Oct 30, 2021 | 8:33 AM

ನಿನ್ನೆ ರೋಮ್​​ಗೆ ತೆರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ಜಿ20 ಶೃಂಗಸಭೆ (G20 Summit)ಯಲ್ಲಿ ಮಾತನಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ನರೇಂದ್ರ ಮೋದಿಯವರು ನಿನ್ನೆ ರೋಮ್​​ಗೆ ತೆರಳಿದ ಬಳಿಕ ಮೊದಲು ಮಹಾತ್ಮ ಗಾಂಧಿ ಪ್ರತಿಮೆಗೆ  ಗೌರವ ಸಲ್ಲಿಸಿದ್ದಾರೆ. ಬಳಿಕ ಟ್ವೀಟ್​ ಮಾಡಿ, ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿರುವ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ನನಗೆ ರೋಮ್​​ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದರು.  ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್​​ರೊಂದಿಗೆ ಕೂಡ ಮಾತುಕತೆ ನಡೆಸಿದರು. 

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು.  ಕೊವಿಡ್​ 19 ಸಾಂಕ್ರಾಮಿಕ ಕಾಲಿಟ್ಟ ಮೇಲೆ ಇದೇ ಮೊದಲ ಜಿ20 ಶೃಂಗಸಭೆ ನಾಯಕರ ಭಾಗವಹಿಸುವಿಕೆಯಲ್ಲಿ ನಡೆಯುತ್ತಿದೆ.  ನಿನ್ನೆ ಬೆಳಗ್ಗೆ  ಇಟಲಿಗೆ ಹೋಗಿ ಇಳಿದ ಪ್ರಧಾನಿ ಮೋದಿಯವರನ್ನು ಅಲ್ಲಿರುವ ಭಾರತೀಯರು ಮಂತ್ರ ಪಠಿಸಿ ಸ್ವಾಗತಿಸಿದ್ದಾರೆ.  ಇಟಲಿಗೆ ಹೋಗುವ ಪೂರ್ವದಲ್ಲಿ ಮಾತನಾಡಿದ್ದ ಅವರು, ಸದ್ಯದ ಜಾಗತಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಈ ಜಿ20 ಶೃಂಗಸಭೆ ನಮಗೆ ವೇದಿಕೆಯಾಗಿದೆ. ಹಾಗೇ, ಆರ್ಥಿಕ ಸಬಲೀಕರಣ, ಸಾಂಕ್ರಾಮಿಕದಿಂದ ಉಂಟಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು, ಸ್ಥಿತಿಸ್ಥಾಪಕತ್ವ ಅಭಿವೃದ್ಧಿ ಸ್ಥಾಪಿಸಲು ಜಿ20 ಹೇಗೆ ಎಂಜಿನ್​ ಆಗಬಹುದು ಎಂಬುದನ್ನು ನಾವು ಚರ್ಚಿಸಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Puneeth Rajkumar Death: ಅಪ್ಪು ಅಂತಿಮ ದರ್ಶನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆಲೆಬ್ರಿಟಿಗಳು; ಫ್ಯಾನ್ಸ್​ ಕಣ್ಣೀರು ತಡೆಯಲು ಸಾಧ್ಯವಿಲ್ಲ​

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು