NITI Aayog Governing Council meet: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ

ಹಲವಾರು ಮುಖ್ಯಮಂತ್ರಿಗಳು ಹಾಜರಾಗಲು ತಮ್ಮ ಒಪ್ಪಿಗೆಯನ್ನು ನೀಡಿದರೆ, ಬಿಜೆಪಿ ಅಧಿಕಾರದಲ್ಲಿ ಇಲ್ಲದೇ ಇರುವ ರಾಜ್ಯಗಳ ಸಿಎಂಗಳು ಕೇಂದ್ರ ಬಜೆಟ್‌ನಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿ ಸಭೆಯಿಂದ ದೂರ ಉಳಿಯಲಿದ್ದಾರೆ. ಇಂಡಿಯಾ ಬಣದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ

NITI Aayog Governing Council meet: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 27, 2024 | 7:31 AM

ದೆಹಲಿ ಜುಲೈ: ನೀತಿ ಆಯೋಗದ (NITI Aayog) 9 ನೇ ಆಡಳಿತ ಮಂಡಳಿ ಸಭೆಯು ಇಂದು (ಶನಿವಾರ) ನಡೆಯಲಿದ್ದು, ಇದು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ವಿಕಸಿತ್ ಭಾರತ್ @ 2047 ದಾಖಲೆಯನ್ನು ಚರ್ಚಿಸುವ ಗುರಿಯನ್ನು ಹೊಂದಿದೆ. ನೀತಿ ಆಯೋಗ್‌ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ, ಪ್ರಧಾನಿ ಮೋದಿ (Narendra Modi) ಇದರ ಅಧ್ಯಕ್ಷರಾಗಿದ್ದಾರೆ.

ಹಲವಾರು ಮುಖ್ಯಮಂತ್ರಿಗಳು ಹಾಜರಾಗಲು ತಮ್ಮ ಒಪ್ಪಿಗೆಯನ್ನು ನೀಡಿದರೆ, ಬಿಜೆಪಿ ಅಧಿಕಾರದಲ್ಲಿ ಇಲ್ಲದೇ ಇರುವ ರಾಜ್ಯಗಳ ಸಿಎಂಗಳು ಕೇಂದ್ರ ಬಜೆಟ್‌ನಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿ ಸಭೆಯಿಂದ ದೂರ ಉಳಿಯಲಿದ್ದಾರೆ. ಇಂಡಿಯಾ ಬಣದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಗೆ ಹಾಜರಾಗುವುದಾಗಿ ಹೇಳಿದ್ದಾರೆ.

ಸಭೆಯಲ್ಲಿ ಭಾಗವಹಿಸುತ್ತಿರುವ ಮುಖ್ಯಮಂತ್ರಿಗಳು

  •  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ
  •  ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಅವರ ಉಪ ಮುಖ್ಯಮಂತ್ರಿ  ಚೌನಾ ಮೇ
  •  ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ
  •  ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
  •  ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ
  •  ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ
  •  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
  •  ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್
  •  ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ
  •  ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು
  •  ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
  •  ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ

ಸಭೆ ಬಹಿಷ್ಕರಿಸಿದ ಮುಖ್ಯಮಂತ್ರಿಗಳು

  • ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್
  • ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ
  • ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್
  • ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ
  •  ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
  • ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
  • ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು

ಈ ದೃಢೀಕೃತ ಹೆಸರುಗಳ ಹೊರತಾಗಿ, ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ್‌ಗಳ ಇತರ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಆದರೆ ನಿತೀಶ್ ಕುಮಾರ್ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ದೃಢೀಕರಣ ಇದುವರೆಗೆ ಸಿಕ್ಕಿಲ್ಲ.

ಹೇಳಿಕೆಯ ಪ್ರಕಾರ, ಸಭೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿ ಆಡಳಿತ ಮತ್ತು ಸಹಯೋಗವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ, ಸರ್ಕಾರದ ಮಧ್ಯಸ್ಥಿಕೆಗಳ ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಮತ್ತು ನಗರದ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಕನ್ವರ್ ಮಾರ್ಗದಲ್ಲಿ ಅಂಗಡಿಗಳಲ್ಲಿ ಹೆಸರು ಪ್ರದರ್ಶನ; ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂಕೋರ್ಟ್

“ಜುಲೈ 27, 2024 ರಂದು ನಡೆಯುವ ಆಡಳಿತ ಮಂಡಳಿ ಸಭೆಯು ವಿಕಸಿತ್ ಭಾರತ್ @2047 ರ ವಿಷನ್ ಡಾಕ್ಯುಮೆಂಟ್‌ನ ಅಪ್ರೋಚ್ ಪೇಪರ್ ಅನ್ನು ಚರ್ಚಿಸುತ್ತದೆ. ಸಭೆಯು ವಿಕಸಿತ್ ಭಾರತ್ @2047 ರ ಗುರಿಯನ್ನು ಸಾಧಿಸುವಲ್ಲಿ ರಾಜ್ಯಗಳ ಪಾತ್ರದ ಕುರಿತು ವಿವರವಾದ ಚರ್ಚೆಗಳನ್ನು ಮಾಡಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 3ನೇ ರಾಷ್ಟ್ರೀಯ ಸಮ್ಮೇಳನದ ಶಿಫಾರಸುಗಳ ಬಗ್ಗೆಯೂ ಸಭೆ ಗಮನಹರಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ