AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ಗೆ ಪ್ರಧಾನಿ ಭೇಟಿ, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿರುವ ಮೋದಿ

ಭಾರತ(India) ಹಾಗೂ ಬ್ರಿಟನ್(Britain) ನಡುವಿನ ಬಹು ನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದ ಕೊನೆಗೂ ಅಂತಿಮಗೊಂಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಬ್ರಿಟನ್​ಗೆ ಭೇಟಿ ನೀಡಲಿದ್ದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿದ್ದಾರೆ. ಹಾಗಾದರೆ ಈ ಮುಕ್ತ ವ್ಯಾಪಾರ ಒಪ್ಪಂದವೇನೆಂದು ನೋಡುವುದಾದರೆ ಯಾವುದೋ ಒಂದು ದೇಶ ಮತ್ತೂಂದು ದೇಶದ ಜೊತೆಗೆ ಸುಂಕ ರಹಿತವಾಗಿ ಮಾಡಿಕೊಳ್ಳುವ ಒಪ್ಪಂದವನ್ನು ಮುಕ್ತ ವ್ಯಾಪಾರ ಒಪ್ಪಂದ ಎನ್ನಲಾಗುತ್ತದೆ. ಈ ವೇಳೆ ಉಭಯ ದೇಶಗಳ ನಡುವೆ ವಿನಿಮಯವಾಗುವ ಸರಕುಗಳಿಗೆ ಆಮದು ಸುಂಕ ವಿಧಿಸಲಾಗುವುದಿಲ್ಲ

ಬ್ರಿಟನ್​ಗೆ ಪ್ರಧಾನಿ ಭೇಟಿ, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿರುವ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 23, 2025 | 12:12 PM

Share

ನವದೆಹಲಿ, ಜುಲೈ 23: ಭಾರತ(India) ಹಾಗೂ ಬ್ರಿಟನ್(Britain) ನಡುವಿನ ಬಹು ನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದ ಕೊನೆಗೂ ಅಂತಿಮಗೊಂಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಬ್ರಿಟನ್​ಗೆ ಭೇಟಿ ನೀಡಲಿದ್ದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿದ್ದಾರೆ. ಹಾಗಾದರೆ ಈ ಮುಕ್ತ ವ್ಯಾಪಾರ ಒಪ್ಪಂದವೇನೆಂದು ನೋಡುವುದಾದರೆ ಯಾವುದೋ ಒಂದು ದೇಶ ಮತ್ತೂಂದು ದೇಶದ ಜೊತೆಗೆ ಸುಂಕ ರಹಿತವಾಗಿ ಮಾಡಿಕೊಳ್ಳುವ ಒಪ್ಪಂದವನ್ನು ಮುಕ್ತ ವ್ಯಾಪಾರ ಒಪ್ಪಂದ ಎನ್ನಲಾಗುತ್ತದೆ. ಈ ವೇಳೆ ಉಭಯ ದೇಶಗಳ ನಡುವೆ ವಿನಿಮಯವಾಗುವ ಸರಕುಗಳಿಗೆ ಆಮದು ಸುಂಕ ವಿಧಿಸಲಾಗುವುದಿಲ್ಲ.

ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ)ಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ, ಇದು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರ ಪ್ರಕಾರ, ಒಪ್ಪಂದವು ಅಂತಿಮ ಕಾನೂನು ಹಂತದಲ್ಲಿದೆ, ಮೇ 6 ರಂದು ಭಾರತ-ಬ್ರಿಟಿಷ್ ಅಧಿಕಾರಿಗಳ ನಡುವೆ ನಡೆದ ಮಾತುಕತೆಯ ಆಧಾರದ ಮೇಲೆ ಅದು ಜಾರಿಗೆ ಬಂದಿದೆ ಎಂದಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದದ ಮೂಲಕ, ಭಾರತ- ಯುಕೆ 2030 ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು 120 ಶತಕೋಟಿ ಅಮೆರಿಕನ್ ಡಾಲರ್‌ಗಳಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿವೆ.

ಮತ್ತಷ್ಟು ಓದಿ: Narendra Modi: ಪ್ರಧಾನಿ ಮೋದಿ ಆಗಸ್ಟ್​ನಲ್ಲಿ ಚೀನಾಗೆ ಭೇಟಿ ನೀಡುವ ಸಾಧ್ಯತೆ

ಈ ಒಪ್ಪಂದವನ್ನು ಐತಿಹಾಸಿಕ ಎಂದು ಬಣ್ಣಿಸಿದ ಪ್ರಧಾನಿ ಮೋದಿ ಹಾಗೂ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌, ಆರ್ಥಿಕತೆ, ಹೂಡಿಕೆ, ನಾವೀನ್ಯತೆ ಮತ್ತು ಉದ್ಯೋಗ ಸೃಷ್ಟಿಗೆ ಇದು ನೆರವು ನೀಡುತ್ತದೆ ಎಂದು ಹೇಳಿದ್ದಾರೆ. ಇದರೊಂದಿಗೆ ಡಬಲ್‌ ಕಾಂಟ್ರಿಬ್ಯೂಷನ್‌ ಒಪ್ಪಂದವನ್ನು ಮಾಡಿಕೊಂಡಿದ್ದು, ಒಂದು ದೇಶದ ನಾಗರಿಕರು ಮತ್ತೂಂದು ದೇಶದಲ್ಲಿ ಕೆಲಸ ಮಾಡುವಾಗ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳಲು ಅವಕಾಶ ಒದಗಿಸುತ್ತದೆ.

ಈ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವ್ಯಾಪಾರ ನಿಯೋಗವೂ ಇದೆ. ಬ್ರಿಟನ್‌ನಲ್ಲಿ ತಮ್ಮ ಕಾರ್ಯಕ್ರಮಗಳ ನಂತರ, ಪ್ರಧಾನಿ ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ, ಅಲ್ಲಿ ಜುಲೈ 26 ರಂದು ಮಾಲ್ಡೀವ್ಸ್‌ನಲ್ಲಿ ಸ್ವಾತಂತ್ರ್ಯದ 60 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮೋದಿ ಅತಿಥಿಯಾಗಿರಲಿದ್ದಾರೆ.

ಭಾರತಕ್ಕೇನು ಲಾಭ? ಬ್ರಿಟನ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದರಿಂದ ಭಾರತದ ಸರಕುಗಳು ಆಮದು ಸುಂಕವಿಲ್ಲದೇ ಬ್ರಿಟನ್‌ ಮಾರುಕಟ್ಟೆಯನ್ನು  ತಲುಪುತ್ತದೆ. ಹಾಗೂ  ದೇಶಗಳ ಸ್ಪರ್ಧೆಯಿಂದ ತಪ್ಪಿಸಿಕೊಂಡು ಹೆಚ್ಚು ಲಾಭವನ್ನು ಗಳಿಸಲು ಸಾಧ್ಯವಾಗುತ್ತದೆ. ಉತ್ಪಾದನೆ ಹೆಚ್ಚಿಸಲು ವಿದೇಶಿ ಹೂಡಿಕೆಯನ್ನು ಆಕರ್ಷಿಸುತ್ತದೆ. ಇದು ಉದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?