Rozgar Mela: 71,000 ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಿ ಮೋದಿ

ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 71,000 ನೇಮಕಾತಿ ಪತ್ರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ನ.22) ವಿತರಿಸಲಿದ್ದಾರೆ.

Rozgar Mela: 71,000 ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 22, 2022 | 11:38 AM

ನವದೆಹಲಿ: ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 71,000 ನೇಮಕಾತಿ ಪತ್ರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು (ನ.22) ವಿತರಿಸಲಿದ್ದಾರೆ. ಈ ವೇಳೆ ವಿಡಿಯೋ ಕಾನ್ಫರೆನ್ಸಿಂಗ್​​​​ ಮೂಲಕ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರೋಜ್‌ಗಾರ್ ಮೇಳವು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉಪಕ್ರಮದ ಒಂದು ಭಾಗವಾಗಿದೆ. ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಅಕ್ಟೋಬರ್​ನಲ್ಲಿ ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ನೇಮಕಾತಿ ಪತ್ರಗಳನ್ನು ವಿತರಿಸಲಾಗಿತ್ತು. ಈಗ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ ದೇಶದ 45 ಸ್ಥಳಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಹಸ್ತಾಂತರಿಸಲಾಗುವುದು.

ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್​ನ್ನು ಪ್ರಾರಂಭಿಸುತ್ತಾರೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ.

ಹೊಸದಾಗಿ ನೇಮಕಗೊಂಡವರು ಭಾರತ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಗ್ರೂಪ್-ಎ, ಗ್ರೂಪ್-ಬಿ (ಗೆಜೆಟೆಡ್), ಗ್ರೂಪ್-ಬಿ (ನಾನ್-ಗೆಜೆಟೆಡ್) ಮತ್ತು ಗ್ರೂಪ್-ಸಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಸಚಿವಾಲಯಗಳು ಸ್ವತಃ ಅಥವಾ ಯೂನಿಯನ್ ಪಬ್ಲಿಕ್ ಸರ್ವಿಸಸ್ ಕಮಿಷನ್, ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಿಷನ್ ಮೋಡ್‌ನಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ.

ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್, ಲೋವರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು, ಶಿಕ್ಷಕರು, ಉಪನ್ಯಾಸಕರು, ದಾದಿಯರು, ವೈದ್ಯರು, ಫಾರ್ಮಸಿಸ್ಟ್‌ಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲಾಗಿದೆ.

ಒಂದು ವರ್ಷದಲ್ಲಿ ಕೇಂದ್ರದಿಂದ 10 ಲಕ್ಷ ನೌಕರಿ ನೀಡುವ ಗುರಿ ಇದೆ

ಹೊಸದಾಗಿ ನೇಮಕಗೊಂಡವರಿಗೆ ಆದೇಶ ಪತ್ರ ವಿತರಣೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಒಂದು ವರ್ಷದಲ್ಲಿ ಕೇಂದ್ರದಿಂದ 10 ಲಕ್ಷ ನೌಕರಿ ನೀಡುವ ಗುರಿ ಇದೆ. ದೇಶದಲ್ಲಿ ನಿರುದ್ಯೋಗ ನಿವಾರಣೆಗೆ ಕೇಂದ್ರ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿಂದು 80 ಸಾವಿರಕ್ಕೂ ಹೆಚ್ಚು ಸ್ಟಾರ್ಟ್​ಅಪ್​ಗಳಿವೆ. ಮುದ್ರಾ ಯೋಜನೆಯಡಿ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 am, Tue, 22 November 22