ಇಂದು 7 ಸಭೆಗಳನ್ನು ಕರೆದ ಪ್ರಧಾನಿ ಮೋದಿ, 100 ದಿನಗಳ ಕಾರ್ಯಸೂಚಿ ರೆಡಿ, ಯಾವ್ಯಾವ ವಿಚಾರದ ಕುರಿತು ಚರ್ಚೆ

ಚುನಾವಣೋತ್ತರ ಸಮೀಕ್ಷೆಗಳು ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾಗುವುದು ಖಚಿತ ಎಂದು ಹೇಳುತ್ತಿದ್ದಂತೆಯೇ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಅಷ್ಟೇ ಅಲ್ಲದೆ 100 ದಿನಗಳ ಕಾರ್ಯಸೂಚಿಯನ್ನು ಸಿದ್ಧಪಡಿಸಲಿದ್ದಾರೆ.

ಇಂದು 7 ಸಭೆಗಳನ್ನು ಕರೆದ ಪ್ರಧಾನಿ ಮೋದಿ, 100 ದಿನಗಳ ಕಾರ್ಯಸೂಚಿ ರೆಡಿ, ಯಾವ್ಯಾವ ವಿಚಾರದ ಕುರಿತು ಚರ್ಚೆ
ನರೇಂದ್ರ ಮೋದಿImage Credit source: BBC
Follow us
ನಯನಾ ರಾಜೀವ್
|

Updated on:Jun 02, 2024 | 3:29 PM

ಲೋಕಸಭಾ ಚುನಾವಣೆ(Lok Sabha Election) ಮುಕ್ತಾಯಗೊಂಡಿದ್ದು, ಚುನಾವಣಾ ಫಲಿತಾಂಶಕ್ಕೆ ಎರಡು ದಿನ ಬಾಕಿ ಇದೆ. ಇಂದು ಪ್ರಧಾನಿ ಮೋದಿ 7 ಸಭೆಗಳನ್ನು ಕರೆದಿದ್ದು, 100 ದಿನಗಳ ಕಾರ್ಯಸೂಚಿ ಸಿದ್ಧಪಡಿಸಲಿದ್ದಾರೆ. ಪ್ರಧಾನಿ ಮೋದಿ ಭಾನುವಾರ ಒಂದರ ನಂತರ ಒಂದರಂತೆ ಏಳು ಸಭೆಗಳನ್ನು ನಡೆಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್​ಐ  ಮಾಹಿತಿ ನೀಡಿದೆ.

ವಿಶೇಷವೆಂದರೆ ಈ ಸಭೆಗಳಲ್ಲಿ ಒಂದು ಹೊಸ ಸರ್ಕಾರದ ಮೊದಲ 100 ದಿನಗಳ ಕಾರ್ಯಸೂಚಿಯ ಮೇಲೆ ಕೇಂದ್ರೀಕೃತವಾಗಿದೆ. ಅಂದರೆ ಮತ್ತೊಮ್ಮೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ವಿಶ್ವಾಸದಲ್ಲಿ ಪ್ರಧಾನಿ ಮೋದಿ ಇದ್ದಾರೆ ಎಂಬುದನ್ನು ಸೂಚಿಸುತ್ತದೆ.

ಚಂಡಮಾರುತದ ನಂತರದ ಪರಿಸ್ಥಿತಿಯ ಬಗ್ಗೆ ಮೊದಲ ಸಭೆ ನಡೆಯಲಿದೆ. ಪ್ರಧಾನಿ ಮೋದಿ ವಿಶೇಷವಾಗಿ ಈಶಾನ್ಯ ರಾಜ್ಯಗಳನ್ನು ಪರಿಶೀಲಿಸಲಿದ್ದಾರೆ. ಇದಾದ ಬಳಿಕ ದೇಶದಲ್ಲಿ ಬಿಸಿಗಾಳಿ ಮತ್ತು ವಿಪರೀತ ಬಿಸಿಲಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಯಲಿದೆ.

ವಿಶ್ವ ಪರಿಸರ ದಿನಾಚರಣೆಯನ್ನು ದೊಡ್ಡ ಮಟ್ಟದಲ್ಲಿ ಆಚರಿಸಲು ಸಿದ್ಧತೆ ಕುರಿತು ಸಭೆ ನಡೆಸಲಾಗುವುದು. ನಂತರ 100 ದಿನಗಳ ಕಾರ್ಯಕ್ರಮದ ಕಾರ್ಯಸೂಚಿಯನ್ನು ಪರಿಶೀಲಿಸಲು ಸುದೀರ್ಘ ಚಿಂತನ ಮಂಥನ ನಡೆಯಲಿದೆ. ವಿಶ್ವ ಪರಿಸರ ದಿನವನ್ನು ವಿಶ್ವಸಂಸ್ಥೆಯು 1972 ರಲ್ಲಿ ಮಾನವ ಪರಿಸರದ ಸ್ಟಾಕ್‌ಹೋಮ್ ಸಮ್ಮೇಳನದಲ್ಲಿ ಸ್ಥಾಪಿಸಿತು. ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶ. ಈ ವರ್ಷ ವಿಶ್ವ ಪರಿಸರ ದಿನದ ಸಮ್ಮೇಳನವನ್ನು ಗಲ್ಫ್ ರಾಷ್ಟ್ರ ಸೌದಿ ಅರೇಬಿಯಾ ಆಯೋಜಿಸಿದೆ.

ಮತ್ತಷ್ಟು ಓದಿ: PM Modi: ಅವಕಾಶವಾದಿ ಇಂಡಿಯ ಬಣ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ; ಪ್ರಧಾನಿ ಮೋದಿ ಪ್ರತಿಕ್ರಿಯೆ

ಪ್ರಧಾನಿ ಮೋದಿ ಅವರು 100 ದಿನಗಳ ಕಾರ್ಯಸೂಚಿಯನ್ನು ಪರಿಶೀಲಿಸಲಿದ್ದಾರೆ, ಇದರಲ್ಲಿ ಹೊಸ ಸರ್ಕಾರ ರಚನೆಯ ನಂತರ ಮೂರು ತಿಂಗಳಲ್ಲಿ ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚಿಸಲಾಗುವುದು. ಎಕ್ಸಿಟ್ ಪೋಲ್‌ಗಳು ಪ್ರಧಾನಿ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳುತ್ತಿದ್ದಾರೆ ಎಂಬ ಅಂಶವನ್ನು ತೋರಿಸುತ್ತಿವೆ.

ಚುನಾವಣಾ ಪ್ರಚಾರ ಪ್ರಾರಂಭವಾಗುವ ಮೊದಲು, ಮೋದಿ 3.0 ಅಧಿಕಾರಾವಧಿಯಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಪಿಎಂ ಮೋದಿ ಉನ್ನತ ಅಧಿಕಾರಿಗಳನ್ನು ಕೇಳಿದ್ದರು. ತಮ್ಮ ಸರ್ಕಾರದ ಮೊದಲ 100 ದಿನಗಳಲ್ಲಿ ಎಲ್ಲಾ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಅವರಿಗೆ ಸ್ಪಷ್ಟಪಡಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:30 am, Sun, 2 June 24

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ