ಜು.16ರಂದು 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಚಿತ್ರಕೂಟ ಮತ್ತು ಇಟಾವಾ ನಡುವಿನ ಎಕ್ಸ್‌ಪ್ರೆಸ್‌ವೇ ನಿಗದಿತ ಸಮಯಕ್ಕಿಂತ ಎಂಟು ತಿಂಗಳ ಮುಂಚಿತವಾಗಿ ಪೂರ್ಣಗೊಂಡಿದೆ.

ಜು.16ರಂದು 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
Bundelkhand Expressway
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 14, 2022 | 8:30 AM

ಉತ್ತರ ಪ್ರದೇಶ: ಜುಲೈ 16 ರಂದು ಉತ್ತರ ಪ್ರದೇಶದಲ್ಲಿ 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಚಿತ್ರಕೂಟ ಮತ್ತು ಇಟಾವಾ ನಡುವಿನ ಎಕ್ಸ್‌ಪ್ರೆಸ್‌ವೇ ನಿಗದಿತ ಸಮಯಕ್ಕಿಂತ ಎಂಟು ತಿಂಗಳ ಮುಂಚಿತವಾಗಿ ಪೂರ್ಣಗೊಂಡಿದೆ. ಫೆಬ್ರವರಿ 2020 ರಲ್ಲಿ ಶಂಕುಸ್ಥಾಪನೆ ಮಾಡುವಾಗ, ಈ ಯೋಜನೆಯು “ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಿದೆ ಮತ್ತು ದೊಡ್ಡ ನಗರಗಳಲ್ಲಿ ಲಭ್ಯವಿರುವ ಸೌಲಭ್ಯಗಳೊಂದಿಗೆ ಸಾಮಾನ್ಯ ಜನರನ್ನು ಸಂಪರ್ಕಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಸರ್ಕಾರದ ವಕ್ತಾರರ ಪ್ರಕಾರ, ಎಕ್ಸ್‌ಪ್ರೆಸ್‌ವೇ ಚಿತ್ರಕೂಟ ಜಿಲ್ಲೆಯ ಭಾರತ್‌ ಕೂಪ್ ಬಳಿ ಪ್ರಾರಂಭವಾಗುತ್ತದೆ ಮತ್ತು ಇಟಾವಾ ಜಿಲ್ಲೆಯ ಕುಡ್ರೈಲ್ ಗ್ರಾಮದ ಬಳಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯೊಂದಿಗೆ ವಿಲೀನಗೊಳ್ಳುತ್ತದೆ. ಇದು ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ್, ಜಲೌನ್, ಔರೈಯಾ ಮತ್ತು ಇಟಾವಾ ಎಂಬ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

ರಸ್ತೆಯ ಉದ್ದವು   ಬಾಗೆನ್, ಕೆನ್, ಶ್ಯಾಮ, ಚಂದವಾಲ್, ಬಿರ್ಮಾ, ಯಮುನಾ, ಬೆಟ್ವಾ ಮತ್ತು ಸೆಂಗರ್ ನದಿಗಳನ್ನು ದಾಟಿದೆ. ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ (ಯುಪಿಇಐಡಿಎ) ಅಭಿವೃದ್ಧಿಪಡಿಸಿದ ನಾಲ್ಕು-ಲೇನ್ ಎಕ್ಸ್‌ಪ್ರೆಸ್‌ವೇ ಭವಿಷ್ಯದಲ್ಲಿ ಆರು ಲೇನ್‌ಗಳಿಗೆ ವಿಸ್ತರಣೆಗೆ ಅವಕಾಶವನ್ನು ಹೊಂದಿದೆ. ಇದು 13 ವಿನಿಮಯ ಕೇಂದ್ರಗಳನ್ನು ಹೊಂದಿದೆ.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಅಧಿಕಾರಿಗಳ ಪ್ರಕಾರ, ಯೋಜನೆಯ ಒಟ್ಟು ವೆಚ್ಚ ಸುಮಾರು 15,000 ಕೋಟಿ ರೂ. ಆದರೆ, ಯೋಗಿ ಆದಿತ್ಯನಾಥ್ ಸರ್ಕಾರ ಇ-ಟೆಂಡರ್ ಆಯ್ಕೆ ಮಾಡುವ ಮೂಲಕ ಸುಮಾರು 1,132 ಕೋಟಿ ರೂ. ಉಳಿಸಿದೆ. ಈ ಯೋಜನೆಯು ರಾಜ್ಯದಲ್ಲಿ ಸಂಪರ್ಕವನ್ನು ತುಂಬಲು ಮತ್ತು ಆರ್ಥಿಕ ಚಟುವಟಿಕೆಗಳಿ ಹೆಚ್ಚು ಉಪಯೋಗವಾಗಿದೆ.

ದೇಶದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಬುಂದೇಲ್‌ಖಂಡ್, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ರಾಷ್ಟ್ರ ರಾಜಧಾನಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ನಿರ್ಧರಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ದೆಹಲಿ ಮತ್ತು ಚಿತ್ರಕೂಟ ನಡುವಿನ ಪ್ರಯಾಣದ  9-10 ಗಂಟೆಗಳಿಂದ  ಆರು ಗಂಟೆಗಳವರೆಗೆ ಕಡಿಮೆ ಮಾಡುತ್ತದೆ.

ಇದನ್ನು ಓದಿ: ನಾನು ಪಾಕ್ ಪತ್ರಕರ್ತರನ್ನು ಭೇಟಿಯಾಗಿಲ್ಲ, ಈ ಆರೋಪಗಳು ಸುಳ್ಳು: ಹಮೀದ್ ಅನ್ಸಾರಿ

ಮುಂಬರುವ ಉತ್ತರ ಪ್ರದೇಶ ರಕ್ಷಣಾ ಕಾರಿಡಾರ್ ಯೋಜನೆಯ ಯಶಸ್ಸಿಗೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕೂಡ ಮಾದರಿಯಾಗಲಿದೆ. ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್‌ನ ಕಾಮಗಾರಿಯೂ ಆರಂಭವಾಗಿದೆ. 20,000 ಕೋಟಿ ಮೌಲ್ಯದ ರಕ್ಷಣಾ ಕಾರಿಡಾರ್ ಯೋಜನೆಯನ್ನು ರಾಜ್ಯದ ಪಶ್ಚಿಮ, ಮಧ್ಯ ಮತ್ತು ಬುಂದೇಲ್‌ಖಂಡ್ ಪ್ರದೇಶಗಳಲ್ಲಿ 5,071 ಹೆಕ್ಟೇರ್‌ಗಳಲ್ಲಿ ಯೋಜಿಸಲಾಗಿದೆ.

ರಾಜ್ಯದಲ್ಲಿ 3,200 ಕಿ.ಮೀ ವ್ಯಾಪ್ತಿಯ 13 ಎಕ್ಸ್‌ಪ್ರೆಸ್‌ವೇಗಳಲ್ಲಿ ಆರು ಕಾರ್ಯನಿರ್ವಹಿಸುತ್ತಿವೆ ಮತ್ತು ಏಳರಲ್ಲಿ ಕೆಲಸ ನಡೆಯುತ್ತಿದೆ. ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳ ಉದ್ದಕ್ಕೂ ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಿಸಲಾಗುತ್ತಿದೆ. ವಾಯುಪಡೆಯ ತುರ್ತು ಬಳಕೆಗಾಗಿ ಏರ್‌ಸ್ಟ್ರಿಪ್‌ಗಳು ಬರಲಿವೆ.

ಸ್ವಾತಂತ್ರ್ಯದ ನಂತರ  70 ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಎರಡು ಎಕ್ಸ್‌ಪ್ರೆಸ್‌ವೇಗಳು ಪೂರ್ಣಗೊಂಡಿಲ್ಲ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಸೇರಿದಂತೆ ಎಕ್ಸ್‌ಪ್ರೆಸ್‌ವೇಗಳ ಸರಣಿಯೊಂದಿಗೆ, ರಾಜ್ಯದಲ್ಲಿ ಡಬಲ್ ಎಂಜಿನ್ ಬೆಳವಣಿಗೆಯ ಪ್ರಸ್ತುತ ಸರ್ಕಾರವು ದಶಕಗಳ ಹಿಂದಿನ ಬೇಡಿಕೆಯನ್ನು ಈಡೇರಿಸಿದೆ.ನಾಲ್ಕು-ಲೇನ್ ಎಕ್ಸ್‌ಪ್ರೆಸ್‌ವೇ ಭವಿಷ್ಯದಲ್ಲಿ ಆರು ಲೇನ್‌ಗಳಿಗೆ ವಿಸ್ತರಣೆಗೆ ಅವಕಾಶವನ್ನು ಹೊಂದಿದೆ. ಇದು 13 ವಿನಿಮಯ ಕೇಂದ್ರಗಳನ್ನು ಹೊಂದಿದೆ.

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು