AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 28 ರಂದು ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಲಿರುವ ಪ್ರಧಾನಿ ಮೋದಿ; ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು (New Parliament Building) ಮೇ 28 ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ತಿಳಿಸಿದ್ದಾರೆ.

ಮೇ 28 ರಂದು ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಲಿರುವ ಪ್ರಧಾನಿ ಮೋದಿ; ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ
ನೂತನ ಸಂಸತ್ ಭವನದ ಪ್ರತಿಕೃತಿ
ಗಣಪತಿ ಶರ್ಮಾ
|

Updated on: May 18, 2023 | 9:46 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು (New Parliament Building) ಮೇ 28 ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ತಿಳಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿಯವರನ್ನು ಭೇಟಿ ಮಾಡಿದ ಅವರು, ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಮಧ್ಯೆ, ಹೊಸ ಸಂಸತ್ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಹೊಸ ಕಟ್ಟಡವು ಸ್ವಾವಲಂಬಿ ಭಾರತದ ಚೈತನ್ಯವನ್ನು ಸಂಕೇತಿಸುತ್ತದೆ ಎಂದು ಲೋಕಸಭಾ ಕಾರ್ಯಾಲಯ ತಿಳಿಸಿದೆ.

ಈ ಯೋಜನೆಯನ್ನು ಆರಂಭದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. 65,000 ಚದರ ಮೀಟರ್‌ಗಳಷ್ಟು ವಿಸ್ತಾರವಾಗಿರುವ ಹೊಸ ಸಂಸತ್​ ಕಟ್ಟಡಕ್ಕೆ ನರೇಂದ್ರ ಮೋದಿ ಅವರು 2020 ರ ಡಿಸೆಂಬರ್​​​ನಲ್ಲಿ ಶಂಕುಸ್ಥಾಪನೆ ಮಾಡಿದ್ದರು ಮತ್ತು 2021 ರ ಜನವರಿಯಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿತ್ತು.

ಸುಮಾರು 970 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜುಲೈನಲ್ಲಿ ಪ್ರಾರಂಭವಾಗಲಿರುವ ಮುಂಬರುವ ಮುಂಗಾರು ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯುವ ಸಾಧ್ಯತೆಯಿಲ್ಲ. ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಹೊಂದಿರುವುದರಿಂದ, ಜಿ20 ರಾಷ್ಟ್ರಗಳ ಸಂಸತ್ತಿನ ಸ್ಪೀಕರ್‌ಗಳ ಸಭೆಯು ಈ ವರ್ಷದ ಕೊನೆಯಲ್ಲಿ ಹೊಸ ಕಟ್ಟಡದಲ್ಲಿ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಹೇಗಿದೆ ನೂತನ ಸಂಸತ್ ಭವನ?

64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಹೊಸ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಬಹುದಾಗಿ. ಹೊಸ ಸಂಸತ್ತಿನ ಕಟ್ಟಡವು ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ, ಇವುಗಳಿಗೆ ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ.

ಈ ಕಟ್ಟಡವು ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳನ್ನು ಹೊಂದಿರುತ್ತದೆ. ಈ ಕಟ್ಟಡದ ಮತ್ತೊಂದು ವಿಶೇಷವೆಂದರೆ ಸಂವಿಧಾನ ಭವನ, ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ನಿರ್ಮಿಸಲಾಗಿದೆ. ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ.

ಇದು ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ. ಹೊಸ ಸಂಸತ್ ಕಟ್ಟಡವು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಸ್ ಚಂದ್ರ ಬೋಸ್ ಮತ್ತು ದೇಶದ ಇತರ ಪ್ರಧಾನ ಮಂತ್ರಿಗಳ ಭಾವಚಿತ್ರಗಳನ್ನು ಹೊಂದಿರುತ್ತದೆ. ಕೋನಾರ್ಕ್‌ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?