Kashi Vishwanath Corridor: ಕಾಶಿ ವಿಶ್ವನಾಥ ಕಾರಿಡಾರ್ ಇಂದು ಲೋಕಾರ್ಪಣೆ
ವಾಸ್ತುಶಿಲ್ಪಿ ಭೀಮಲ್ ಪಟೇಲ್ ಅವರಿಂದ ಕಾರಿಡಾರ್ ವಿನ್ಯಾಸ ಮಾಡಲಾಗಿದೆ. ಈ ಕಾರಿಡಾರ್ನಿಂದ ಯಾವುದೇ ಅಡೆತಡೆ ಇಲ್ಲದೆ ವಿಶ್ವನಾಥನ ದರ್ಶನ ಪಡೆಯೋದಕ್ಕೆ ಸಾಧ್ಯವಾಗಲಿದೆ. ಕಾಶಿ ದೇಗುಲ ಹಾಗೂ ಗಂಗಾ ನದಿಯ ನಡುವಿನ ಸಂಚಾರದ ಅವಧಿ ಈ ಕಾರಿಡಾರ್ನಿಂದ ಕಡಿತವಾಲಿದೆ.
12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ಸನ್ನಿಧಿಗೆ ಕೋಟಿ ಕೋಟಿ ಭಕ್ತರು ಆಗಮಿಸ್ತ್ತಾರೆ. ಇಲ್ಲಿ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ ಒಂದಷ್ಟು ಅಡೆತಡೆಗಳು ಎದುರಾಗ್ತಿದ್ವು. ಈಗ ಎಲ್ಲಾ ಸಮಸ್ಯೆಗಳು ಪರಿಹಾರವಾಗೋ ಸಮಯ ಬಂದಿದೆ. ಮಹತ್ವದ ಯೋಜನೆಯನ್ನ ಇಂದು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ವಾಸ್ತುಶಿಲ್ಪಿ ಭೀಮಲ್ ಪಟೇಲ್ ಅವರಿಂದ ಕಾರಿಡಾರ್ ವಿನ್ಯಾಸ ಮಾಡಲಾಗಿದೆ. ಈ ಕಾರಿಡಾರ್ನಿಂದ ಯಾವುದೇ ಅಡೆತಡೆ ಇಲ್ಲದೆ ವಿಶ್ವನಾಥನ ದರ್ಶನ ಪಡೆಯೋದಕ್ಕೆ ಸಾಧ್ಯವಾಗಲಿದೆ. ಕಾಶಿ ದೇಗುಲ ಹಾಗೂ ಗಂಗಾ ನದಿಯ ನಡುವಿನ ಸಂಚಾರದ ಅವಧಿ ಈ ಕಾರಿಡಾರ್ನಿಂದ ಕಡಿತವಾಲಿದೆ. ಕಾರಿಡಾರ್ ಭಾಗದಲ್ಲಿ 10 ಸಾವಿರ ಜನ ಧ್ಯಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು 7,000 ಚದರ ಮೀಟರ್ ವೇದಿಕೆ, 7 ಭವ್ಯ ಪ್ರವೇಶ ದ್ವಾರಗಳನ್ನು ನಿರ್ಮಿಸಲಾಗಿದೆ. ಫುಡ್ ಕೋರ್ಟ್, ವೈದಿಕ ಸೇರಿದಂತೆ ಆಧ್ಯಾತ್ಮಿಕ ಗ್ರಂಥಾಲಯವನ್ನ ಸ್ಥಾಪಿಸಲಾಗಿದೆ. ಜೊತೆಯಲ್ಲಿ ಮೋಕ್ಷ ಗೃಹ ಹಾಗೂ ಗೋಡೋಲಿಯಾ ಗೇಟ್ ಮತ್ತು ಭೋಗಶಾಲಾ ಕೂಡ ತಲೆ ಎತ್ತಿವೆ. ಕಾರಿಡಾರ್ ಉದ್ದಕ್ಕೂ ಭಕ್ತರಿಗಾಗಿ ವಿಶೇಷ ಸ್ಕೈ ಬೀಮ್ ಲೈಟ್ ವ್ಯವಸ್ಥೆಯನ್ನೂ ಮಾಡಲಾಗಿದೆ. 2ನೇ ಹಂತದ ಕಾಮಗಾರಿಯನ್ನ ಮುಂದಿನ ವರ್ಷಕ್ಕೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.