Chief Secretaries meeting: ಜನವರಿ 6 ಮತ್ತು 7ರಂದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶ, ಪ್ರಧಾನಿ ಮೋದಿ ಭಾಗಿ

PM Modi to meet chief secretaries: ಜನವರಿ 5 ರಂದು ಪ್ರಾರಂಭವಾಗುವ ಮೂರು ದಿನಗಳ ಸಮ್ಮೇಳನವು ಎಂಎಸ್‌ಎಂಇಗಳು, ಮೂಲಸೌಕರ್ಯ ಸೇರಿದಂತೆ ಒಟ್ಟು ಆರು ವಿಷಯಗಳ ಮೇಲೆ ಚರ್ಚೆಗಳು ನಡೆಯಲಿವೆ.

Chief Secretaries meeting: ಜನವರಿ 6 ಮತ್ತು 7ರಂದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶ, ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Rakesh Nayak Manchi

Updated on: Jan 05, 2023 | 7:02 AM

ನವ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನ (National Conference of Chief Secretaries)ವನ್ನು ಜನವರಿ 6 ಮತ್ತು 7ರಂದು ದೆಹಲಿಯಲ್ಲಿ ಆಯೋಜಿಸಲಾಗಿದ್ದು, ಸಮಾವೇಶದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಹಿಸಲಿದ್ದಾರೆ. ನೀತಿ ಆಯೋಗ ಆಯೋಜಿಸಿರುವ ಈ ಸಭೆಯು ಪುಸಾ ರಸ್ತೆಯಲ್ಲಿರುವ ICAR-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿದೆ. ಸಮ್ಮೇಳನವು ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಮತ್ತು ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಕೇಂದ್ರ ಸರ್ಕಾರದ 200ಕ್ಕೂ ಹೆಚ್ಚು ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಇತರ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಡೊಮೇನ್ ತಜ್ಞರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಜನವರಿ 5 ರಂದು ಪ್ರಾರಂಭವಾಗುವ ಮೂರು ದಿನಗಳ ಸಮ್ಮೇಳನದಲ್ಲಿ ಎಂಎಸ್‌ಎಂಇ, ಮೂಲಸೌಕರ್ಯ ಮತ್ತು ಹೂಡಿಕೆಗಳು, ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಪೋಷಣೆ ಮತ್ತು ಕೌಶಲ್ಯ ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆಗಳು ನಡೆಯಲಿವೆ ಎಂದು ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿಕೆ ತಿಳಿಸಿದೆ. “ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಅಂತರ್ಗತ ಮಾನವ ಅಭಿವೃದ್ಧಿಯ ಮೇಲೆ ಒತ್ತು ನೀಡುವ ವಿಕ್ಷಿತ್ ಭಾರತವನ್ನು ಸಾಧಿಸಲು ಸಹಕಾರಿ ಕ್ರಮಕ್ಕೆ ಸಮ್ಮೇಳನವು ಅಡಿಪಾಯ ಹಾಕುತ್ತದೆ” ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ನಡೆದ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿ ಭಾಷಣ ಮಾಡಿದ್ದ ಸಿದ್ದೇಶ್ವರ ಸ್ವಾಮೀಜಿ

ಸಮ್ಮೇಳನದಲ್ಲಿ ವಿಕ್ಸಿತ್ ಭಾರತ ಕುರಿತು ಮೂರು ವಿಶೇಷ ಗೋಷ್ಠಿಗಳನ್ನು ಸಹ ನಡೆಸಲಾಗುತ್ತದೆ. ಕೊನೆಯ ಮೈಲಿಯನ್ನು ತಲುಪುವುದು, ಜಿಎಸ್‌ಟಿ ಮತ್ತು ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳು ಮತ್ತು ಭಾರತದ ಪ್ರತಿಕ್ರಿಯೆ ಕುರಿತು ಮೂರು ವಿಶೇಷ ಚರ್ಚೆಗಳು ನಡೆಯಲಿವೆ.

ಮುಖ್ಯ ಕಾರ್ಯದರ್ಶಿಗಳೊಂದಿಗಿನ ಸಮ್ಮೇಳನ ಇದು ಎರಡನೇ ಆವೃತ್ತಿಯಾಗಿದೆ. 2022ರ ಜೂನ್ ತಿಂಗಳಲ್ಲಿ ಧರ್ಮಶಾಲಾದಲ್ಲಿ ಮೊದಲ ಸಮ್ಮೇಳನ ನಡೆದಿತ್ತು. 2022ರಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗಿನ ಇದೇ ರೀತಿಯ ಸಮ್ಮೇಳನದಲ್ಲಿ, ಮೋದಿ ಅವರು ಹೊಸ ಶಿಕ್ಷಣ ನೀತಿ (ಎನ್‌ಇಪಿ), ನಗರ ಆಡಳಿತ ಮತ್ತು ಬೆಳೆ ವೈವಿಧ್ಯೀಕರಣ ಮತ್ತು ಕೃಷಿ ಸರಕುಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವಂತಹ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್