Ram Mandir: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಯಾವಾಗ? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಕಾರ್ಯ ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ದಿನಾಂಕ ನಿಗದಿ ಮಾಡಲಾಗಿದೆ.

Ram Mandir: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಯಾವಾಗ? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿImage Credit source: Mint
Follow us
ನಯನಾ ರಾಜೀವ್
|

Updated on:Jun 12, 2023 | 1:04 PM

ಉತ್ತರ ಪ್ರದೇಶದ ಅಯೋಧ್ಯೆ(Ayodhya)ಯಲ್ಲಿ ಶ್ರೀರಾಮಮಂದಿರ ಕಾರ್ಯ ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ದಿನಾಂಕ ನಿಗದಿ ಮಾಡಲಾಗಿದೆ. ಇದೇ ವರ್ಷ ಡಿಸೆಂಬರ್​ ಒಳಗೆ ಶ್ರೀರಾಮ ಮಂದಿರದ ಗರ್ಭಗುಡಿ ಕಾರ್ಯ ಪೂರ್ಣಗೊಳ್ಳಲಿದ್ದು, 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣ ಪ್ರತಿಷ್ಠೆ ನೆರವೇರಿಸಲಿದ್ದಾರೆ. ದೇವಾಲಯದ ಗರ್ಭಗುಡಿಯಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು. ಮೂಲಗಳ ಪ್ರಕಾರ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಶ್ಯಾಮಶಿಲಾ (ಬಂಡೆ) ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಲಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ನಲ್ಲಿ ದೇವಾಲಯದ ಟ್ರಸ್ಟ್‌ನ ಎರಡು ದಿನಗಳ ಅನೌಪಚಾರಿಕ ಸಭೆಯನ್ನು ನಡೆಸಿತ್ತು. ಶ್ರೀರಾಮ ಹಾಗೂ ಸೀತಾ ಮಾತೆಯ ನೂತನ ವಿಗ್ರಹವನ್ನು ನಿರ್ಮಿಸಲೆಂದು ನೇಪಾಳದ ಗಂಡಕಿ ನದಿಯಲ್ಲಿ ಸಿಕ್ಕ 6 ಕೋಟಿ ವರ್ಷಗಳ ಇತಿಹಾಸ ಇದ್ದು, ಅಧ್ಯಾತ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಎರಡು ಶಿಲೆಗಳನ್ನು ತರಲಾಗಿದೆ.

ಮತ್ತಷ್ಟು ಓದಿ: ರಾಮ ಜನ್ಮಭೂಮಿ ದೇವಾಲಯ ನಿರ್ಮಾಣದ ಭಾಗವಾಗಲು ಜಯನಗರದ ಶರ್ಮಾಲಯ ಚಿಕಿತ್ಸಾಲಯದಲ್ಲಿ 16 ನದಿಗಳ ನೀರು ಮತ್ತು ಮೃತ್ತಿಕೆಯೊಂದಿಗೆ ವಿಶಿಷ್ಟ ಸಂಕಲ್ಪ

2024ರ ಜನವರಿ 14 ರಂದು ಶ್ರೀರಾಮ ಲಲ್ಲಾನ ಪ್ರತಿಷ್ಠಾಪನೆ ಮಾಡಲಾಗುವುದು, ಈ ಹಿಂದೆ ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟ್​ ಹೇಳಿತ್ತು. ಇದೀಗ ಜನವರಿ 22 ರಂದು ಪ್ರತಿಷ್ಠಾಪನೆ ಮಾಡುವುದಾಗಿ ತಿಳಿಸಿದೆ.

2024ರ ಲೋಕಸಭೆ ಚುನಾವಣೆ ಒಳಗೆ ಅಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಿ, ಭಕ್ತರಿಗೆ ದರ್ಶನಕ್ಕೆ ಮುಕ್ತ ಅವಕಾಶ ಮಾಡಲು ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಜಂಟಿಯಾಗಿ ಪ್ರಯತ್ನವನ್ನು ಮಾಡುತ್ತಿವೆ.

ದೇವಸ್ಥಾನದ ಮೇಲ್ಛಾವಣಿಯನ್ನು ಜೂನ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು. ವಿಗ್ರಹ ಪ್ರತಿಷ್ಠಾಪನೆಗೆ ನಿಖರವಾದ ದಿನಾಂಕವನ್ನು ಜ್ಯೋತಿಷಿ ವಿದ್ವಾಂಸರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಪ್ರಸನ್ನಾಚಾರ್ಯ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Mon, 12 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ