Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ

ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 'ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ "ಟೀಮ್ ಇಂಡಿಯಾದ ಪಾತ್ರ" ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 11:12 AM

ದೆಹಲಿ: ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ‘ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ “ಟೀಮ್ ಇಂಡಿಯಾದ ಪಾತ್ರ” ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನೀತಿ ಆಯೋಗದ ಅಧ್ಯಕ್ಷರಾಗಿ ಪ್ರಧಾನಿ ಮೋದಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ವಿಕ್ಷಿತ್ ಭಾರತ್ @2047 ಕಾರ್ಯಕ್ರಮದಲ್ಲಿ Viksit Bharat@2047, MSMEಗಳ ಮೇಲೆ ಒತ್ತು, ಮೂಲಸೌಕರ್ಯ ಮತ್ತು ಹೂಡಿಕೆಗಳು, ಅನುಸರಣೆಗಳನ್ನು ಕಡಿಮೆಗೊಳಿಸುವುದು, ಮಹಿಳಾ ಸಬಲೀಕರಣ, ಸೇರಿದಂತೆ ಎಂಟು ಪ್ರಮುಖ ವಿಷಯಗಳನ್ನು ದಿನದ ಸಭೆಯಲ್ಲಿ ಚರ್ಚಿಸಲಾಗುವುದು. ಆರೋಗ್ಯ ಮತ್ತು ಪೋಷಣೆ, ಕೌಶಲ್ಯ ಅಭಿವೃದ್ಧಿ, ಪ್ರದೇಶಾಭಿವೃದ್ಧಿ ಮತ್ತು ಸಾಮಾಜಿಕ ಮೂಲಸೌಕರ್ಯಕ್ಕಾಗಿ ಗತಿ ಶಕ್ತಿ” ಬಗ್ಗೆ NITI ಆಯೋಗದ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು/ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಮಂತ್ರಿಗಳು NITI ಆಯೋಗದ ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕ ರಾಜ್ಯದ ಮುಖ್ಯಮಂತ್ರಿಗಳು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ.

ಇದನ್ನೂ ಓದಿ;9 Years Of PM Modi: ಹಿಂದೂ ದೇವಾಲಯಗಳನ್ನು ಪುನರುಜ್ಜೀವನಗೊಳಿಸುವ ಪ್ರಧಾನಿ ಮೋದಿ ಪ್ರಯತ್ನಗಳೆಡೆಗೆ ಒಂದು ನೋಟ

8ನೇ ಆಡಳಿತ ಮಂಡಳಿ ಸಭೆಯ ಪೂರ್ವಸಿದ್ಧತಾ ಪೂರ್ವಭಾವಿಯಾಗಿ, ಎರಡನೇ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವನ್ನು ಜನವರಿ 2023 ರಲ್ಲಿ ನಡೆಸಲಾಯಿತು, ಅಲ್ಲಿ ಈ ವಿಷಯಗಳನ್ನು ವ್ಯಾಪಕವಾಗಿ ಚರ್ಚಿಸಲಾಯಿತು. NITI ಆಯೋಗ, ಈ 8ನೇ ಆಡಳಿತ ಮಂಡಳಿ ಸಭೆಯನ್ನು ಭಾರತದ G20 ಪ್ರೆಸಿಡೆನ್ಸಿಯ ಹಿನ್ನೆಲೆಯಲ್ಲಿ ನಡೆಸಲಾಗುತ್ತಿದೆ. ಭಾರತದ G20 ಧ್ಯೇಯವಾಕ್ಯ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಅದರ ನಾಗರಿಕತೆಯ ಮೌಲ್ಯಗಳನ್ನು ಮತ್ತು ನಮ್ಮ ಗ್ರಹದ ಭವಿಷ್ಯವನ್ನು ರಚಿಸುವಲ್ಲಿ ಪ್ರತಿ ದೇಶದ ಪಾತ್ರದ ದೃಷ್ಟಿಕೋನವನ್ನು ತಿಳಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?