AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧೀಜಿ, ಶಾಸ್ತ್ರಿಯವರಿಗೆ ಮೋದಿ ನಮನ: ‘ವಿಕಸಿತ ಭಾರತ’ ನಿರ್ಮಾಣಕ್ಕೆ ಬಾಪು ಸಂದೇಶ ದಾರಿ

ಪ್ರಧಾನಿ ಮೋದಿ ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಸಂದರ್ಭದಲ್ಲಿ ಇಬ್ಬರೂ ನಾಯಕರಿಗೆ ನಮನ ಸಲ್ಲಿಸಿದರು. ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆಯ ಸಂದೇಶಗಳು 'ವಿಕಸಿತ ಭಾರತ' ನಿರ್ಮಾಣಕ್ಕೆ ದಾರಿಯಾಗಲಿ ಎಂದು ಆಶಿಸಿದರು. ಶಾಸ್ತ್ರಿ ಅವರ ಸರಳತೆ ಮತ್ತು ದೇಶ ಸೇವೆಯ ಬದ್ಧತೆ ಸದಾ ಸ್ಫೂರ್ತಿದಾಯಕ. ಇವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಿಸಲು ಮೋದಿ ಕರೆ ನೀಡಿದರು.

ಗಾಂಧೀಜಿ, ಶಾಸ್ತ್ರಿಯವರಿಗೆ ಮೋದಿ ನಮನ: ‘ವಿಕಸಿತ ಭಾರತ’ ನಿರ್ಮಾಣಕ್ಕೆ ಬಾಪು ಸಂದೇಶ ದಾರಿ
ಗಾಂಧೀಜಿ-ಶಾಸ್ತ್ರಿImage Credit source: LotusArise IAS, Britannica
ನಯನಾ ರಾಜೀವ್
|

Updated on: Oct 02, 2026 | 9:03 AM

Share

ನವದೆಹಲಿ, ಅಕ್ಟೋಬರ್ 02: ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಬ್ಬರು ನಾಯಕರನ್ನು ಸ್ಮರಿಸಿದ್ದಾರೆ. ಮಹಾತ್ಮ ಗಾಂಧಿಯ ಸತ್ಯ, ಅಹಿಂಸೆ, ಸರಳತೆ ಮತ್ತು ಸೇವೆಯ ಸಂದೇಶಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿ ತೋರಿಸಲಿ ಎಂದು ಮೋದಿ ಹೇಳಿದ್ದಾರೆ. ಇದೇ ವೇಳೆ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ದೇಶ ಸೇವೆಯ ಬದ್ಧತೆ ಸದಾ ಸ್ಫೂರ್ತಿದಾಯಕ ಎಂದು ಅವರು ತಿಳಿಸಿದ್ದಾರೆ.

ಮೋದಿ ತಮ್ಮ ಸಂದೇಶದಲ್ಲಿ, “ಬಾಪು ಅವರ ಶಾಶ್ವತ ಸಂದೇಶವು ಉತ್ತಮ ಸಮಾಜ ಮತ್ತು ವಿಕಸಿತ ಭಾರತ ನಿರ್ಮಾಣದತ್ತ ನಮ್ಮನ್ನು ಮುನ್ನಡೆಸಲಿ” ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ಜೀವನದಲ್ಲಿ ಸರಳತೆ, ಧೈರ್ಯ, ಸೇವೆ ಮತ್ತು ಮಾನವೀಯತೆಗೆ ವಿಶೇಷ ಸ್ಥಾನವಿತ್ತು ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿದ ಮೋದಿ, ಅವರ ಸರಳ ಜೀವನ, ಪ್ರಾಮಾಣಿಕತೆ ಮತ್ತು ದೇಶದ ಮೇಲಿನ ಸಮರ್ಪಣೆ ಇಂದಿಗೂ ಜನರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದ್ದಾರೆ. ಶಾಸ್ತ್ರಿಜಿ ನೀಡಿದ ‘ಜೈ ಜವಾನ್, ಜೈ ಕಿಸಾನ್’ ಘೋಷಣೆ ದೇಶದ ಸೈನಿಕರು ಮತ್ತು ರೈತರ ಮಹತ್ವವನ್ನು ಪ್ರತಿಬಿಂಬಿಸುತ್ತದೆ.

ವಿಡಿಯೋ

ಒಂದೇ ದಿನ ಇಬ್ಬರು ಮಹಾನ್ ನಾಯಕರ ಜಯಂತಿ

ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಗಾಂಧೀಜಿಯವರ ಜನ್ಮದಿನವನ್ನು ಗಾಂಧಿ ಜಯಂತಿಯಾಗಿ ಆಚರಿಸಿದರೆ, ಶಾಸ್ತ್ರಿಜಯವರ ಜನ್ಮದಿನವನ್ನು ಶಾಸ್ತ್ರಿ ಜಯಂತಿಯಾಗಿ ಆಚರಿಸಲಾಗುತ್ತದೆ.

ವಿಡಿಯೋ

ಗಾಂಧೀಜಿಯವರ ವಿಚಾರಗಳಲ್ಲಿ ಸತ್ಯ, ಅಹಿಂಸೆ, ಸ್ವಚ್ಛತೆ, ಸ್ವದೇಶಿ ಮತ್ತು ಮಾನವೀಯತೆ ಪ್ರಮುಖವಾಗಿದ್ದರೆ, ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ಮತ್ತು ದೇಶ ಸೇವೆಗೆ ಹೆಸರುವಾಸಿಯಾಗಿದ್ದಾರೆ. ಇಬ್ಬರ ಆದರ್ಶಗಳನ್ನು ಇಂದಿನ ಭಾರತದಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಮೋದಿ ತಮ್ಮ ಸಂದೇಶದ ಮೂಲಕ ಒತ್ತಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?