PM Modi Unveils National Emblem: ನೂತನ ಸಂಸತ್​ ಭವನದ ಮೇಲೆ ನರೇಂದ್ರ ಮೋದಿಯಿಂದ ಬೃಹತ್ ರಾಷ್ಟ್ರ ಲಾಂಛನ ಅನಾವರಣ

ನೂತನ ಸಂಸತ್ ಭವನದ ಮೇಲ್ಛಾವಣಿಯಲ್ಲಿ 6.5 ಮೀ ಎತ್ತರದ ಕಂಚಿನ ರಾಷ್ಟ್ರ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.

PM Modi Unveils National Emblem: ನೂತನ ಸಂಸತ್​ ಭವನದ ಮೇಲೆ ನರೇಂದ್ರ ಮೋದಿಯಿಂದ ಬೃಹತ್ ರಾಷ್ಟ್ರ ಲಾಂಛನ ಅನಾವರಣ
ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನದ ಅನಾವರಣ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 11, 2022 | 2:14 PM

ನವದೆಹಲಿ: ದೆಹಲಿಯಲ್ಲಿರುವ ನೂತನ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರ ಲಾಂಛನವನ್ನು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ನೂತನ ಸಂಸತ್​ ಭವನದ ಮೇಲೆ 6.5 ಮೀಟರ್ ಎತ್ತರ ಬೃಹತ್ ಅಶೋಕ ಸ್ತಂಭವನ್ನು ನಿರ್ಮಿಸಲಾಗಿದೆ. ಈ ರಾಷ್ಟ್ರ ಲಾಂಛನದ (National Emblem) ಉದ್ಘಾಟನೆ ವೇಳೆ ಪ್ರಧಾನಿ ಮೋದಿ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರು ಮತ್ತು ಕೆಲಸಗಾರರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಬೃಹತ್ ರಾಷ್ಟ್ರೀಯ ಲಾಂಛನವನ್ನು ಕಂಚಿನಿಂದ ಮಾಡಲಾಗಿದ್ದು, ಒಟ್ಟು 9,500 ಕೆಜಿ ತೂಕ ಮತ್ತು 6.5 ಮೀ ಎತ್ತರವಿದೆ. ಹೊಸ ಪಾರ್ಲಿಮೆಂಟ್ ಕಟ್ಟಡದ ಸೆಂಟ್ರಲ್ ಫೋಯರ್‌ನ ಮೇಲ್ಭಾಗದಲ್ಲಿ ಇದನ್ನು ಇರಿಸಲಾಗಿದೆ.

ನೂತನ ಸಂಸತ್ ಭವನದ ಮೇಲ್ಛಾವಣಿಯಲ್ಲಿ ಕಂಚಿನ 6.5 ಮೀ ಉದ್ದದ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಪಾರಂಪರಿಕ ಸಂಸತ್ತಿನ ಕಟ್ಟಡದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಸಂಸತ್ ಕಟ್ಟಡ ತ್ರಿಕೋನ ಆಕಾರದಲ್ಲಿದೆ. ಈ ರಾಷ್ಟ್ರ ಲಾಂಛನವು ಕಟ್ಟಡದ ಮೇಲ್ಭಾಗದಲ್ಲಿ ಕಿರೀಟದಂತಿದೆ.

ಇದನ್ನೂ ಓದಿ: PM Modi Varanasi Visit: ವಾರಾಣಸಿಗೆ ಇಂದು ಪ್ರಧಾನಿ ಮೋದಿ ಭೇಟಿ; 1,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

2021ರ ಜನವರಿಯಲ್ಲಿ 971 ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ಪ್ರಾರಂಭವಾದ ಸಂಸತ್ ಕಟ್ಟಡ ನಿರ್ಮಾಣ ಯೋಜನೆಯು ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿ ಪೂರ್ಣಗೊಳ್ಳಲಿದೆ. ಈ ಹೊಸ ಕಟ್ಟಡವು ಲೋಕಸಭೆಯಲ್ಲಿ 888 ಸದಸ್ಯರಿಗೆ, ರಾಜ್ಯಸಭೆಯಲ್ಲಿ 384 ಮತ್ತು ಜಂಟಿ ಅಧಿವೇಶನಕ್ಕಾಗಿ 1,272 ಸ್ಥಾನಗಳಿಗೆ ಅವಕಾಶ ಕಲ್ಪಿಸಲಿದೆ.

Published On - 1:29 pm, Mon, 11 July 22

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ