ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಗಳಿಗೆ 50ಕ್ಕೂ ಅಧಿಕ ಬಾರಿ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.
ತ್ರಿಪುರಾ, ನಾಗಾಲ್ಯಾಂಡ್ ಸೇರಿ ಈಶಾನ್ಯ ರಾಜ್ಯಗಳ ಇತ್ತೀಚಿನ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷಕ್ಕೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಅಲ್ಲಿಯ ಜನರು ಹಾಗೂ ಪ್ರಧಾನಿಗೆ ಶುಭಾಶಯವನ್ನು ಕೋರಿರುವ ಕಿಶನ್ ರೆಡ್ಡಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನಮನ್ನಣೆ ದೊರೆತಿದೆ.
ಹೀಗಾಗಿ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ಕಾಣಬಹುದು. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷಿಸಲಾಗಿತ್ತು. ಆದರೆ ಈಗ ಎಲ್ಲಾ ಈಶಾನ್ಯ ರಾಜ್ಯಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ.
ಇಂತಹ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಜೆಪಿ ನಡ್ಡಾ ನೇತೃತ್ವದಲ್ಲಿ ಪಕ್ಷವು ಯಶಸ್ವಿ ಅಭಿಯಾನ ಮಾಡಿದೆ ಎಂದು ಹೇಳಿದ್ದಾರೆ. ತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.
ಮತ್ತಷ್ಟು ಓದಿ: Tripura Election Results: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ? ಯಾರಿದು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?
ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ 3 ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಬಹುಮತ ಪಡೆದಿದೆ. ಬಿಜೆಪಿ ಮೈತ್ರಿಕೂಟ ನಾಗಾಲ್ಯಾಂಡ್‌ನಲ್ಲಿ 37 ಮತ್ತು ತ್ರಿಪುರಾದಲ್ಲಿ 33 ಸ್ಥಾನಗಳನ್ನು ಪಡೆದುಕೊಂಡಿದೆ. ಮತ್ತೊಂದೆಡೆ, ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ ಮೇಘಾಲಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿದೆ. ಎನ್‌ಪಿಪಿ ತನ್ನ ಖಾತೆಯಲ್ಲಿ ಕೇವಲ 26 ಸ್ಥಾನಗಳನ್ನು ಪಡೆದುಕೊಂಡಿದೆ.
ಇಂಗ್ಲಿಷ್ನಲ್ಲಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಚುನಾವಣೆಗೂ ಮುನ್ನ ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದ ಎನ್ ಪಿಪಿ ಮತ್ತೊಮ್ಮೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದು, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ ಸರ್ಕಾರ ರಚಿಸಲು ಸಹಾಯ ಕೋರಿದ್ದಾರೆ.
ಕಾನ್ರಾಡ್ ಸಂಗ್ಮಾ ಕೂಡ ಟ್ವೀಟ್ ಮಾಡುವ ಮೂಲಕ ಬಿಜೆಪಿ ಬೆಂಬಲವನ್ನು ಖಚಿತಪಡಿಸಿದ್ದಾರೆ. ಬೆಂಬಲ ನೀಡಿದ ಬಿಜೆಪಿಗೆ ಕೃತಜ್ಞತೆ ಸಲ್ಲಿಸಿದರು. ಮೇಘಾಲಯಕ್ಕೆ ಸೇವೆ ಸಲ್ಲಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಫೆಬ್ರವರಿ 16 ರಂದು 60 ಸ್ಥಾನಗಳಲ್ಲಿ 86.10% ಮತದಾನವಾಗಿದೆ. ಇದು ಕಳೆದ ಚುನಾವಣೆಗಿಂತ ಶೇ.4ರಷ್ಟು ಕಡಿಮೆಯಾಗಿದೆ. 2018 ರಲ್ಲಿ ತ್ರಿಪುರಾದ 59 ಸ್ಥಾನಗಳಲ್ಲಿ 90% ಮತದಾನವಾಗಿತ್ತು. ಬಿಜೆಪಿ 35 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದರೊಂದಿಗೆ 25 ವರ್ಷಗಳ ಎಡಪಕ್ಷಗಳ ಭದ್ರಕೋಟೆಯನ್ನು ಬಿಜೆಪಿ ನೆಲಸಮಗೊಳಿಸಿತ್ತು. ಕಳೆದ ಚುನಾವಣೆಯಲ್ಲಿ ವಿಜಯದ ನಂತರ, ಪಕ್ಷವು ಬಿಪ್ಲಬ್ ದೇವ್ ಅವರನ್ನು ಸಿಎಂ ಮಾಡಿತು, ಆದರೆ ಮೇ 2022 ರಲ್ಲಿ ಮಾಣಿಕ್ ಸಹಾ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಸಹಾ ಅವರ ನೇತೃತ್ವದಲ್ಲಿ ಪಕ್ಷವು ಚುನಾವಣೆಗೆ ಸ್ಪರ್ಧಿಸಿದೆ.
ಮೇಘಾಲಯದಲ್ಲಿ ಫೆಬ್ರವರಿ 27 ರಂದು 60 ಸ್ಥಾನಗಳ ಪೈಕಿ 59 ರಲ್ಲಿ ಮತದಾನ ನಡೆಯಿತು. 85.27 ರಷ್ಟು ಮತದಾನ ನಡೆದಿದೆ. ಯುಡಿಪಿ ಅಭ್ಯರ್ಥಿ ಎಚ್‌ಡಿಆರ್ ಲಿಂಗ್ಡೋಹ್ ಅವರ ನಿಧನದಿಂದಾಗಿ ಸೊಹಿಯೊಂಗ್ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ. 2018 ರಲ್ಲಿ 67% ಮತದಾನವಾಗಿತ್ತು. ಈ ಬಾರಿ ಎನ್‌ಪಿಪಿ 57, ಕಾಂಗ್ರೆಸ್ ಮತ್ತು ಬಿಜೆಪಿ ತಲಾ 60 ಮತ್ತು ಟಿಎಂಸಿ 56 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ