ಪಂಜಾಬ್​ನ ಅದಂಪುರ ವಾಯುನೆಲೆಯಲ್ಲಿ ಸೈನಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ

ಭಾರತ-ಪಾಕಿಸ್ತಾನ ಕದನವಿರಾಮದ ಬಳಿಕ ಇಂದು ಬೆಳಗ್ಗೆ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ವಾಯುಪಡೆಯ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಹಾಗೇ, ಅಲ್ಲಿನ ಸೈನಿಕರ ಜೊತೆ ಕಾಲ ಕಳೆದು, ಸಂವಾದ ನಡೆಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿದ್ದಾರೆ. ಭಾರತದ "ಆಪರೇಷನ್ ಸಿಂಧೂರ್" ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು.

ನವದೆಹಲಿ, ಮೇ 13: ಭಾರತ-ಪಾಕಿಸ್ತಾನ ಕದನ ವಿರಾಮ (India-Pakistan Ceasefire) ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಬೆಳಗ್ಗೆ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ. ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಭಾರತದ “ಆಪರೇಷನ್ ಸಿಂಧೂರ್” ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ
ಪ್ರಧಾನಿ ಮೋದಿ ಈ ವಿಚಾರಗಳನ್ನು ಗೆಲ್ಲಲೇಬೇಕು, ಎಚ್ಚರ ತಪ್ಪಿದ್ರೆ ಸಂಕಷ್ಟ!
ಭಾರತ-ಪಾಕ್ ಕದನ ವಿರಾಮಕ್ಕೆ ಏಕಾಏಕಿ ಸಿದ್ಧರಾಗಿದ್ದೇಕೆ?
ಪಾಕ್​ ದಾಳಿ: ಅವಳಿ ಮಕ್ಕಳ ಸಾವು, ತಂದೆ ಐಸಿಯುನಲ್ಲಿ, ಇಡೀ ಕುಟುಂಬವೇ ನಾಶ
ನರೇಂದ್ರ ಮೋದಿ ಅವರಿಂದ ರವಾನೆಯಾದ ಸಂದೇಶಗಳೇನು?

ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿದರು. ವಾಯುಪಡೆಯ ಸಿಬ್ಬಂದಿ ಅವರಿಗೆ ವಾಯುಪಡೆಯ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು ಮತ್ತು ಯೋಧರೊಂದಿಗೆ ಮೋದಿ ಸಂವಾದ ನಡೆಸಿದರು. ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ದಾಳಿಯಿಂದ ಸ್ವಲ್ಪ ಹಾನಿಗೊಳಗಾದ ಭಾರತೀಯ ವಾಯುಪಡೆಯ (ಐಎಎಫ್) ನಾಲ್ಕು ಪ್ರಮುಖ ಕೇಂದ್ರಗಳಲ್ಲಿ ಅದಂಪುರ ವಾಯುನೆಲೆಯೂ ಒಂದು. ಉಧಂಪುರ, ಪಠಾಣ್‌ಕೋಟ್, ಅದಂಪುರ ಮತ್ತು ಭುಜ್ ವಾಯುನೆಲೆಗಳಲ್ಲಿ ಪಾಕಿಸ್ತಾನ ದಾಳಿಗೆ ಯತ್ನಿಸಿತ್ತು.

ಇದನ್ನೂ ಓದಿ: Narendra Modi Speech Highlights: ಆಪರೇಷನ್ ಸಿಂದೂರ ನಿಂತಿಲ್ಲ: ಉಗ್ರರು, ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ

ಪಾಕಿಸ್ತಾನವು ಜೆಎಫ್ -17 ಯುದ್ಧ ವಿಮಾನಗಳಿಂದ ಹಾರಿಸಲಾದ ಹೈಪರ್ಸಾನಿಕ್ ಕ್ಷಿಪಣಿಗಳು ಭಾರತದ ಎಸ್ -400 ವಾಯು ರಕ್ಷಣಾ ವ್ಯವಸ್ಥೆಯನ್ನು ಅದಂಪುರದಲ್ಲಿ ನಾಶಪಡಿಸಿವೆ ಎಂದು ಹೇಳಿಕೊಂಡಿತ್ತು. ಆದರೆ ಭಾರತೀಯ ಅಧಿಕಾರಿಗಳು ಈ ಆರೋಪವನ್ನು ತಿರಸ್ಕರಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಯೋಧರೊಂದಿಗೆ ನಡೆಸಿದ ಸಂವಾದದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನು “ಬಹಳ ವಿಶೇಷ ಅನುಭವ” ಎಂದು ಕರೆದಿದ್ದಾರೆ.

“ಇಂದು ಬೆಳಿಗ್ಗೆ, ನಾನು ಎಎಫ್‌ಎಸ್ ಆದಂಪುರಕ್ಕೆ ಹೋಗಿ ನಮ್ಮ ಧೈರ್ಯಶಾಲಿ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವ ಸೈನಿಕರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ರಾಷ್ಟ್ರಕ್ಕಾಗಿ ನಮ್ಮ ಸಶಸ್ತ್ರ ಪಡೆಗಳು ಮಾಡುವ ಎಲ್ಲ ಸೇವೆ ಮತ್ತು ತ್ಯಾಗಕ್ಕೂ ಭಾರತವು ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ರಕ್ತ, ನೀರು ಒಟ್ಟಿಗೆ ಹರಿಯಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

ಪಾಕಿಸ್ತಾನ ಸೇನೆಯ ವಿರುದ್ಧ ಕಾರ್ಯಾಚರಣೆಗಳನ್ನು ನಡೆಸಿದ ಯುದ್ಧ ವಿಮಾನ ಪೈಲಟ್‌ಗಳು ಮತ್ತು ತಾಂತ್ರಿಕ ಬೆಂಬಲ ಸಿಬ್ಬಂದಿಯನ್ನು ಪ್ರಧಾನಿ ಮೋದಿ ಭೇಟಿಯಾದರು. ಪ್ರಧಾನಿ ಮೋದಿ ಸ್ವತಃ ವಾಯುಪಡೆಯ ಯೋಧರನ್ನು ಭೇಟಿಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ಮೋದಿ ಇಂದು ಬೆಳಿಗ್ಗೆ 7 ಗಂಟೆಗೆ ದೆಹಲಿಯ ಪಾಲಂ ವಾಯುನೆಲೆಯಿಂದ ಆದಂಪುರಕ್ಕೆ ತೆರಳಿದರು. ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಕೂಡ ಮೋದಿಯವರೊಂದಿಗೆ ಇದ್ದರು. ಪ್ರಧಾನಿ ಮೋದಿ ವಾಯುಪಡೆಯ ಸಿಬ್ಬಂದಿಯೊಂದಿಗೆ ಸುಮಾರು 1 ಗಂಟೆ ಕಾಲ ಕಳೆದರು. ಆದಂಪುರ ವಾಯುನೆಲೆಯು ವಾಯುಪಡೆಯ ಮಿಗ್ 29 ಯುದ್ಧ ವಿಮಾನಗಳ ನೆಲೆಯಾಗಿದೆ.


ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಅದಾದ ಸಂಜೆಯೇ ಆ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿತ್ತು. ಭಾರತೀಯ ಸೇನೆಯು ಈ ಗಡಿ ಒಳನುಗ್ಗುವಿಕೆಗೆ ಪ್ರತೀಕಾರ ತೀರಿಸಿಕೊಂಡಿತ್ತು.

ನಿನ್ನೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿ 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದ ಆಪರೇಷನ್ ಸಿಂಧೂರ್‌ನ ಉದ್ದೇಶಗಳನ್ನು ಸಾಧಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಅಚಲ ಧೈರ್ಯವನ್ನು ಪ್ರದರ್ಶಿಸಿವೆ ಎಂದು ಹೇಳಿದರು. ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಲಷ್ಕರ್-ಎ-ತೈಬಾ (ಎಲ್‌ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಭಯೋತ್ಪಾದಕ ಗುಂಪುಗಳ ಬಹು ಶಿಬಿರಗಳನ್ನು ನಾಶಪಡಿಸಿದವು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನಿ ಸೇನೆಯು ಭಾರತದ ಪಶ್ಚಿಮ ಭಾಗಗಳಲ್ಲಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿತು. ಅವುಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಯಿತು. ನಂತರ ಭಾರತವು ಪಾಕಿಸ್ತಾನದ ಪ್ರದೇಶದೊಳಗೆ ಆಯ್ದ ಮಿಲಿಟರಿ ಗುರಿಗಳನ್ನು ಹೊಡೆದುರುಳಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:33 pm, Tue, 13 May 25