ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. […]

ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​
ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​

Updated on: Jun 30, 2020 | 5:14 PM

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. ಸರ್ಕಾರದ ವೈಜ್ಞಾನಿಕ ಸಲಹೆಗಾರರು, PMO ಅಧಿಕಾರಿಗಳು, ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಚೀನಾ ಬಗ್ಗೆ ಪ್ರಸ್ತಾಪ?
ಗಡಿಯಲ್ಲಿ ಚೀನಾದ ಕಾಟ, ದೇಶದಲ್ಲಿ ಚೀನಿ ವೈರಸ್ ಕಾಟವಿದೆ. ಹಾಗಾಗಿ ಚೀನಾ ವಿರುದ್ಧದ ಸಮರದಲ್ಲಿ ಗೆಲ್ಲಬೇಕೆಂಬ ಸಂದೇಶ ರವಾನೆ ಮಾಡುವ ಸಾಧ್ಯತೆ ಇದೆ. ಚೀನಿ ಆ್ಯಪ್ ಬ್ಯಾನ್ ಮಾಡಿರುವ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಮೋದಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್

Published On - 3:49 pm, Tue, 30 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us