AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Speech: ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

PM Modi Address the Nation: ಇಂದು (ನವೆಂಬರ್ 19) ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದಿನ ಅವರ ಕಾರ್ಯಾಲಾಪಗಳ ಮಾಹಿತಿ ಇಲ್ಲಿದೆ.

Narendra Modi Speech: ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Nov 19, 2021 | 8:54 AM

Share

ಇಂದು (ನವೆಂಬರ್ 19) ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದ್ದು, ಮಾಹಿತಿ ಹಂಚಿಕೊಂಡಿದೆ. ಪ್ರಧಾನ ಮಂತ್ರಿಗಳ ಇಂದಿನ ಕಾರ್ಯಾಲಾಪಗಳ ಪಟ್ಟಿ ಬಿಡುಗಡೆ ಮಾಡಿರುವ ಪಿಎಮ್​ಒ, ಉತ್ತರ ಪ್ರದೇಶ ಪ್ರವಾಸದ ಮಾಹಿತಿ ಹಂಚಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ, ನಂತರ ಝಾನ್ಸಿಯಲ್ಲಿ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ​’ನಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು ಭಾರತದಲ್ಲೇ ತಯಾರಿಸಲಾದ ರಕ್ಷಣಾ ಸಾಮಗ್ರಿಗಳನ್ನು ಸೇನೆಗೆ ಹಸ್ತಾಂತರಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಗುರು ನಾನಕ್ ಅವರ ಜಯಂತಿಯ ಕುರಿತೂ ತಿಳಿಸಲಾಗಿದೆ.

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಇಂದು ಝಾನ್ಸಿಯಲ್ಲಿ ಸಶಸ್ತ್ರ ಪಡೆಗಳಿಗೆ ಭಾರತದಲ್ಲೇ ತಯಾರಾದ ಹೆಲಿಕಾಫ್ಟರ್, ಡ್ರೋನ್​ಗಳನ್ನು ಹಸ್ತಾಂತರಿಸಲಿರುವ ಪ್ರಧಾನಿ: ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಅಭಿಯಾನವನ್ನು ಸರ್ಕಾರ ನಡೆಸುತ್ತಿದೆ. ಇದರ ಅಂಗವಾಗಿ ಝಾನ್ಸಿಯಲ್ಲಿ ನಡೆಯುತ್ತಿರುವ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ’ದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು, ಹಿಂದೂಸ್ತಾನ್ ಏರೊನಾಟಿಕ್ಸ್​ ಲಿಮಿಟೆಡ್ (ಎಚ್​ಎಎಲ್) ಅಭಿವೃದ್ಧಿಪಡಿಸಿರುವ ಯುದ್ಧ ಹೆಲಿಕಾಪ್ಟರ್​ಗಳನ್ನು ವಾಯುಪಡೆ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಇದರೊಂದಿಗೆ ಭಾರತದ ನವೋದ್ಯಮ ಅಭಿವೃದ್ಧಿಪಡಿಸಿರುವ ಡ್ರೋಣ್ ಮತ್ತು ಮಾನವ ರಹಿತ ವೈಮಾನಿಕ ಉಪಕರಣಗಳನ್ನು ಸೇನಾ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ. ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಎಲೆಕ್ಟ್ರಾನಿಕ್ ಯುದ್ಧೋಪಕರಣಗಳನ್ನು ನೌಕಾಪಡೆ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ.

ಇದನ್ನೂ ಓದಿ:

Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ

Tirupathi: ಭಾರಿ ಮಳೆಯಿಂದ ಟಿಟಿಡಿಯ 2 ಘಾಟ್​ಗಳು ಕ್ಲೋಸ್; ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ

Published On - 8:32 am, Fri, 19 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?