ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

All Party Meeting: 17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Nov 22, 2021 | 4:27 PM

ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 (ಭಾನುವಾರ) ಸರ್ವಪಕ್ಷಗಳ ಸಭೆ (All-Party Meet) ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನ ನವೆಂಬರ್​ 29ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್​ 23ಕ್ಕೆ ಮುಕ್ತಾಯವಾಗಲಿದೆ. ಅದಕ್ಕೂ ಮೊದಲು ಪ್ರಧಾನಮಂತ್ರಿ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಲಿದ್ದಾರೆ.

17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಇನ್ನು ರಾಜ್ಯಸಭೆಯಲ್ಲೂ ಕೂಡ ಅದೇ ಸಮಯದಲ್ಲಿ ಅಧಿವೇಶನ ಪ್ರಾರಂಭಗೊಳ್ಳಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿಚಾರ, ರೈತರ ಪ್ರತಿಭಟನೆ ವಿಷಯಗಳನ್ನು ಪ್ರಸ್ತಾಪ ಮಾಡುವ ಬಗ್ಗೆ ಪ್ರತಿಪಕ್ಷಗಳು ಸಿದ್ಧತೆ ನಡೆಸಿದ್ದರು. ಆದರೆ ಮೊನ್ನೆ ಶುಕ್ರವಾರ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ, ನವೆಂಬರ್​ 24ರಂದು ಅಂದರೆ ಚಳಿಗಾಲದ ಅಧಿವೇಶನ ಪ್ರಾರಂಭ ಆಗುವುದಕ್ಕೂ ಮೊದಲೇ ಅದನ್ನು ಸಂಸತ್ತಿನಲ್ಲಿಯೂ ರದ್ದುಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.  ಸಾಮಾನ್ಯವಾಗಿ ಪ್ರತಿ ಅಧಿವೇಶನಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುತ್ತದೆ. ಅಧಿವೇಶನದಲ್ಲಿ ಸೌಹಾರ್ದಯುತವಾಗಿ ವರ್ತಿಸಬೇಕು..ಸಹಕಾರ ಕೊಡಬೇಕು ಎಂದು ಮನವಿ ಮಾಡುವ ನಿಟ್ಟಿನಲ್ಲಿ ಈ ಸಭೆ ನಡೆಯುತ್ತದೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ನೆರವು ಸಿಗದೇ ಹೋಗಿದ್ದರೆ, ತಂದೆ-ಮಗ ತಮ್ಮ ಹುಚ್ಚು ಸಾಹಸಕ್ಕೆ ಭಾರಿ ಬೆಲೆ ತೆರಬೇಕಾಗುತಿತ್ತು!

Published On - 4:25 pm, Mon, 22 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ