ಏಪ್ರಿಲ್ 24ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಳಗ್ಗೆ 11.30ಕ್ಕೆ ಮಧ್ಯಪ್ರದೇಶದ (Madhya Pradesh) ರೇವಾ ತಲುಪಲಿದ್ದು ಅಲ್ಲಿ ರಾಷ್ಟ್ರೀಯ ಪಂಚಾಯತಿ ರಾಜ್ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಅವರು 17,000 ಕೋಟಿಯಷ್ಟು ಮೊತ್ತದ ಯೋಜನೆಗೆ ಶಂಕು ಸ್ಥಾಪನೆ ಮಾಡಲಿದ್ದು, ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಏಪ್ರಿಲ್ 25ರಂದು ಬೆಳಗ್ಗೆ 10.30ಕ್ಕೆ ಅವರು ಕೇರಳದ(Kerala) ರಾಜಧಾನಿ ತಿರುವನಂತಪುರಂ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಸುಮಾರು 11 ಗಂಟೆಯ ಹೊತ್ತಿಗೆ ಅಲ್ಲಿನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 3200 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.
ಸಂಜೆ 4ಗಂಟೆಗೆ ಅವರು ದಾದರ್ ಮತ್ತು ನಾಗರ್ ಹವೇಲಿಗೆ ಭೇಟಿ ನೀಡಲಿದ್ದು ಅಲ್ಲಿ ನಮೋ ಮೆಡಿಕಲ್ ಎಡ್ಯುಕೇಷನ್ ಆಂಡ್ ರಿಸರ್ಚ್ ಇನ್ಸಿಟ್ಯೂಟ್ ಗೆ ಭೇಟಿ ನೀಡಲಿದ್ದಾರೆ. ,ಸಿಲ್ವಾಸಾದಲ್ಲಿ 4850 ಕೋಟಿಗಿಂತಲೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ನಂತರ, ಸಂಜೆ 6 ಗಂಟೆ ಸುಮಾರಿಗೆ, ಪ್ರಧಾನಮಂತ್ರಿಯವರು ದಮನ್‌ನಲ್ಲಿ ದೇವಕಾ ಸೀಫ್ರಂಟ್ ಅನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಮಂತ್ರಿಯವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ಪಂಚಾಯತ್ ಮಟ್ಟದಲ್ಲಿ ಸಾರ್ವಜನಿಕ ಸಂಗ್ರಹಣೆಗಾಗಿ ಸಂಯೋಜಿತ eGramSwaraj ಮತ್ತು GeM ಪೋರ್ಟಲ್ ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಸರ್ಕಾರದ ಯೋಜನೆಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಜನರ ಸಹಭಾಗಿತ್ವವನ್ನು ಮುಂದಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಪ್ರಧಾನಮಂತ್ರಿಯವರು ವಿಕಾಸ ಕಿ ಓರ್ ಸಾಝೇ ಕದಮ್ ಎಂಬ ಅಭಿಯಾನವನ್ನು ಅನಾವರಣಗೊಳಿಸಲಿದ್ದಾರೆ.
ಪ್ರಧಾನಿಯವರು ಸುಮಾರು 35 ಲಕ್ಷ SVAMITVA ಆಸ್ತಿ ಕಾರ್ಡ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದಾರೆ ‘ಎಲ್ಲರಿಗೂ ವಸತಿ’ ಗುರಿ ಹೊಂದಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ್ ಅಡಿಯಲ್ಲಿ 4 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ‘ಗೃಹ ಪ್ರವೇಶ’ವನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಸಂಘರ್ಷ ಪೀಡಿತ ಸುಡಾನ್ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆಗೆ ಸಿದ್ಧತೆ ನಡೆಸಿ: ಮೋದಿ
ಸುಮಾರು 2300 ಕೋಟಿ ರೂ.ಗಳ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಪ್ರದೇಶದಲ್ಲಿ 100 ಪ್ರತಿಶತ ರೈಲು ವಿದ್ಯುದ್ದೀಕರಣ, ವಿವಿಧ ಡಬ್ಲಿಂಗ್, ಗೇಜ್ ಪರಿವರ್ತನೆ ಮತ್ತು ವಿದ್ಯುದ್ದೀಕರಣ ಯೋಜನೆಗಳನ್ನು ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ ಪ್ರಧಾನಮಂತ್ರಿಯವರು ಗ್ವಾಲಿಯರ್ ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಜಲ ಜೀವನ್ ಮಿಷನ್ ಅಡಿಯಲ್ಲಿ ಸುಮಾರು 7,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ. ಈ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳನ್ನು ಒಳಗೊಂಡಿದೆ.
ಕೊಚ್ಚಿ ವಾಟರ್ ಮೆಟ್ರೋವನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದು ಕೊಚ್ಚಿಯ ಸುತ್ತಮುತ್ತಲಿನ 10 ದ್ವೀಪಗಳನ್ನು ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ದೋಣಿಗಳ ಮೂಲಕ ಕೊಚ್ಚಿ ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಸಂಪರ್ಕಿಸುತ್ತದೆ. ಕೊಚ್ಚಿ ವಾಟರ್ ಮೆಟ್ರೋ ಅಲ್ಲದೆ, ದಿಂಡಿಗಲ್-ಪಳನಿ-ಪಾಲಕ್ಕಾಡ್ ವಿಭಾಗದ ರೈಲು ವಿದ್ಯುದ್ದೀಕರಣವನ್ನು ಸಹ ಪ್ರಧಾನ ಮಂತ್ರಿಯವರು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಸಂದರ್ಭದಲ್ಲಿ, ತಿರುವನಂತಪುರಂ, ಕೋಝಿಕ್ಕೋಡ್, ವರ್ಕಲಾ ಶಿವಗಿರಿ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಸೇರಿದಂತೆ ವಿವಿಧ ರೈಲು ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಅಡಿಪಾಯ ಹಾಕಲಿದ್ದಾರೆ. ಇದಲ್ಲದೇ ತಿರುವನಂತಪುರಂನಲ್ಲಿ ಡಿಜಿಟಲ್ ಸೈನ್ಸ್ ಪಾರ್ಕ್‌ನ ಶಂಕುಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:40 pm, Fri, 21 April 23